![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Mar 16, 2023, 7:25 AM IST
ಬೆಳ್ತಂಗಡಿ: ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ರಾಜ್ಯದ, ಜಿಲ್ಲೆಗಳ ಗಡಿ ಪ್ರದೇಶಗಳಲ್ಲಿರುವ ಚೆಕ್‌ಪೋಸ್ಟ್‌ಗಳಲ್ಲಿ ಬಿಗು ತಪಾಸಣೆ ಆರಂಭಿಸಿದೆ.
ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ಬೆಳ್ತಂಗಡಿ ಪೋಲೀಸ್ ವೃತ್ತ ನಿರೀಕ್ಷಕರ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಪಿಎಸ್‌ಐ ಅನಿಲ್ ಕುಮಾರ್ ಅವರ ನಿರ್ದೇಶನದಂತೆ ತಪಾಸಣೆ ಆರಂಭಿಸಲಾಗಿದ್ದು ಜಿಲ್ಲೆಯಿಂದ ಹೊರ ಹೋಗುವ, ಜಿಲ್ಲೆಗೆ ಆಗಮಿಸುವ ವಾಹನಗಳ ಬಗ್ಗೆ ತೀವ್ರ ನಿಗಾ ವಹಿಸಲಾಗುತ್ತಿದೆ.
ದ.ಕ. ಹಾಗೂ ಚಿಕ್ಕಮಗಳೂರು ಜಿಲ್ಲೆಯನ್ನು ಸಂಪರ್ಕಿಸುವ ಚಾರ್ಮಾಡಿ ಚೆಕ್ ಪೋಸ್ಟ್ ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತದೆ. ಚುನಾವಣೆ ಹಿನ್ನೆಲೆಯಲ್ಲಿ ಹಣ, ಶಸ್ತ್ರಾಸ್ತ್ರ, ಉಡುಗೊರೆ ಮದ್ಯ ಸಾಗಾಟ ಸಹಿತ ಅಹಿತಕರ ಘಟನೆಗಳನ್ನು ತಡೆಯುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಈ ರಸ್ತೆಯಲ್ಲಿ ಪ್ರತಿದಿನ ಸಾವಿರಾರು ವಾಹನಗಳು ಸಂಚರಿಸುತ್ತಿದ್ದು, ಎಲ್ಲ ವಾಹನಗಳನ್ನು ತಪಾಸಣೆಗೊಳಪಡಿಸಲಾಗುತ್ತದೆ ಎಂದು ತಿಳಿದುಬಂದಿದೆ.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.