ಐಪಿಎಸ್ ಅಧಿಕಾರಿಯನ್ನು ವಿವಾಹವಾಗಲಿದ್ದಾರೆ ಪಂಜಾಬ್ ಸಚಿವ ಹರ್ಜೋತ್ ಸಿಂಗ್
Team Udayavani, Mar 13, 2023, 3:20 PM IST
ಚಂಡೀಗಡ: ಆಪ್ ಶಾಸಕ ಹರ್ಜೋತ್ ಸಿಂಗ್ ಬೈನ್ಸ್ ಅವರು ಐಪಿಎಸ್ ಅಧಿಕಾರಿ ಜ್ಯೋತಿ ಯಾದವ್ ಅವರೊಂದಿಗೆ ಈ ತಿಂಗಳ ಕೊನೆಯಲ್ಲಿ ವಿವಾಹವಾಗಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ದಂಪತಿಗಳು ಇತ್ತೀಚೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ಅವರು ಹೇಳಿದರು. ರೂಪನಗರ ಜಿಲ್ಲೆಯ ಆನಂದಪುರ ಸಾಹಿಬ್ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿರುವ ಬೈನ್ಸ್ ಅವರು ಪ್ರಸ್ತುತ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿದ್ದಾರೆ.
ಪಂಜಾಬ್ ಅಸೆಂಬ್ಲಿ ಸ್ಪೀಕರ್ ಕುಲ್ತಾರ್ ಸಿಂಗ್ ಸಂಧ್ವನ್ ಅವರು ಮುಂಬರುವ ದಿನಗಳಲ್ಲಿ ತಮ್ಮ ಜೀವನದ ಹೊಸ ಪ್ರಯಾಣವನ್ನು ಪ್ರಾರಂಭಿಸಲಿರುವ ಬೈನ್ಸ್ ಮತ್ತು ಜ್ಯೋತಿ ಯಾದವ್ ಅವರನ್ನು ಅಭಿನಂದಿಸಿದ್ದಾರೆ.
ವೃತ್ತಿಯಲ್ಲಿ ವಕೀಲರಾಗಿರುವ 32 ವರ್ಷದ ಬೈನ್ಸ್ ಆನಂದಪುರ ಸಾಹಿಬ್ ನ ಗಂಭೀರ್ ಪುರ ಗ್ರಾಮದವರು. 2017ರ ಚುನಾವಣೆಯಲ್ಲಿ ಸಾಹ್ನೇವಾಲ್ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು. ಬೇನ್ಸ್ ಈ ಹಿಂದೆ ರಾಜ್ಯದಲ್ಲಿ ಎಎಪಿಯ ಯುವ ಘಟಕವನ್ನು ಮುನ್ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.