ಸಿಎಂ ಪಟ್ಟಕ್ಕೆ ಸಿದ್ದು,ಡಿಕೆ ಕಾಳಗ: ಕಾಂಗ್ರೆಸ್ ವಿರುದ್ಧ ಅಸ್ಸಾಂ ಸಿಎಂ ಕಿಡಿ
ಕಾಂಗ್ರೆಸ್‌ನದ್ದು ಕೇವಲ ಹಗಲುಗನಸು :ಅಸ್ಸಾಂ ಸಿಎಂ ಹೇಮಂತ್ ಬಿಸ್ವಾ ಶರ್ಮಾ
Team Udayavani, Mar 14, 2023, 5:16 PM IST
ಕುರುಗೋಡು: ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಪಡೆಯುವ ಹಗಲು ಕನಸು ಕಾಣುತ್ತಿದ್ದಾರೆ. ಕಾಂಗ್ರೆಸ್‌ನಲ್ಲಿ ಸಿಎಂ ಪಟ್ಟಕ್ಕಾಗಿ ಇಬ್ಬರ ನಡುವೆ ಕಾಳಗ ಏರ್ಪಟ್ಟಿದ್ದು, ಇವರ ನಡುವಿನ ಕಾಳಗದಿಂದಾಗಿ ಕಾಣುತ್ತಿರುವ ಅಗಲು ಕನಸು ನುಚ್ವು ನೂರಾಗಲಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹೇಮಂತ್ ಬಿಸ್ವಾ ಶರ್ಮಾ ಅವರು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.
ಪಟ್ಟಣದಲ್ಲಿ ಮಂಗಳವಾರ ಮಾಜಿ ಶಾಸಕ ಸುರೇಶ್ ಬಾಬು ನೇತೃತ್ವದಲ್ಲಿ ಆಯೋಜಿಸಿದ್ದ ವಿಜಯ ಸಂಕಲ್ಪ ಯಾತ್ರೆಯ ರೋಡ್ ಶೋ ಕಾರ್ಯಕ್ರಮದಲ್ಲಿ ಮಾತನಾಡಿ, ಈಗಾಗಲೇ ಸಿಎಂ ಅಧಿಕಾರದ ಆಸೆಗಾಗಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಸೂಟ್ ಬೂಟ್ ಹೊಲಿಸಿ, ಕನಸು ಕಾಣುತ್ತಿದ್ದಾರೆ. ಅವರಿಬ್ಬರ ಕನಸು ನಸನಾಗುವುದಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರ ಸಾಕಷ್ಟು ಅಭಿವೃದ್ಧಿ ಕಾರ್ಯಗಳೊಂದಿಗೆ ದೇಶದ ಜನರ ಅಚ್ಚುಮೆಚ್ಚೆಗೆ ಪಾತ್ರವಾಗಿದೆ. ನರೇಂದ್ರ ಮೋದಿಯವರು ಜನಪರ ಕಾರ್ಯಗಳೊಂದಿಗೆ ಜಗತ್ತಿಗೆ ಮಾದರಿಯಾಗಿದ್ದಾರೆ. ಭಾರತ ದೇಶದಲ್ಲಿ ಅತಿಕ್ರಮಣಕ್ಕೆ ಮುಂದಾಗಿದ್ದ ಚೀನಾವನ್ನು ಎದುರಿಸಿ ಗುಂಡಿಗೆ ನರೇಂದ್ರ ಮೋದಿಯದ್ದಾಗಿದೆ. ಚೀನಾ ಉಪಟಳಕ್ಕೆ ಹೆಡೆ ಮುರಿಕಟ್ಟುತ್ತಿದ್ದಾರೆ. ಇಂತಹ ಬಿಜೆಪಿ ಸರ್ಕಾರವನ್ನು ರಾಜ್ಯ ಮತ್ತು ದೇಶದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ತರುವ ಮೂಲಕ ದೇಶದ ಅಭಿವೃದ್ಧಿಗೆ ಅಣಿಯಾಗಬೇಕು ಎಂದರು.
ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಸಿದ್ದರಾಮಯ್ಯ ಮುಂದಿನ ದಿನದಲ್ಲಿ ನಿವೃತ್ತಿಯಾಗುತ್ತಾರೆ. ಬಿಜೆಪಿ ಹಡಗು ತೇಲುತ್ತಿದೆ. ಕಾಂಗ್ರೆಸ್ ಹಡಗು ಮುಳುಗುತ್ತಿದೆ. ರಾಜ್ಯ ಸೇರಿದಂತೆ ದೇಶದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ಸಂಘಟನಾತ್ಮಕವಾಗಿ ಪಕ್ಷ ಬೆಳೆಯುತ್ತಿದೆ. ಬರುವ ಚುನಾವಣೆಯಲ್ಲಿ ಕಂಪ್ಲಿಯಲ್ಲಿ ಕಮಲ ಅರಳಲಿದೆ. ದೇಶದಲ್ಲಿ ಪರಿವರ್ತನೆಯ ಗಾಳಿ ಬೀಸಿದೆ. ಹುಟ್ಟಿನಿಂದ ಸಾವಿನವರೆಗೂ ಯೋಜನೆಗಳನ್ನು ಕೊಟ್ಟಿದ್ದು ನರೇಂದ್ರ ಮೋದಿಯವರು. ಕಂಪ್ಲಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ಕಣ್ಮರೆಯಾಗಿವೆ. ಕಂಪ್ಲಿಯಲ್ಲಿರುವ ಇಂತಹ ಚಿಂತಾಜನಕ ರಸ್ತೆಗಳನ್ನು ಎಲ್ಲಿಯೂ ನೋಡಿಲ್ಲ. ಶಾಸಕರು ಎಲ್ಲಿದ್ದಾರೇ, ಕಂಪ್ಲಿಯಲ್ಲಿ ಬಿಜೆಪಿ ಆರಿಸಿ, ಮಾದರಿ ಕ್ಷೇತ್ರಕ್ಕೆ ಅವಕಾಶ ಮಾಡಿಕೊಡಿ. ಡಬಲ್ ಇಂಜಿನ್ ಸರ್ಕಾರಕ್ಕೆ ಅವಕಾಶ ಕೊಡಿ. ನಿಮ್ಮ ಒಂದು ವೋಟು ಕರ್ನಾಟಕವನ್ನೇ ಪರಿವರ್ತನೆ ಮಾಡುತ್ತದೆ. ಮತ್ತು ಕಂಪ್ಲಿ ಕ್ಷೇತ್ರದಲ್ಲಿ ಜನಪ್ರಿಯ ನಾಯಕ ಟಿ.ಎಚ್.ಸುರೇಶ್ ಬಾಬು ಅವರನ್ನು ಗೆಲ್ಲಿಸಿ, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತರಬೇಕು ಎಂದರು.
ನಂತರ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಮಾತನಾಡಿ, ನಾನು ಮುಖ್ಯಮಂತ್ರಿಯಾಗಿದ್ದಾಗ ಕುರುಗೋಡು ಮತ್ತು ಕಂಪ್ಲಿ ತಾಲೂಕುಗಳನ್ನಾಗಿ ಮಾಡಿರುವೆ. ಕಾಂಗ್ರೆಸ್ ಸುಳ್ಳಿನ ರಾಜಕಾರಣ ಮಾಡುತ್ತಿದೆ. ಕಾಂಗ್ರೆಸ್ಗೆ ವೋಟು ಹಾಕಿದರೆ, ಕಸದ ಬುಟ್ಟಿಗೆ ಹಾಕಿದಂತೆ. ಕಾಂಗ್ರೆಸ್ನವರು ಅಧಿಕಾರದ ಅಗಲು ಕನಸು ಕಾಣುತ್ತಿದ್ದಾರೆ. ದೇಶ ಹಾಗೂ ರಾಜ್ಯದಲ್ಲಿ ಬಿಜೆಪಿ ಬಿರುಗಾಳಿ ಬೀಸಿದ್ದು, ಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಧೂಳಿಪಟವಾಗಲಿದೆ ಎಂದರು.
ತದನಂತರ ಮಾಜಿ ಶಾಸಕ ಟಿ.ಎಚ್.ಸುರೇಶ ಬಾಬು ಮಾತನಾಡಿ, ಕಳೆದ ಎರಡು ಅವಧಿಯಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳು ಕ್ಷೇತ್ರದ ಜನರ ಮನಸ್ಸಿನಲ್ಲಿ ಅಚ್ಚಹಸಿರು ಆಗಿ ಉಳಿದಿವೆ. ಕ್ಷೇತ್ರದಲ್ಲಿ ಹಾಲಿ ಶಾಸಕ ಇದ್ದರೂ, ಅಭಿವೃದ್ಧಿ ಕಾರ್ಯಕ್ಕೆ ಗರಬಡಿದಿದೆ. ಅತಿ ಶೀಘ್ರದಲ್ಲೇ ಸಾರ್ವತ್ರಿಕ ವಿಧಾನಸಭಾ ಚುನಾವಣೆಗಳು ಘೋಷಣೆಯಾಗುತ್ತವೆ. ಈ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ. ಆದ್ದರಿಂದ ಕ್ಷೇತ್ರದ ಜನರು ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡುವ ಮೂಲಕ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಆಶೀಸಬೇಕು ಎಂದರು.
ಈ ಸಂದರ್ಭದಲ್ಲಿ ಸಚಿವರಾದ ಬಿ.ಶ್ರೀರಾಮುಲು, ಸಿದ್ದರಾಜು, ಸಿದ್ದೇಶ್ ಯಾದವ್, ಸಂಸದ ವೈ.ದೇವೇಂದ್ರಪ್ಪ, ಮಾಜಿ ಸಂಸದರಾದ ಜೆ.ಶಾಂತ, ಎನ್.ಪಕ್ಕಿರಪ್ಪ, ಗುತ್ತಿಗನೂರು ವಿರೂಪಾಕ್ಷ ಗೌಡ, ಜಿಲ್ಲಾಧ್ಯಕ್ಷ ಮುರಾಹರಿಗೌಡ, ಕಂಪ್ಲಿ ಕ್ಷೇತ್ರದ ಮಂಡಲ ಅಧ್ಯಕ್ಷ ಅಳ್ಳಳ್ಳಿ ವೀರೇಶ್, ಪ್ರಧಾನ ಕಾರ್ಯದರ್ಶಿಗಳಾದ ಜಿ.ಸುಧಾಕರ, ಸುನೀಲ್ ಕುಮಾರ್, ಯುವ ಮೋರ್ಚ ಅಧ್ಯಕ್ಷ ನಟರಾಜಗೌಡ, ಜಿಲ್ಲಾ ಮುಖಂಡರಾದ ರಾಮಲಿಂಗಪ್ಪ, ಪ್ರೇಮ್ ಕುಮಾರ್ ಸೇರಿದಂತೆ ಮುಖಂಡರು, ಮಹಿಳೆಯರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.
ರೋಡ್ ಶೋ : ಪಟ್ಟಣದ ಶ್ರೀ ಗಾದಿಲಿಂಗಪ್ಪ ದೇವಸ್ಥಾನದಿಂದ ಆರಂಭಗೊಂಡ ಯಾತ್ರೆಯು ನಾಡ ಗೌಡರ ಮುಖ್ಯ ವೃತ್ತದ ಮೂಲಕ ಶ್ರೀ ದೊಡ್ಡ ಬಸವೇಶ್ವರ ದೇವಸ್ಥಾನದವರೆಗೆ ಸುಮಾರು ಒಂದುವರೆ ಕಿ.ಮಿ. ನಡೆದ ರೋಡ್ ಶೋನಲ್ಲಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮೀಣ ಭಾಗದ ಸಾವಿರಾರು ಕಾರ್ಯಕರ್ತರು, ಅಭಿಮಾನಿಗಳು ಸೇರಿದ್ದರು. ಈ ಯಾತ್ರೆಯಲ್ಲಿ ಮಹಿಳೆಯರು ಅಧಿಕ ಸಂಖ್ಯೆಯಲ್ಲಿ ಸಾಕ್ಷಿಯಾಗಿದ್ದು ಕಂಡುಬಂತು. ಮೆರವಣಿಗೆಯಲ್ಲಿ ಜಾನಪದ ಕಾಲಮೇಳ, ವಿವಿಧ ವಿಷಭೂಷಣ ದಾರಿಗಳು, ಕಹಳೆ, ಚೆಂಡೆ ವಾದ್ಯ ಮೇಳ, ತಾಳಗಳು, ಗೊಂಬೆಯಾಟದ ಆಕರ್ಷಣೆಯೊಂದಿಗೆ ಕಾರ್ಯಕರ್ತರ ಘೋಷಣೆ ಮೊಳಗಿತು. ಉರಿ ಬಿಸಿಲನ್ನು ಲೆಕ್ಕಿಸದೆ ಕಾರ್ಯಕರ್ತರು ಲವಲವಿಕೆಯಿಂದ ರೋಡ್ ಶೋದಲ್ಲಿ ಭಾಗವಹಿಸಿದ್ದರು. ವಿಜಯ ಸಂಕಲ್ಪ ಯಾತ್ರೆ ಪಟ್ಟಣದ ನಾಡಗೌಡರ ವೃತ್ತಕ್ಕೆ ಅಗಮಿಸುತ್ತಿದ್ದಂತೆ ಹಾಲುಮತ ಸಮಾಜ ಬಾಂಧವರು ಅಸ್ಸಾಂ ಮುಖ್ಯಮಂತ್ರಿ ಹೇಮಂತ್ ಬಿಸ್ವಾ ಶರ್ಮಾ ಅವರಿಗೆ ಕುರಿಮರಿ ನೀಡಿ ಕಂಬಳಿ ಹೊದಿಸಿ ಸನ್ಮಾನಿಸಿ ಗೌರವಿಸಿದರು. ಪಟ್ಟಣದ ವಿವಿಧೆಡೆಯಲ್ಲಿ ಕೇಸರಿಮಯವಾಗಿತ್ತು. ಬಿಜೆಪಿಯ ರೋಡ್ ಶೋ ಹಿನ್ನಲೆ ಪಟ್ಟಣದಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ
UGC; ಪದವಿ ಕಲಿಕೆ ಅವಧಿ ನಿರ್ಧಾರ ಆಯ್ಕೆ ಶೀಘ್ರ: ಚೇರ್ಮನ್ ಹೇಳಿದ್ದೇನು?
Bangladesh; ಚಿನ್ಮಯಿ ಕೃಷ್ಣದಾಸ್‌ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್ ಸ್ಪಷ್ಟನೆ
Bullet train ದೇಶದಲ್ಲಿಯೇ ನಿರ್ಮಾಣ: ಸಂಸತ್ತಿಗೆ ಕೇಂದ್ರ ಮಾಹಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.