ಎಲೆಕ್ಟ್ರಿಕಲ್ಸ್‌, ವೈಂಡರ್ಸ್‌ ಅಂಗಡಿಯಿಂದ ಕಳವು


Team Udayavani, Mar 15, 2023, 5:29 AM IST

THIEF

ಎಲೆಕ್ಟ್ರಿಕಲ್ಸ್‌, ವೈಂಡರ್ಸ್‌ ಅಂಗಡಿಯಿಂದ ಕಳವು

ಬೆಳ್ತಂಗಡಿ: ಚಿಬಿದ್ರೆಯ ಜೆ.ಕೆ. ಎಲೆಕ್ಟ್ರಿಕಲ್ಸ್‌ ಮತ್ತು ವೈಂಡರ್ಸ್‌ ಅಂಗಡಿಯೊಂದಕ್ಕೆ ನುಗ್ಗಿದ ಕಳ್ಳರು ಅಂಗಡಿಯೊಳಗಿದ್ದ ಕಾಫ‌ರ್‌ ವೇರ್‌ (ಸ್ಕ್ರಾಪ್‌ ) ಹಾಗೂ ಬೋರ್‌ವೆಲ್‌ಗೆ ಸಂಬಂಧಿಸಿದ ಸುಮಾರು 94 ಸಾವಿರ ರೂ. ಮೌಲ್ಯದ ಸೊತ್ತುಗಳನ್ನು ಕಳವುಗೈದಿದ್ದಾರೆ.

ತೋಟತ್ತಾಡಿ ಗ್ರಾಮದ ಡೊಂಬರಮಜಲು ಮನೆ ನಿವಾಸಿ ಜಯಾನಂದ ಡಿ. ಪೂಜಾರಿ ಅವರ ಮಾಲಕತ್ವದ ಜಿ.ಕೆ. ಅಂಗಡಿಯಿಂದ ಈ ಸೊತ್ತುಗಳು ಕಳವಾಗಿದೆ. ಮಾ. 12ರಂದು ಬೆಳಗ್ಗೆ ಅಂಗಡಿಗೆ ಬಂದು ನೋಡಿದಾಗ ಕಳವಾಗಿರುವುದು ತಿಳಿದುಬಂದಿದೆ.

ಕಳ್ಳರು ಅಂಗಡಿ ಬೀಗ ಮುರಿದು ಒಳಪ್ರವೇಶಿಸಿ ಅಂಗಡಿಯಲ್ಲಿದ್ದ ಸ್ಕ್ರಾಪ್‌ 20 ಕೆ.ಜಿ. ಮತ್ತು ರಿಪೇರಿಗೆ ತಂದಿದ್ದ ಬೋರ್‌ವೆಲ್‌ನ ಸಬ್‌ಮರ್ಸಿಬಲ್‌ ಮೋಟಾರ್‌ಗಳು 11 ಹಾಗೂ ಸಿಂಗಲ್‌ ಪೇಸ್‌ ಎರಡು ಎಚ್‌.ಪಿ.ಯ 2 ಮೋಟಾರ್‌ಗಳನ್ನು ಕಳವು ಮಾಡಿದ್ದಾರೆ. ಜಯಾನಂದ ಅವರು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

——

ಕೂಲಿ ಕಾರ್ಮಿಕ ಮಹಿಳೆ ಕುಸಿದು ಬಿದ್ದು ಸಾವು
ಬೆಳ್ತಂಗಡಿ: ಕೂಲಿ ಕೆಲಸಕ್ಕೆಂದು ಮಾ. 12ರಂದು ತೆರಳಿದ್ದ ಮಹಿಳೆಯೋರ್ವರು ಕುಸಿದು ಬಿದ್ದು, ಪ್ರಜ್ಞೆ ತಪ್ಪಿದವರನ್ನು ಕೂಡಲೇ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಮುಂಡಾಜೆ ಗ್ರಾಮದ ಸನ್ಯಾಸಿಕಟ್ಟೆ ನಿವಾಸಿ ಪಾರ್ವತಿ (55) ಮೃತಪಟ್ಟವರು. ಮುಂಡಾಜೆ ಗ್ರಾಮದ ಸೊಮಂತ್ತಡ್ಕ ನಿವಾಸಿಯೋರ್ವರ ಮನೆಯಲ್ಲಿ ಕೆಲಸ ಮಾಡುತ್ತಿರುವ ಸಮಯ ಕುಸಿದು ಬಿದ್ದು, ಪ್ರಜ್ಞೆ ಕಳೆದುಕೊಂಡಿದ್ದರು. ಅವರನ್ನು ಆರೈಕೆ ಮಾಡಿ ತತ್‌ಕ್ಷಣ ಚಿಕಿತ್ಸೆಗೆ ಕಕ್ಕಿಂಜೆ ಆಸ್ಪತ್ರೆಗೆ ಕರೆದೊಯ್ದು ಬಳಿಕ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿ, ಅಲ್ಲಿನ ವೈದ್ಯರ ಸಲಹೆಯಂತೆ ಮಂಗಳೂರು ವೆನ್ಲಾಕ್‌ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ. ಈ ಬಗ್ಗೆ ಅವರ ಪುತ್ರಿ ಪುಷ್ಪಾ ಅವರು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-gundya

Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು

11-bantwala

Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು

1

Sullia: ಬಿಎಸ್ಸೆನ್ನೆಲ್‌ ಟವರ್‌ಗೆ ಸೋಲಾರ್‌ ಪವರ್‌!

5-subrahmanya

Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ

ಧರ್ಮಾಧಿಕಾರಿ ಡಾ| ಹೆಗ್ಗಡೆ ಸರ್ವಜನರ ವಿಕಾಸಕ್ಕೆ ಸಾಕ್ಷಿ

ಧರ್ಮಾಧಿಕಾರಿ ಡಾ| ಹೆಗ್ಗಡೆ ಸರ್ವಜನರ ವಿಕಾಸಕ್ಕೆ ಸಾಕ್ಷಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.