ವಿಧಾನ ಕದನ 2023: ಉಭಯ ಪಕ್ಷಗಳಲ್ಲೂ ರಣೋತ್ಸಾಹ – ಸಮಾವೇಶಕ್ಕೆ ಜನ ಸೇರಿಸುವ ಟಾಸ್ಕ್

Team Udayavani, Mar 15, 2023, 7:27 AM IST

bjp cong

ಉಡುಪಿ: ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆ ರಂಗೇರುತ್ತಿದ್ದು ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷದ ರಾಜ್ಯ, ರಾಷ್ಟ್ರ ನಾಯಕರ ಪ್ರವಾಸದ ಜತೆಗೆ ಸಮಾವೇಶಗಳಿಗೆ ಜನ ಸೇರಿಸುವ ಹೊಣೆಗಾರಿಕೆ (ಟಾಸ್ಕ್) ಕೂಡ ಪ್ರಮುಖರಿಗೆ ನೀಡಲಾಗುತ್ತಿದೆ.

ಬಿಜೆಪಿ ಹಾಗೂ ಕಾಂಗ್ರೆಸ್‌ ಎರಡೂ ಪಕ್ಷಗಳಲ್ಲಿ ರಾಜ್ಯ, ರಾಷ್ಟ್ರಮಟ್ಟದ ನಾಯಕರ ಪ್ರವಾಸದಿಂದ ಚುನಾವಣೆ ಉತ್ಸಾಹ, ಹುಮ್ಮಸ್ಸು ದಿನೇ ದಿನೆ ಏರುತ್ತಲೇ ಇದೆ. ಕಚೇರಿಯ ಸಭೆಗೆ ಸೀಮಿತವಾಗಿದ್ದ ಪ್ರಚಾರ ಪ್ರಕ್ರಿಯೆ ಈಗ ವಾರ್ಡ್‌, ಗ್ರಾ.ಪಂ.ಗೂ ತಲುಪಿದೆ. ಮನೆ ಮನೆಗೂ ಪ್ರಮುಖರು ಭೇಟಿ ನೀಡುತ್ತಿದ್ದಾರೆ. ಕೆಲವರಿಗೆ ಮತದಾರರ “ಪ್ರೀತಿ”ಯೂ ಸಿಗುತ್ತಿದೆ.

ಎಲ್ಲಿ ಕಣ್ಣು ಹಾಯಿಸಿದರೂ ಬಿಜೆಪಿ, ಕಾಂಗ್ರೆಸ್‌ ಕರಪತ್ರಗಳು ಕಾಣ ಸಿಗುತ್ತಿವೆ. ಬಿಜೆಪಿಯಿಂದ ಪ್ರತೀ ವಿಧಾನಸಭಾ ಕ್ಷೇತ್ರಕ್ಕೂ ಕೇಂದ್ರ, ರಾಜ್ಯ ಸರಕಾರದ ಸಾಧನೆಯ ಜತೆಗೆ ಸ್ಥಳೀಯ ಶಾಸಕರ ಸಾಧನೆಯ ಕರಪತ್ರಗಳನ್ನು ಮುದ್ರಿಸಿ ನೀಡಲಾಗಿದೆ. ಕಾಂಗ್ರೆಸ್‌ನಿಂದ ಪ್ರತೀ ಕ್ಷೇತ್ರಕ್ಕೆ ಗ್ಯಾರೆಂಟಿ ಕಾರ್ಡ್‌ ಮುದ್ರಿಸಿ ಕೊಡಲಾಗಿದೆ. ಬಿಜೆಪಿಗರು 5 ವರ್ಷದ ಕಾರ್ಯಸಾಧನೆಯ ಕರಪತ್ರ ಹಿಡಿದು ಮನೆ ಬಾಗಿಲು ತಟ್ಟುತ್ತಿದ್ದರೆ, ಕಾಂಗ್ರೆಸಿಗರು ಗೆದ್ದರೆ ಮುಂದೇನು ಮಾಡುತ್ತೇವೆ ಎಂಬುದನ್ನು ಹೊತ್ತು ಮನೆ ಮನೆಗೆ ಹೋಗುತ್ತಿದ್ದಾರೆ.

ಪ್ರತಿಯೊಬ್ಬರಿಗೂ ನಿರ್ದಿಷ್ಟ ಗುರಿ
ರಾಜಕೀಯ ಸಮಾವೇಶಗಳಿಗೆ ಜನ ಮೊದಲಿನಂತೆ ಸೇರುತ್ತಿಲ್ಲ. ಮೋದಿ, ಅಮಿತ್‌ ಶಾ ಬಂದಾಗ ಸೇರುವಷ್ಟು ಜನ ಬೇರೆ ನಾಯಕರು ಬಂದಾಗ ಸೇರುತ್ತಿಲ್ಲ ಎಂಬುದು ಬಿಜೆಪಿ ನಾಯಕರ ಅರಿವಿಗೂ ಬಂದಿದೆ. ಹಾಗೆಯೇ ಕಾಂಗ್ರೆಸ್‌ ಪರಿಸ್ಥಿತಿಯೂ ಭಿನ್ನವಾಗಿಲ್ಲ. ಸಿದ್ದರಾಮಯ್ಯ ಬಂದಾಗ ಸೇರುವಷ್ಟು ಜನ ಬೇರೆ ನಾಯಕರು ಬಂದಾಗ ಒಟ್ಟಾಗುತ್ತಿಲ್ಲ. ಹೀಗಾಗಿ ಸಮಾವೇಶ ಆಯೋಜನೆಯ ಜತೆಗೆ ಕಾರ್ಯಕರ್ತರು, ಬೆಂಬಲಿಗರು, ಹಿತೈಷಿಗಳನ್ನು ಕರೆತರುವುದು ದೊಡ್ಡ ಸವಾಲಾಗಿದೆ. ಹಾಗಾಗಿ ಸಮಾವೇಶಕ್ಕೂ ಮೊದಲು ನಿರ್ದಿಷ್ಟ ಕ್ಷೇತ್ರಕ್ಕೆ ಪ್ರತ್ಯೇಕ ಉಸ್ತುವಾರಿ ನೇಮಿಸಿ, ಜವಾಬ್ದಾರಿ ಹಂಚಿಕೆ ಮಾಡಲಾಗುತ್ತಿದೆ. ಪ್ರತಿಯೊಬ್ಬರಿಗೂ ನಿರ್ದಿಷ್ಟ ಸಂಖ್ಯೆಯಲ್ಲಿ ಜನರನ್ನು ಕರೆದುಕೊಂಡು ಬರುವ ಟಾಸ್ಕ್ ನೀಡಲಾಗುತ್ತಿದೆ.

ನಡ್ಡಾ ಮತ್ತು ಸುರ್ಜೇವಾಲಾ
ಬಿಜೆಪಿಯ ಪರವಾಗಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಉಡುಪಿ, ಬೈಂದೂರು ಕ್ಷೇತ್ರದಲ್ಲಿ ನಡೆದ ಸಮಾವೇಶದಲ್ಲಿ ಭಾಗವಹಿಸಿ ಹುರುಪು ತುಂಬಿದ್ದರೆ, ಕಾಂಗ್ರೆಸ್‌ನ ರಾಜ್ಯ ಉಸ್ತುವಾರಿ ರಣದೀಪ್‌ ಸುಜೇìವಾಲಾ ಜಿಲ್ಲೆಗೆ ಭೇಟಿ ನೀಡಿ ಪ್ರಮುಖರ ಸಭೆ ನಡೆಸಿ ಕಾರ್ಯಕರ್ತರಲ್ಲಿ ಹುಮ್ಮಸ್ಸು ಮೂಡಿಸಿದ್ದಾರೆ.

ಸಮಾವೇಶ ವರ್ಸಸ್‌ ಸಮಾವೇಶ
ಬಿಜೆಪಿಯಿಂದ ಮಹಿಳಾ ಮೋರ್ಚಾ, ಯುವ ಮೋರ್ಚಾದ ಸಮಾವೇಶ ನಡೆಸಲಾಗಿದೆ. ಎಸ್ಸಿ, ಎಸ್ಟಿ ಮೋರ್ಚಾ, ಹಿಂದುಳಿದ ಮೋರ್ಚಾದ ಸಮಾವೇಶ ನಿಗದಿಯಾಗಿದೆ. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್‌ ಕೂಡ ತನ್ನ ಅಲ್ಪಸಂಖ್ಯಾಕರ ಘಟಕ, ಹಿಂದುಳಿದ ವರ್ಗಗಳ ಘಟಕ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಘಟಕದ ಪ್ರತ್ಯೇಕ ಸಮಾವೇಶ ನಡೆಸಲು ಚರ್ಚೆ ಆರಂಭಿಸಿದೆ. ಇದಕ್ಕಾಗಿ ಮಂಡಲ ಮಟ್ಟದಲ್ಲಿ ಪದಾಧಿಕಾರಿಗಳ ಸಭೆಯನ್ನು ನಡೆಸಲಾಗುತ್ತಿದೆ.

ಉತ್ಸವ, ಕ್ರೀಡಾಕೂಟ
ಎಲ್ಲ ಕ್ಷೇತ್ರವ್ಯಾಪ್ತಿಯಲ್ಲೂ ಕ್ರೀಡಾಕೂಟದ ಆಯೋಜನೆ, ಉತ್ಸವಗಳ ಪ್ರಮಾಣ ಹೆಚ್ಚಾಗುತ್ತಿದೆ. ಪ್ರತೀ ಶನಿವಾರ, ರವಿವಾರ ಬಹುತೇಕ ಎಲ್ಲ ಊರುಗಳಲ್ಲೂ ಕ್ರಿಕೆಟ್‌, ವಾಲಿಬಾಲ್‌, ಕಬಡ್ಡಿ ಹೀಗೆ ವಿವಿಧ ಕ್ರೀಡಾಕೂಟಗಳು ಆಯೋಜನೆಯಾಗುತ್ತಿವೆ. ರಾಜಕೀಯ ನಾಯಕರಿಗೆ ಅದರಲ್ಲೂ ಟಿಕೆಟ್‌ ಆಕಾಂಕ್ಷಿಗಳು ಈ ಅವಕಾಶವನ್ನು ತಪ್ಪಿಸಿಕೊಳ್ಳುತ್ತಿಲ್ಲ. ಒಟ್ಟಿನಲ್ಲಿ ಚುನಾವಣೆ ಕಾರಣಕ್ಕಾಗಿಯೇ ಕ್ರೀಡಾಕೂಟ, ಉತ್ಸವಗಳ ಮೇಲಾಟವೂ ನಡೆಯುತ್ತಿವೆ.

~  ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

8

Kundapura: ಬೋಟ್‌ ರೈಡರ್‌ ನಾಪತ್ತೆ; ಸಿಗದ ಸುಳಿವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Surjewala

Pegasus spyware ಬಗ್ಗೆ ಸುಪ್ರೀಂಕೋರ್ಟ್‌ ತನಿಖೆ ನಡೆಸಲಿ: ಸುರ್ಜೇವಾಲಾ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.