ರಾಜ್ಯದ ಕೆಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ
ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ ಜತೆಗೆ ಉಷ್ಣಾಂಶವೂ ಏರಿಕೆ
Team Udayavani, Mar 16, 2023, 7:25 AM IST
ಬೆಂಗಳೂರು: ಬೆಂಗಳೂರು, ಮಂಗಳೂರು ಸೇರಿ ರಾಜ್ಯದ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಕರಾವಳಿಯ ಎಲ್ಲ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ರಾಮನಗರ, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆ ಮುಂದಿನ 24 ಗಂಟೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿವೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ.
ಗರಿಷ್ಠ ಉಷ್ಣಾಂಶವು ಕರಾವಳಿಯ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಎಲ್ಲೆಲ್ಲಿ ಮಳೆ?: ಬುಧವಾರ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿದಿದೆ.
ಚಿಕ್ಕಮಗಳೂರಿನ ಜಯಪುರದಲ್ಲಿ 3, ಬಾಳೆಹೊನ್ನೂರು 2, ಉತ್ತರಕನ್ನಡದ ಜನಮನೆ, ಕೊಡಗಿನ ಸುಂಟಿಕೊಪ್ಪ, ಶಿವಮೊಗ್ಗದ ಹುಂಚದ ಕಟ್ಟೆಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.
ಕಲಬುರಗಿಯಲ್ಲಿ 37.5 ಡಿಗ್ರಿ ಉಷ್ಣಾಂಶ: ಕಲಬುರಗಿಯಲ್ಲಿ 37.5 ಡಿಗ್ರಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಮಂಗಳೂರು 35.9, ರಾಯಚೂರು 36.4, ಮಂಗಳೂರು 35.9, ಬಳ್ಳಾರಿ 36.3, ವಿಜಯಪುರ 35.1, ಗದಗ 35.5, ಬೆಂಗಳೂರು 33, ಧಾರವಾಡ 34, ದಾವಣಗೆರೆ 34.5, ಚಾಮರಾಜನಗರ 35.3, ಕೊಪ್ಪಳ 35.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.