ಮಂಗಳೂರು: ಚುನಾವಣೆ ಹಿನ್ನೆಲೆ, ಬಿಗಿಗೊಂಡ ಭದ್ರತೆ; ರೌಡಿ ಶೀಟರ್‌ಗಳಿಗೆ ಎಚ್ಚರಿಕೆ

ಸಿಬಂದಿ ಮತ್ತು ಅಧಿಕಾರಿಗಳಿಗೆ ಈಗಾಗಲೇ ಒಂದು ಹಂತದ ತರಬೇತಿ ನೀಡಲಾಗಿದೆ

Team Udayavani, Mar 16, 2023, 1:21 PM IST

ಮಂಗಳೂರು: ಚುನಾವಣೆ ಹಿನ್ನೆಲೆ, ಬಿಗಿಗೊಂಡ ಭದ್ರತೆ; ರೌಡಿ ಶೀಟರ್‌ಗಳಿಗೆ ಎಚ್ಚರಿಕೆ

ಮಂಗಳೂರು: ವಿಧಾನ ಸಭಾ ಚುನಾವಣೆ ಘೋಷಣೆಗೆ ಇನ್ನೂ ದಿನಗಳು ಬಾಕಿ ಇದ್ದರೂ ಜಿಲ್ಲಾಡಳಿತ ಸಿದ್ಧತೆ ಆರಂಭಿಸಿದೆ. ಚುನಾವಣೆಯಲ್ಲಿ ಗೆಲ್ಲುವುದು ರಾಜಕೀಯ ಪಕ್ಷಗಳ ಮುಖ್ಯ ಗುರಿಯಾದರೆ, ಚುನಾವಣೆ ಸಾಂಗವಾಗಿ ನಡೆಸುವುದು ಜಿಲ್ಲಾಡಳಿತದ ಅಧಿಕಾರಿ ವರ್ಗಕ್ಕಿರುವ ಸವಾಲು. ಜಿಲ್ಲಾಮಟ್ಟದಲ್ಲಿ ಜಿಲ್ಲಾಧಿಕಾರಿ ಮುಖ್ಯ ಚುನಾವಣಾಧಿಕಾರಿಯಾಗಿಯೂ ಕರ್ತವ್ಯ ನಿರ್ವಹಿಸಲಿದ್ದು, ಅಪರ ಜಿಲ್ಲಾಧಿಕಾರಿ, ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ, ನಗರ ಪೊಲೀಸ್‌ ಆಯುಕ್ತ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ, ಪಾಲಿಕೆ ಅಯುಕ್ತರು ಚುನಾವಣೆ ಯಶಸ್ವಿಯಾಗಿ ನಿರ್ವ ಹಿಸುವಲ್ಲಿ ಮುಖ್ಯ ಪಾತ್ರ ವಹಿಸುವರು. ಈಗಾಗಲೇ ಜಿಲ್ಲಾಧಿಕಾರಿಯವರ ನೇತೃತ್ವದಲ್ಲಿ ಪೂರ್ವ ಸಿದ್ಧತಾ ಕೆಲಸಗಳು ಪ್ರಾರಂಭವಾಗಿವೆ. ಪೊಲೀಸ್‌ ಇಲಾಖೆಯೂ ಸಹ ಭದ್ರತೆಗೆ ಸಂಬಂಧಿಸಿದಂತೆ ನಿಗಾ ವಹಿಸಲಾರಂಭಿಸಿದೆ.

ಜಿಲ್ಲೆಯಲ್ಲಿರುವ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡುತ್ತಿರುವ ಉನ್ನತ ಪೊಲೀಸ್‌ ಅಧಿಕಾರಿಗಳು, ಸ್ಥಳೀಯರೊಂದಿಗೆ, ಮೊಹಲ್ಲಾ, ಯುವ ಸಮಿತಿಗಳೊಂದಿಗೆ ಸಭೆ ನಡೆಸಿ, ಜನರಲ್ಲಿ ವಿಶ್ವಾಸ ಮೂಡಿಸುವ ಕೆಲಸ ಮಾಡುತ್ತಿದ್ದಾರೆ.

ಚೆಕ್‌ಪೋಸ್ಟ್‌ಗಳಲ್ಲಿ ಪರಿಶೀಲನೆ
ಜಿಲ್ಲಾ ವ್ಯಾಪ್ತಿಯಲ್ಲಿ 10 ಅಂತಾರಾಜ್ಯ ಮತ್ತು 5 ಅಂತರ್‌ ಜಿಲ್ಲಾ ಚೆಕ್‌ಪೋಸ್ಟ್‌ಗಳಿದ್ದು ಇತ್ತೀಚೆಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ವಿಕ್ರಮ್‌ ಅಮಟೆ ಅವರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಲ್ಲಿನ ಅಧಿಕಾರಿ, ಸಿಬಂದಿಗೆ ಚುನಾವಣ ಕರ್ತವ್ಯಗಳ ಕುರಿತು ಸೂಕ್ತ ಸಲಹೆ, ಮಾರ್ಗದರ್ಶನ ನೀಡಿ, ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಿದ್ದಾರೆ. ಜತೆಗೆ ಅಲ್ಲಿನ ಕೆಲವು ವ್ಯವಸ್ಥೆಗಳನ್ನು ಸರಿಪಡಿಸುವ ನಿಟ್ಟಿನಲ್ಲಿಯೂ ಕ್ರಮ ಕೈಗೊಂಡಿದ್ದಾರೆ.

ಜಿಲ್ಲೆಯಲ್ಲಿರುವ ಸೂಕ್ಷ್ಮ ಅತೀ ಸೂಕ್ಷ್ಮ, ನಕ್ಸಲ್‌ ಪೀಡಿತ ಪ್ರದೇಶಗಳ ಮತಗಟ್ಟೆಗಳ ಮೇಲೆ ಪೊಲೀಸರು ನಿಗಾವಹಿಸಲು ಆರಂಭಿಸಿದ್ದಾರೆ. ಮತಗಟ್ಟೆಗಳ ಒಂದು ಹಂತದ ಪರಿಶೀಲನೆ ಈಗಾಗಲೇ ಮುಗಿದಿದ್ದು, ಈ ಪ್ರದೇಶಗಳಿಗೆ ಭೇಟಿ ನೀಡುವ ಅಪರಿಚಿತರ ಮೇಲೆ ಗಮನ ಇರಿಸಲು ಸ್ಥಳೀಯರಿಗೆ ತಿಳಿಸಲಾಗಿದೆ. ಜತೆಗೆ ಪೊಲೀಸರೂ ನಿಗಾವಹಿಸಲಿದ್ದಾರೆ. ಜತೆಗೆ ಕ್ಲಸ್ಟರ್‌ ಬೂತ್‌ಗಳಲ್ಲೂ ಪರಿಶೀಲನೆ ನಡೆಸಲಾಗಿದೆ.

ರೌಡಿ ಶೀಟರ್‌ಗಳಿಗೆ ಎಚ್ಚರಿಕೆ
ಆಯಾ ಮತಗಟ್ಟೆ ವ್ಯಾಪ್ತಿಯಲ್ಲಿರುವ ರೌಡಿ ಶೀಟರ್‌, ಕ್ರಿಮಿನಲ್‌ ಹಿನ್ನೆಲೆ ಇರುವವರನ್ನು, ಸಾರ್ವಜನಿಕರಲ್ಲಿ ಭಯ ಮೂಡಿಸುವವರನ್ನು ಠಾಣೆಗಳಿಗೆ ಕರೆಸಿ, ಚುನಾವಣ ಸಂದರ್ಭದಲ್ಲಿ ಸಮಾಜದ ಶಾಂತಿ ಕದಡುವ ಕೆಲಸದಲ್ಲಿ ನಿರತರಾಗದಂತೆ ಎಚ್ಚರಿಕೆ ನೀಡಲಾಗುತ್ತಿದೆ.

ಪೂರ್ಣ ಪ್ರಮಾಣದಲ್ಲಿ ಸಿದ್ಧತೆ
ಸಿಬಂದಿ ಮತ್ತು ಅಧಿಕಾರಿಗಳಿಗೆ ಈಗಾಗಲೇ ಒಂದು ಹಂತದ ತರಬೇತಿ ನೀಡಲಾಗಿದೆ. ಯಾವ ಕಾನೂನಿನಡಿಯಲ್ಲಿ ಏನು ಕ್ರಮ ಕೈಗೊಳ್ಳಬೇಕು, ಪ್ರಜಾಪ್ರತಿನಿಧಿ ಕಾಯಿದೆ, ಐಪಿಸಿ, ಬೇರೆ ಬೇರೆ ಸ್ಥಳೀಯ ಕಾನೂನುಗಳ ಬಗ್ಗೆಯೂ ತರಬೇತಿ ನೀಡಲಾಗಿದ್ದು, ಪೂರ್ಣ ಪ್ರಮಾಣದಲ್ಲಿ ಸಿದ್ಧತೆ ನಡೆದಿದೆ ಎನ್ನುತ್ತಾರೆ ಉನ್ನತ ಪೊಲೀಸ್‌ ಅಧಿಕಾರಿಗಳು.

ಭದ್ರತೆಗೆ ಸಂಬಂಧಿಸಿದಂತೆ ಪ್ರತಿ ಕ್ಷಣವೂ ನಿಗಾ ವಹಿಸುವುದು ಪೊಲೀಸ್‌ ಇಲಾಖೆ ಜವಾಬ್ದಾರಿ. ಮುಂಬರುವ ವಿಧಾನ ಸಭಾ ಚುನಾವಣೆ ನ್ಯಾಯ ಸಮ್ಮತವಾಗಿ ನಡೆಸಲು ಸ್ಥಳೀಯ ಮತಗಟ್ಟೆಗಳಿಗೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಅಲ್ಲಿನ ಅಧಿಕಾರಿಗಳೊಂದಿಗೆ ಚರ್ಚಿಸು ತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇಂತಹ ಚಟು ವಟಿಕೆಗಳು ನಿರಂತವಾಗಿ ನಡೆಯುಲಿದೆ ಎನ್ನುತ್ತಾರೆ ಮಂಗಳೂರು ನಗರ ಪೊಲೀಸ್‌ ಆಯುಕ್ತ ಕುಲದೀಪ್‌ ಕುಮಾರ್‌ ಜೈನ್‌.

ಚುನಾವಣ ಪೂರ್ವ ತಯಾರಿಯಾಗಿ ಜಿಲ್ಲಾ ಪೊಲೀಸ್‌ ವ್ಯಾಪ್ತಿಯ ಎಲ್ಲ ಮತಗಟ್ಟೆಗಳ ಮೇಲೆ ಪೊಲೀಸ್‌ ಇಲಾಖೆ ನಿಗಾ ವಹಿಸುತ್ತಿದೆ. ಅಂತಾರಾಜ್ಯ, ಅಂತರ್‌ಜಿಲ್ಲಾ ಗಡಿಯಲ್ಲಿ ಚೆಕ್‌ ಪೋಸ್ಟ್‌ ಗಳಲ್ಲಿ ಪರಿ ಶೀಲನೆ ನಡೆಸಲಾಗಿದೆ. ಮತಗಟ್ಟೆ ವ್ಯಾಪ್ತಿಯಲ್ಲಿ ಸಾರ್ವಜನಿಕರ ಸಮಸ್ಯೆ, ಸವಾಲುಗಳನ್ನು ಆಲಿಸಿ, ಪರಿಹರಿಸುವ ಕೆಲಸವೂ ನಡೆಯುತ್ತಿದೆ.
-ಡಾ| ವಿಕ್ರಮ್‌ ಅಮಟೆ,
ದ.ಕ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ

ಭರತ್‌ ಶೆಟ್ಟಿಗಾರ್‌

ಟಾಪ್ ನ್ಯೂಸ್

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ

Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ

Anwar-Manippady

Mangaluru: ವಕ್ಫ್‌ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ

Pocso

Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.