ಕಾಂಗ್ರೆಸ್‌ನಲ್ಲೂ ಹಲವರಿಗೆ ಕೊಕ್: ಮಹಿಳೆಯರು ಸಹಿತ ಐದಾರು ಶಾಸಕರಿಗಿಲ್ಲ ಟಿಕೆಟ್
Team Udayavani, Mar 11, 2023, 8:00 AM IST
ಬೆಂಗಳೂರು: ಬಿಜೆಪಿ ಯಂತೆ ಕಾಂಗ್ರೆಸ್‌ನಲ್ಲೂ ಅರ್ಧ ಡಜನ್ ಶಾಸಕರಿಗೆ ಟಿಕೆಟ್ ಕೈತಪ್ಪುವ ಆತಂಕವಿದೆ. ಗೆಲ್ಲುವ ಅರ್ಹತೆ ಜತೆಗೆ ಕ್ಷೇತ್ರದಲ್ಲಿ ಮುಂದಿನ 20ರಿಂದ 25 ವರ್ಷಗಳ ರಾಜಕಾರಣದ ದೃಷ್ಟಿಯಿಂದ ಕಾಂಗ್ರೆಸ್ ಪಕ್ಷವು ಹಾಲಿ ಶಾಸಕರ ಪೈಕಿ ಐದಾರು ಮಂದಿಗೆ ಟಿಕೆಟ್ ಕೊಡದಿರಲು ನಿರ್ಧರಿಸಿದ್ದು, ಇದರಲ್ಲಿ ಇಬ್ಬರು ಮಹಿಳೆ ಯರೂ ಸೇರಿದ್ದಾರೆ.
ಶಿಡ್ಲಘಟ್ಟ, ಲಿಂಗಸಗೂರು, ಪಾವ ಗಡ, ಅಫjಲ್‌ಪುರ, ಕುಂದಗೋಳ, ಕಲ ಬುರಗಿ ಉತ್ತರ ಕ್ಷೇತ್ರಗಳ ಶಾಸಕರಿಗೆ ಟಿಕೆಟ್ ಸಿಗುವುದು ಬಹುತೇಕ ಅನುಮಾನ. ಈಗಾಗಲೇ ಈ ಪೈಕಿ ಹಲವರಿಗೆ ರಾಜ್ಯ ನಾಯಕರು ಸಂದೇಶ ರವಾನಿಸಿದ್ದಾರೆ. ಇಲ್ಲೆಲ್ಲ ಹೊಸ ಪ್ರಯೋಗಕ್ಕೆ ಪಕ್ಷ ಮುಂದಾಗಿದೆ.
15 ಕಡೆ ಮಹಿಳೆಯರಿಗೆ ಟಿಕೆಟ್
ಸದ್ಯ ವಿಧಾನಸಭೆಯಲ್ಲಿ 6 ಮಹಿಳಾ ಸದಸ್ಯರಿದ್ದು, ಈ ಬಾರಿ ಮಹಿಳೆಯರಿಗೆ 15 ಕ್ಷೇತ್ರಗಳಲ್ಲಿ ಟಿಕೆಟ್ ನೀಡುವ ಸಾಧ್ಯತೆಯಿದೆ. ಇಲ್ಲೆಲ್ಲ ಸಂಭವನೀಯ ಅಭ್ಯರ್ಥಿಗಳನ್ನು ಗುರುತಿಸಲಾಗಿದೆ.
ಮುಸ್ಲಿಂ ಸಮುದಾಯಕ್ಕೆ 20 ಕ್ಷೇತ್ರಗಳಲ್ಲಿ ಟಿಕೆಟ್ ನೀಡಬೇಕೆಂಬ ಬೇಡಿಕೆ ಇದ್ದರೂ 12ರಿಂದ 15 ಕ್ಷೇತ್ರಗಳಿಗೆ ಸೀಮಿತವಾಗುವ ಸಾಧ್ಯತೆಗಳಿವೆ.
ಸಂಧಾನ
ಒಂದೇ ಕಡೆ ಐದಾರು ಆಕಾಂಕ್ಷಿಗಳಿ ರುವ ಕ್ಷೇತ್ರಗಳನ್ನು ಗುರುತಿಸಿ ಎಲ್ಲರನ್ನೂ ಒಟ್ಟಿಗೆ ಕರೆಸಿ ಸಂಧಾನ ನಡೆಸುವ ಪ್ರಕ್ರಿಯೆಗೆ ಚಾಲನೆ ದೊರೆತಿದೆ. ಚಿಕ್ಕಮಗಳೂರು ಕ್ಷೇತ್ರಕ್ಕೆ ಆಕಾಂಕ್ಷಿಗಳಾಗಿದ್ದವರನ್ನು ಕರೆಸಿ, ಟಿಕೆಟ್ ಕೊಡುವುದು ವರಿಷ್ಠರ ತೀರ್ಮಾನ, ಅದಕ್ಕೆ ಬದ್ಧರಾಗಿ ಕೆಲಸ ಮಾಡಬೇಕೆಂದು ಸೂಚಿಸಲಾಗಿದೆ. ಸಿ.ಟಿ. ರವಿ ಅವರನ್ನು ಸೋಲಿಸಲೇಬೇಕೆಂದು ಸಿದ್ದರಾಮಯ್ಯ ನಿರ್ಧರಿಸಿರುವುದರಿಂದ ಈ ಕ್ಷೇತ್ರವನ್ನು ಕಾಂಗ್ರೆಸ್ ಸವಾಲಾಗಿ ತೆಗೆದುಕೊಂಡಿದೆ. ಇತ್ತೀಚೆಗೆ ಪಕ್ಷ ಸೇರಿದ ತಮ್ಮಯ್ಯಗೆ ಟಿಕೆಟ್ ಸಿಗುವುದು ಖಾತರಿಯಾದ ಹಿನ್ನೆಲೆಯಲ್ಲಿ ಆಕಾಂಕ್ಷಿಗಳು ಮುನಿಸಿ ಕೊಂಡಿದ್ದರು. ಹೀಗಾಗಿ ಸಂಧಾನ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Police FIR: ಎಫ್ಐಆರ್ ದಾಖಲಿಸಿ ನನ್ನ ವಿರುದ್ಧ ಸರ್ಕಾರದಿಂದ ದ್ವೇಷ ಸಾಧನೆ: ಎಚ್‌ಡಿಕೆ
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
MUST WATCH
ಹೊಸ ಸೇರ್ಪಡೆ
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.