ರಾಹುಲ್ ಕಮಾಲ್; ಮೊದಲ ಏಕದಿನ ಪಂದ್ಯದಲ್ಲಿ ಆಸೀಸ್ ಗೆ ಸೋಲುಣಿಸಿದ ಭಾರತ

Team Udayavani, Mar 17, 2023, 8:48 PM IST

1-sadsdsad

ಮುಂಬೈ: ಪ್ರವಾಸಿ ಆಸ್ಟ್ರೇಲಿಯ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಶುಕ್ರವಾರ ನಡೆದ ರೋಚಕ ಪಂದ್ಯದಲ್ಲಿ ಭಾರತ ತಂಡ ಜಯಗಳಿಸಿದೆ. ಕೆ.ಎಲ್. ರಾಹುಲ್ ಅವರ ಸಮಯೋಚಿತ ಆಟದ ನೆರವಿನಿಂದ 5 ವಿಕೆಟ್ ಅಂತರದ ಗೆಲುವು ಸಾಧಿಸಿತು.

ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಭಾರತ ತಂಡದ ನಾಯಕ ಹಾರ್ದಿಕ್‌ ಪಾಂಡ್ಯ ಆಸೀಸ್ ಅನ್ನು 35.4 ಓವರ್ ಗಳಲ್ಲಿ 188 ರನ್ ಗಳಿಗೆ ಕಟ್ಟಿ ಹಾಕಿತು. ಆರಂಭಿಕ ಆಟಗಾರ ಹೆಡ್ 5 ರನ್ ಗಳಿಗೆ ಔಟಾದರು. ಏಕಾಂಗಿ ಹೋರಾಟ ನೀಡಿದ ಮಿಚೆಲ್ ಮಾರ್ಷ್ 81 ರನ್ ಗಳಿಸಿ ಔಟಾದರು. ನಾಯಕ ಸ್ಟೀವನ್ ಸ್ಮಿತ್ 22 ರನ್ ಗಳಿಸಿ ನಿರ್ಗಮಿಸಿದರು. ಲಬುಸ್ಚಾಗ್ನೆ 15 ರನ್ , ವಿಕೆಟ್ ಕೀಪರ್ ಜೋಶ್ ಇಂಗ್ಲಿಸ್ 26 ರನ್, ಗ್ರೀನ್ 12 ರನ್ ಗಳಿಸಿದರು. ಉಳಿದ ಆಟಗಾರರು ಒಂದಂಕಿ ದಾಟಲಿಲ್ಲ.

ಬಿಗಿ ಬೌಲಿಂಗ್ ದಾಳಿ ನಡೆಸಿದ ಭಾರತದ ಬೌಲರ್ ಗಳ ಪೈಕಿ ಶಮಿ ಮತ್ತು ಸಿರಾಜ್ ತಲಾ 3 ವಿಕೆಟ್, ರವೀಂದ್ರ ಜಡೇಜಾ 2 ವಿಕೆಟ್ ಪಾಂಡ್ಯ ಮತ್ತು ಕುಲದೀಪ್ ಯಾದವ್ ತಲಾ ಒಂದು ವಿಕೆಟ್ ಪಡೆದರು.

ಗುರಿ ಬೆನ್ನಟ್ಟಿದ ಭಾರತ 5 ರನ್ ಆಗುವಷ್ಟರಲ್ಲಿ 3 ರನ್ ಗಳಿಸಿದ್ದ ಇಶಾನ್ ಕಿಶನ್ ಅವರ ವಿಕೆಟ್ ಕಳೆದುಕೊಂಡಿತು. ವಿರಾಟ್ ಕೊಹ್ಲಿ 4 ರನ್ ಗಳಿಸಿ ಔಟಾದರು. ಶುಭಮನ್ ಗಿಲ್ 20 ರನ್ ಕೊಡುಗೆ ಸಲ್ಲಿಸಿದರು. ಸೂರ್ಯಕುಮಾರ್ ಯಾದವ್ ಶೂನ್ಯಕ್ಕೆ ನಿರ್ಗಮಿಸಿದರು. ಕೊಹ್ಲಿ ಮತ್ತು ಯಾದವ್ ಅವರಿಗೆ ವೇಗಿ ಸ್ಟಾರ್ಕ್ ಮಾರಕವಾದರೂ. ಇಬ್ಬರನ್ನೂ ಎಲ್ಬಿಡಬ್ಲ್ಯೂ ಮಾಡಿ ಪೆವಿಲಿಯನ್ ಗೆ ಕಳುಹಿಸಿದರು. ನಾಯಕ ಹಾರ್ದಿಕ್ ಪಾಂಡ್ಯ 25 ರನ್ ಗಳಿಸಿ ಔಟಾದರು.

ರಾಹುಲ್ ಕಮಾಲ್

ಕೆ ಎಲ್ ರಾಹುಲ್ ಅವರ ಸಮಯೋಚಿತ ಆಟ ತಂಡದ ಗೆಲುವಿನಲ್ಲಿ ದೊಡ್ಡ ಪಾತ್ರ ವಹಿಸಿತು. 39ಕ್ಕೆ 4 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದಾಗ ಆಟಕ್ಕಿಳಿದ ರಾಹುಲ್ ತಾಳ್ಮೆಯ ಆಟವಾಡಿದರು. ಆಸೀಸ್ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸಿದ ಅವರು ಅರ್ಧ ಶತಕ ಪೂರ್ತಿ ಗೊಳಿಸಿ ಗೆಲುವಿನ ಭರವಸೆ ಮೂಡಿಸಿದರು. ಅವರಿಗೆ 6 ನೇ ವಿಕೆಟ್ ಗೆ ಸಾಥ್ ನೀಡಿದ ರವೀಂದ್ರ ಜಡೇಜಾ ಗೆಲುವಿನಲ್ಲಿ ಮಹತ್ವದ ಕೊಡುಗೆ ಸಲ್ಲಿಸಿದರು. 108 ರನ್ ಗಳ ಜೊತೆಯಾಟವಾಡಿದರು. ತಂಡ 39.5 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 191 ರನ್ ಗಳಿಸಿ 5 ವಿಕೆಟ್ ಅಂತರದ ಜಯ ಸಾಧಿಸಿತು.

ರಾಹುಲ್ ಅವರು 91 ಎಸೆತಗಳಲ್ಲಿ 7 ಬೌಂಡರಿ ಮತ್ತು ಆಕರ್ಷಕ 1 ಸಿಕ್ಸರ್ ಒಳಗೊಂದು 75 ರನ್ ಗಳಿಸಿ ಅಜೇಯರಾಗಿ ಉಳಿದರು. ಜಡೇಜಾ 69 ಎಸೆತಗಳಲ್ಲಿ 45 ರನ್ ಕೊಡುಗೆ ಸಲ್ಲಿಸಿ ಅಜೇಯರಾಗಿ ಉಳಿದು ಗೆಲುವಿನ ಸಂಭ್ರಮದಲ್ಲಿ ಭಾಗಿಯಾದರು.

ಆಸೀಸ್ ಪರ ಮಿಚೆಲ್ ಸ್ಟಾರ್ಕ್ 3 ವಿಕೆಟ್ ಕಬಳಿಸಿದರು. ಮಾರ್ಕಸ್ ಸ್ಟೊಯಿನಿಸ್ 2 ವಿಕೆಟ್ ಪಡೆದರು.

ಟಾಪ್ ನ್ಯೂಸ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

1-syyy

Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್‌-ಗಂಭೀರ್‌ ಮನಸ್ತಾಪ ತೀವ್ರ?

PCB

PCB;ಕರಾಚಿ ಕ್ರೀಡಾಂಗಣದ ನವೀಕರಣ ಕಾರ್ಯ ಪೂರ್ಣಕ್ಕೆ ಹರಸಾಹಸ

1-foot

FIFA ಸೌಹಾರ್ದ ಫುಟ್‌ಬಾಲ್‌ ಪಂದ್ಯ: ಮಾಲ್ದೀವ್ಸ್‌  ವಿರುದ್ಧ ಭಾರತಕ್ಕೆ 11-1 ಗೆಲುವು

1-gil

450 ಕೋಟಿ ಚಿಟ್ ಫಂಡ್ ಹಗರಣ: ಶುಭಮನ್ ಗಿಲ್ ಸೇರಿ ನಾಲ್ವರಿಗೆ ಸಿಐಡಿ ಸಮನ್ಸ್ ಸಾಧ್ಯತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.