ಮಂಗಳೂರು ವಿಮಾನ ನಿಲ್ದಾಣ: 90 ಲಕ್ಷ ರೂ.ಮೌಲ್ಯದ ಚಿನ್ನ ವಶ
ಕಳ್ಳ ಸಾಗಾಣಿಕೆಗೆ 1 ವರ್ಷದ ಮಗುವಿನ ಡೈಪರ್ ಬಳಕೆ....!
Team Udayavani, Mar 17, 2023, 7:00 PM IST
ಮಂಗಳೂರು : ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಕಸ್ಟಮ್ಸ್ ಅಧಿಕಾರಿಗಳು ದುಬೈನಿಂದ ಬಂದ ಪ್ರಯಾಣಿಕರಿಂದ 90 ಲಕ್ಷ ರೂ.ಮೌಲ್ಯದ ಕಳ್ಳಸಾಗಾಣಿಕೆ ಮಾಡಲಾಗುತ್ತಿದ್ದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.
ಮೂವರು ಪ್ರಯಾಣಿಕರಿಂದ ಮಾರ್ಚ್ 1 ರಿಂದ ಮಾರ್ಚ್ 15 ರ ಅವಧಿಯಲ್ಲಿ ಅಧಿಕಾರಿಗಳು 90 ಲಕ್ಷದ 67 ಸಾವಿರದ 750 ರೂ. ಮೌಲ್ಯದ 1,606 ಗ್ರಾಂ 24 ಕ್ಯಾರೆಟ್ ಶುದ್ಧತೆಯ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಚಿನ್ನವನ್ನು ವಿವಿಧ ವಿಧಾನಗಳಲ್ಲಿ ಪೇಸ್ಟ್ ರೂಪದಲ್ಲಿ ಮರೆಮಾಡಿ ಕಳ್ಳ ಸಾಗಾಣಿಕೆ ಮಾಡಲಾಗುತ್ತಿತ್ತು.
21 ತಿಂಗಳ ಹೆಣ್ಣು ಮಗುವಿನ ಡೈಪರ್ ನಲ್ಲಿ ತಂದೆ ಚಿನ್ನವನ್ನು ಮರೆಮಾಚಿ, ಗುದ ನಾಳದಲ್ಲಿ ಮಾತ್ರೆಗಳ ರೂಪದಲ್ಲಿ ಬಚ್ಚಿಟ್ಟು ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಎಂದು ಅಧಿಕಾರಿಗಳು ವಿವರ ನೀಡಿದ್ದಾರೆ. ಟ್ರಾಸರ್ ನ ಸೊಂಟ ಪಟ್ಟಿಯಲ್ಲಿ ಚಿನ್ನ ಅಡಗಿಸಿಟ್ಟು ಸಾಗಾಟ ಮಾಡಲಾಗುತ್ತಿತ್ತು. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.