ದಶಪಥವಲ್ಲ, ಆರು ಪಥದ ರಸ್ತೆ ಅಷ್ಟೆ!

Team Udayavani, Mar 16, 2023, 11:49 AM IST

TDY-9

ರಾಮನಗರ: ಹೆದ್ದಾರಿ ಎರಡು ಬದಿಯಲ್ಲಿ ಸರ್ವಿಸ್‌ ರಸ್ತೆ ನಿರ್ಮಾಣ ಕಾರ್ಯ ಕೂಡ ನಡೆ ಯು ತ್ತಿದೆ. ಆದರೆ, ಪೂರ್ಣ ಪ್ರಮಾಣದಲ್ಲಿ ಸರ್ವಿಸ್‌ ರಸ್ತೆ ನಿರ್ಮಾಣ ಮಾಡಲು ಸಾಧ್ಯವಿಲ್ಲ. ಬಿಡದಿಯ ಕಾಡುಮನೆ ಕ್ರಾಸ್‌ ಬಳಿಯ ರೈಲ್ವೆ ಬ್ರಿಡ್ಜ್ ಕೆಳಗೆ ಸರ್ವಿಸ್‌ ರಸ್ತೆ ಕಾಮ ಗಾರಿ ಮಾಡುವುದಿಲ್ಲ. ಕಾರಣ, ಪೂರ್ಣ ಪ್ರಮಾಣ ದಲ್ಲಿ ಸರ್ವಿಸ್‌ ರಸ್ತೆ ಮಾಡಿದರೆ ಎಲ್ಲ ವಾಹನ ಗಳು ಅಲ್ಲೆ ಸಂಚಾರ ಮಾಡುತ್ತವೆ. ಇದರಿಂದ ಟೋಲ್‌ ಸಂಗ್ರಹ ಆಗುವುದಿಲ್ಲ ಎಂದು ಬೆಂ.-ಮೈ. ರಾಷ್ಟ್ರೀಯ ದಶಪಥ ಹೆದ್ದಾರಿ ಯೋಜನಾ ನಿರ್ದೇಶಕ ಶ್ರೀಧರ್‌ ಸ್ಪಷ್ಟಪಡಿಸಿದರು.

ನಗರದಲ್ಲಿ ವಿವಿಧ ಕನ್ನಡಪರ ಸಂಘಟನೆ ಮುಖಂಡರು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ದಶಪಥ ಹೆದ್ದಾರಿ ಅಲ್ಲ. 6 ಪಥದ ಹೆದ್ದಾರಿ ಎಂದು ಸ್ಪಷ್ಟಪಡಿಸಿದ ಅವರು, ಕೇಂದ್ರದ ಕ್ಯಾಬಿನೆಟ್‌ನಲ್ಲಿ 6 ಪಥದ ರಸ್ತೆಗೆ ಅನುಮೋದನೆ ಸಿಕ್ಕಿದೆ. ಈ 6 ಪಥದ ಜೊತೆಗೆ ಹೆಚ್ಚುವರಿಯಾಗಿ ಎರಡು ಬದಿ ಸರ್ವಿಸ್‌ ರಸ್ತೆ ನಿರ್ಮಾಣ ಮಾಡುವುದನ್ನು ಸೇರಿಸಿಕೊಳ್ಳಲಾಗಿದೆ ಎಂದರು.

ಕಾಮಗಾರಿ ಪೂರ್ಣಗೊಂಡಿದೆ: ಬಹುಪಾಲು ನಿಡಘಟ್ಟವರೆಗೆ ಕಾಮಗಾರಿ ಪೂರ್ಣಗೊಂಡಿದೆ. ಹಾಗಾಗಿ, ಹೆದ್ದಾರಿಯಲ್ಲಿ ಮಂಗಳವಾರದಿಂದ ಟೋಲ್‌ ಸಂಗ್ರಹ ಮಾಡಲು ಹಸಿರು ನಿಶಾನೆ ತೋರಲಾಗಿತ್ತು. ಈ ವಿಚಾರವಾಗಿ ಹಲವು ಹೋರಾಟಗಳು ಟೋಲ್‌ ಪ್ಲಾಜಾಗಳ ಮುಂದೆ ನಡೆದಿದ್ದವು. ಅಲ್ಲದೆ, ಸಮಸ್ಯೆಗಳನ್ನ ಬಗೆಹರಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವ ಎಚ್ಚರಿಕೆ ನೀಡಿದ್ದರು. ಹಾಗಾಗಿ, ಕನ್ನಡಪರ ಹೋರಾಟಗಾರ ಜೊತೆಗೆ ಚರ್ಚೆ ಮಾಡಲು ಬಂದಿದ್ದೇನೆ ಎಂದರು.

ಅಗತ್ಯ ಸೇವೆ ಕಲ್ಪಿಸಿದೆ: ಈಗಾಗಲೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಲ್ಲ ರೀತಿಯ ಅಗತ್ಯ ಸೇವೆಗಳನ್ನ ಕಲ್ಪಿಸಲಾಗಿದೆ. ಎರಡು ಟೋಲ್‌ ಪ್ಲಾಜಾಗಳ ಬಳಿ ಎರಡೆರಡು ಆ್ಯಂಬುಲೆನ್ಸ್‌, ಕ್ರೇನ್‌, ಹೈವೇ ಗಸ್ತು ವಾಹನಗಳು ಸಿದ್ಧವಾಗಿವೆ. ಅಲ್ಲದೆ, ಮಿನಿ ಕ್ಲಿನಿಕ್‌ ಕೂಡ ತೆರೆಯಲಾಗಿದೆ. ಇಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಟ್ಟು ತದ ನಂತರ ಬೇರೆ ಆಸ್ಪತ್ರೆಗಳಿಗೆ ಕಳುಹಿಸುವ ವ್ಯವಸ್ಥೆಯನ್ನು ಸಹ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಕೆಲಸ: ಹಲವು ಅಡೆತಡೆಗಳ ಹಾಗೂ ಹೋರಾಟದ ನಡುವೆಯು ಹೆದ್ದಾರಿಯಲ್ಲಿ ಸಂಚಾರ ಮಾಡುವ ವಾಹನಗಳಿಗೆ ಟೋಲ್‌ ಸಂಗ್ರಹ ಮಾಡುವ ಕಾರ್ಯಕ್ಕೆ ಮಂಗಳವಾರ ಚಾಲನೆ ನೀಡಲಾಗಿತ್ತು. ಇದೇ ವಿಚಾರವಾಗಿ ಕನ್ನಡಪರ ಸಂಘಟನೆ ಹೋರಾಟಗಾರರು ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಶ್ರೀಧರ್‌ ಅವರನ್ನು ಕರೆಸಿ ಹೆದ್ದಾರಿಯಲ್ಲಿನ ಅನನುಕೂಲತೆಗಳನ್ನ ಹೆದ್ದಾರಿ ಪ್ರಾಧಿಕಾರದ ಅಧಿಕಾರಗಳ ಗಮನ ಸೆಳೆದು ಸಮಸ್ಯೆಗೆ ಅಧಿಕಾರಿಗಳಿಂದ ಕನ್ನಡಪರ ಸಂಘಟನೆಗಳ ಮುಖಂಡರು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಕೆಲಸ ಮಾಡಿದರು.

ಉತ್ತಮ ಸೇವೆ ಅವಶ್ಯ ಇದ್ದಲ್ಲಿ ಹಣ ಕಟ್ಟುವುದು ಅನಿವಾರ್ಯ : ನಾನು ಯಾವುದೇ ಪ್ರತಿಕಾಗೋಷ್ಠಿ ಕರೆದಿರಲಿಲ್ಲ. ನನಗೆ ಕರೆಯುವ ಯಾವುದೇ ಅಧಿಕಾರವೂ ಇಲ್ಲ. ಕನ್ನಡ ಪರ ಹೋರಾಟಗಾರರು ಕರೆದರು ಅಂತ ಬಂದಿದ್ದೆ. ಅವರಿಗೆ ಮನವರಿಕೆ ಮಾಡಿಕೊಡುವುದು ನಮ್ಮ ಕರ್ತವ್ಯವಾಗಿತ್ತು. ವಿವರಿಸಿದ್ದೇನೆ. ಅಷ್ಟಕ್ಕೂ ಸಂಪೂರ್ಣ ಸರ್ವಿಸ್‌ ರಸ್ತೆ ಮಾಡಿದರೆ ಟೋಲ್‌ನಲ್ಲಿ ಹಣ ಕೊಟ್ಟು ಯಾಕೆ ಓಡಾಡುತ್ತಾರೆ. ಇದರಿಂದ ಟೋಲ್‌ ರಸ್ತೆ ನಿರ್ಮಾಣದ ಉದ್ದೇಶವಾದರೂ ಏನಿದೆ?. ಸಾರ್ವಜನಿಕರಿಗೆ ವೇಗ ಮತ್ತು ಉತ್ತಮ ಸೇವೆ ಅವಶ್ಯಕತೆ ಇದ್ದಲ್ಲಿ ಹಣ ಕಟ್ಟುವುದು ಅನಿವಾರ್ಯವಾಗಿದೆ ಎಂದು ಬೆಂ.-ಮೈ. ರಾಷ್ಟ್ರೀಯ ದಶಪಥ ಹೆದ್ದಾರಿ ಯೋಜನಾ ನಿರ್ದೇಶಕ ಶ್ರೀಧರ್‌ ಹೇಳಿದರು.

ಟಾಪ್ ನ್ಯೂಸ್

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್‌ ಹೇಳಿದ್ದೇನು?

Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್‌ ಹೇಳಿದ್ದೇನು?

Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್

Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Newborn baby’s body found in toilet pit!

Ramanagara: ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ!

Channapatna: ಸ್ಮಶಾನಕ್ಕೆ ಜಾಗ ಬೇಕೆಂದು ತಾಲೂಕು ಕಚೇರಿಯೆದುರು ಶವವಿಟ್ಟು ಪ್ರತಿಭಟನೆ

Channapatna: ಸ್ಮಶಾನಕ್ಕೆ ಜಾಗ ಬೇಕೆಂದು ತಾಲೂಕು ಕಚೇರಿಯೆದುರು ಶವವಿಟ್ಟು ಪ್ರತಿಭಟನೆ

Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Road Mishap: ಬಸ್‌-ಕಾರು ನಡುವೆ ಡಿಕ್ಕಿ; ಮೂವರ ಸಾವು

Road Mishap: ಬಸ್‌-ಕಾರು ನಡುವೆ ಡಿಕ್ಕಿ; ಮೂವರ ಸಾವು

Kanakapura-laxmi

New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

7

Mangaluru: ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

6(1

Kundapura: ಹತ್ತೂರು ಸೇರುವ ಮುಳ್ಳಿಕಟ್ಟೆಗೆ ಬೇಕು ಬಸ್‌ ನಿಲ್ದಾಣ

ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.