ಅನಧಿಕೃತ ಜಾಹೀರಾತು ಫಲಕ ತೆರವು, ಸಭೆ ಸಮಾರಂಭಗಳ ಮೇಲೆ ನಿಗಾ: ಡಿಸಿ ಸೂಚನೆ
Team Udayavani, Mar 15, 2023, 7:55 AM IST
ಮಂಗಳೂರು: ವಿಧಾನಸಭಾ ಚುನಾವಣೆ ಸದ್ಯದಲ್ಲೇ ಘೋಷಣೆಯಾಗುವ ಸಾಧ್ಯತೆ ಇದ್ದು, ನಿಷ್ಪಕ್ಷ ಚುನಾವಣೆ ನಡೆಸುವ ಉದ್ದೇಶದಿಂದ ಅನಧಿಕೃತ ಜಾಹೀರಾತು ಫಲಕ ತೆರವುಗೊಳಿಸುವುದರೊಂದಿಗೆ, ಸಾರ್ವಜನಿಕರ ಸಭೆ ಸಮಾರಂಭಗಳ ಮೇಲೆ ನಿಗಾ ಇರಿಸುವಂತೆ ಜಿಲ್ಲಾಧಿಕಾರಿ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಅನುಮತಿ ಪಡೆಯದೆ ಹಾಕಲಾಗಿರುವ ಬ್ಯಾನರ್- ಬಂಟಿಂಗ್ಸ್ ಮತ್ತು ಫ್ಲೆಕ್ಸ್, ಗೋಡೆ ಬರಹ ಮತ್ತು ಇತರ ಜಾಹಿರಾತುಗಳನ್ನು ತೆರವುಗೊಳಿಸಿ ಪ್ರತೀ ದಿನ ವರದಿ ಸಲ್ಲಿಬೇಕು. ನಗರ ಮತ್ತು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳು ಮತ್ತು ಸಂಬಂಧಪಟ್ಟ ಇಲಾಖೆಗಳ ಅನುಮತಿ ಪಡೆಯದೆ ರಾಜಕೀಯ ಪಕ್ಷ ಮತ್ತು ರಾಜಕೀಯ ವ್ಯಕ್ತಿಗಳು ಸಾರ್ವಜನಿಕ ಔತಣಕೂಟ ಏರ್ಪ ಡಿಸುವಂತಿಲ್ಲ. ಒಂದು ವೇಳೆ ಉಲ್ಲಂಘಿಸಿದಲ್ಲಿ ಸ್ಥಳೀಯ ಪ್ರಾಧಿಕಾರಗಳು, ಪೊಲೀಸ್ ಇಲಾಖೆ, ಅಬಕಾರಿ ಇಲಾಖೆ ಹಾಗೂ ಆರೋಗ್ಯ ಇಲಾಖೆಗಳು, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ, ಐಪಿಸಿ ಕಲಂ 171 ರಡಿಯಲ್ಲಿ ಹಾಗೂ ಸಂಬಂಧಪಟ್ಟ ಇತರ ಕಾಯ್ದೆಗಳ ಅಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು.
ಅನುಮತಿ ನೀಡುವಾಗ ಸಭೆ ಮುಕ್ತಾಯವಾದ ಅನಂತರ ಬ್ಯಾನರ್ -ಬಂಟಿಂಗ್ ತೆರವುಗೊಳಿಸಲು ಸೂಚಿಸಬೇಕು. ಕಾನೂನು ಸುವ್ಯವಸ್ಥೆ, ಸಾಮಾಜಿಕ ಅಶಾಂತಿ ಹಾಗೂ ಶಬ್ದಮಾಲಿನ್ಯ ಉಂಟುಮಾಡುವ ಯಾವುದೇ ಚಟುವಟಿಕೆ ಕಂಡು ಬಂದಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಕೊಂಡು, ಜಿಲ್ಲಾಡಳಿತಕ್ಕೆ ವರದಿ ನೀಡಲು ಡಿ.ಸಿ. ಸೂಚಿಸಿದ್ದಾರೆ.
ಇದಕ್ಕೆ ಸಂಬಂಧಪಟ್ಟ ಜಿಲ್ಲಾ ಮಟ್ಟದ ಅಧಿಕಾರಿಗಳು ಪ್ರತಿದಿನ ತಮ್ಮ ನೇತೃತ್ವದಲ್ಲಿ ಮೇಲು ಉಸ್ತುವಾರಿ ನಡೆಸಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಬೇಕು. ಈ ಕುರಿತ ವರದಿ ಪ್ರತಿದಿನ ಮತ್ತು ಒಟ್ಟಾರೆ ಮಾಹಿತಿ ಪ್ರತೀ ಶನಿವಾರ ಜಿ.ಪಂ. ಸಿಇಒ ಅವರಿಗೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್‌ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.