ಉಡುಪಿ: ಕಿನ್ನಿಮೂಲ್ಕಿ ಬಳಿಯ ಗುಜರಿ ಅಂಗಡಿಯಲ್ಲಿ ಅಗ್ನಿ ಅವಘಡ; ಅಪಾರ ಹಾನಿ
Team Udayavani, Mar 15, 2023, 10:03 AM IST
ಉಡುಪಿ: ಕಿನ್ನಿಮೂಲ್ಕಿ ಸ್ವಾಗತ ಗೋಪುರ ಸಮೀಪದ ಗುಜರಿ ಅಂಗಡಿಯೊಂದರಲ್ಲಿ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ಸುಮಾರು 12 ಗಂಟೆ ಹೊತ್ತಿಗೆ ಬೆಂಕಿ ಹೊತ್ತಿಕೊಂಡಿದ್ದು ತತ್ ಕ್ಷಣ ಉಡುಪಿ ಮತ್ತು ಮಲ್ಪೆಯ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಯಿತು.
ಪ್ಲಾಸ್ಟಿಕ್ ಜತೆಗೆ ಗುಜರಿ ಸಾಮಾನುಗಳು, ಕಚ್ಚಾ ತೈಲಗಳು ಕ್ಷಣಾರ್ಧದಲ್ಲಿ ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿವೆ. ಸಮೀಪದಲ್ಲೇ ಹಲವು ಮನೆಗಳಿರುವ ಈ ಪ್ರದೇಶದಲ್ಲಿ ವಾಹನಗಳನ್ನೂ ನಿಲ್ಲಿಸಲಾಗಿತ್ತು. ಅಗ್ನಿಶಾಮಕ ಸಿಬಂದಿಯ ಸಕಾಲದ ಕಾರ್ಯಾಚರಣೆಯಿಂದಾಗಿ ಭಾರೀ ಅವಘಡ ತಪ್ಪಿದೆ. ತಡರಾತ್ರಿ ಹೊತ್ತಿಕೊಂಡ ಬೆಂಕಿ ಮುಂಜಾನೆ ಹೊತ್ತಿಗೆ ನಿಯಂತ್ರಣಕ್ಕೆ ಬಂತು ಎಂದು ಸ್ಥಳೀಯರು ತಿಳಿಸಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.