ಪುತ್ತೂರು: ಅನುಮಾನಾಸ್ಪದ ರೀತಿಯಲ್ಲಿ ಮಹಿಳೆ ಶವ ಪತ್ತೆ
Team Udayavani, Mar 11, 2023, 5:22 AM IST
ಪುತ್ತೂರು : ಚಿಕ್ಕಮುಟ್ನೂರು ಗ್ರಾಮದ ಬೀರ್ನಹಿತ್ಲಿನಲ್ಲಿ ಮನೆಯಂಗಳದಲ್ಲೇ ಮಹಿಳೆ ಅನುಮಾನಾಸ್ಪದ ರೀತಿಯಲ್ಲಿ ಕೊರಗಪ್ಪ ಅವರ ಪತ್ನಿ ಗಿರಿಜಾ (45)ಅವರ ಶವ ಪತ್ತೆಯಾದ ಘಟನೆ ಮಾ. 10ರಂದು ಸಂಜೆ ಬೆಳಕಿಗೆ ಬಂದಿದೆ.
ಮನೆಯಲ್ಲಿ ಪತಿ ಮತ್ತು ಪತ್ನಿಯೊಂದಿಗೆ ಇಬ್ಬರು ಪುಟ್ಟ ಮಕ್ಕಳು ವಾಸಿಸುತ್ತಿದ್ದರು. ಶುಕ್ರವಾರ ಸಂಜೆ ವೇಳೆ ಗಿರಿಜಾ ಮನೆ ಅಂಗಳದಲ್ಲಿ ಬಿದ್ದಿರುವುದನ್ನು ಗಮನಿಸಿದ ನೆರೆಮನೆಯ ಮಹಿಳೆ ತತ್ಕ್ಷಣ ಪರಿಚಿತರಿಗೆ ಮಾಹಿತಿ ನೀಡಿದ್ದಾರೆ. ಘಟನೆ ಸ್ಥಳಕ್ಕೆ ಪೊಲೀಸರು ಹಾಗೂ ಪಂಚಾಯತ್ ಅಧ್ಯಕ್ಷರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಸಾವಿನ ಬಗ್ಗೆ ಅನುಮಾನ
ಪತಿ, ಪತ್ನಿ ಕೆಲಸಕ್ಕೆ ಹೋಗುತ್ತಿರಲಿಲ್ಲ. ಶುಕ್ರವಾರ ಇಬ್ಬರೂ ಮಕ್ಕಳ ಜತೆ ಮನೆಯಲ್ಲಿ ಇದ್ದರು. ಆದರೆ ಸಂಜೆ ಮಹಿಳೆ ಮನೆ ಅಂಗಳದಲ್ಲಿ ಬಿದ್ದಿದ್ದು ಈ ವೇಳೆ ಕೊರಗಪ್ಪ ಮನೆಯಲ್ಲಿ ಇರಲಿಲ್ಲ. ಸ್ಥಳೀಯರು, ಪೊಲೀಸರು ಹುಡುಕಾಟ ನಡೆಸಿದ್ದು ಈ ವೇಳೆ ಅವರು ಹತ್ತಿರದ ತೋಡಿನ ಬಳಿ ಕುಳಿತು ಜೋರಾಗಿ ಕಿರುಚಾಡುತ್ತಿದ್ದ ಎನ್ನಲಾಗಿದೆ. ಅಲ್ಲಿಂದ ಆತನನ್ನು ಕರೆ ತಂದಿದ್ದು ಪೊಲೀಸರು ವಿಚಾರಣೆಗೆ ಒಳಪಡಿಸಿರುವ ಮಾಹಿತಿ ಲಭ್ಯವಾಗಿದೆ. ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.