ಕಾಂಗ್ರೆಸ್-ಎಸ್‌ಡಿಪಿಐ ಸಂಬಂಧ ತನಿಖೆಗೆ ಆಗ್ರಹ: ಸಚಿವೆ ಶೋಭಾ ಕರಂದ್ಲಾಜೆ
Team Udayavani, Mar 18, 2023, 6:23 AM IST
ಬೆಂಗಳೂರು: ಕಾಂಗ್ರೆಸ್ ಮತ್ತು ಎಸ್‌ಡಿಪಿಐ ನಡುವಿನ ಸಂಬಂಧದ ಕುರಿತು ಉನ್ನತ ಮಟ್ಟದ ತನಿಖೆ ನಡೆಸುವಂತೆ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ, ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಒತ್ತಾಯಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಮತ್ತು ಎಸ್‌ಡಿಪಿಐ ಈ ಹಿಂದೆ ಹೊಂದಾಣಿಕೆ ಮಾಡಿಕೊಂಡಿದ್ದವು. ಕಾಂಗ್ರೆಸ್ ಮತ್ತು ಎಸ್‌ಡಿಪಿಐ ಚುನಾವಣಾ ಹೊಂದಾಣಿಕೆ ಏನೆಂಬುದು ಜನರಿಗೆ ತಿಳಿದಿದೆ. ಪಿಎಫ್ಐ, ಕೆಎಫ್ಡಿ ಮತ್ತು ಎಸ್ ಡಿಪಿಐ ಕಾಂಗ್ರೆಸ್ಸಿನ ಇನ್ನೊಂದು ಮುಖ ಎಂದು ಆರೋಪಿಸಿದರು.
ರಾಜ್ಯದಲ್ಲಿ ನಡೆದ ಟಿಪ್ಪು ಜಯಂತಿಯ ವಿರುದ್ಧ ನಡೆದ ಹೋರಾಟದಲ್ಲಿ ಭಾಗಿಯಾದ ನಮ್ಮ ಕಾರ್ಯಕರ್ತರು ಇಂದಿಗೂ ಪ್ರಕರಣ ಎದುರಿಸುತ್ತಿದ್ದಾರೆ. ಪಿಎಫ್ಐ ದೇಶದಲ್ಲಿ ಭಯೋತ್ಪಾದನಾ ಚಟುವಟಿಕೆ ಮಾಡುತ್ತಿದೆ; ಭಯೋತ್ಪಾದಕತೆಗೆ ಫಂಡಿಂಗ್ ಮಾಡುತ್ತಿದೆ. ಹಲವಾರು ಹಿಂದೂ ಯುವಕರ ಹತ್ಯೆಗೆ ಕಾರಣವಾಗಿದೆ. ಪಿಎಫ್ಐ ಕಾರ್ಯಕರ್ತರು ಈಗ ಎಸ್‌ಡಿಪಿಐ ಸೇರಿದ್ದಾರೆಂದು ಆರೋಪಿಸಿದರು.
ಮಂಗಳೂರಿನಲ್ಲಿ ಕೆಲ ದಿನಗಳ ಹಿಂದೆ ಬಾಂಬ್ ಸ್ಫೋಟ ನಡೆದಿದೆ. ಐಸಿಸ್ ಉಗ್ರರು ಇದರ ಹೊಣೆ ಹೊತ್ತುಕೊಂಡಿದ್ದಾರೆ. ಆದರೆ ಬಾಂಬ್ ಬ್ಲಾಸ್ಟ್ ಮಾಡಿದವನನ್ನು ನಿರಪರಾಧಿ ಎಂಬ ರೀತಿಯಲ್ಲಿ ಕಾಂಗ್ರೆಸ್ ನಾಯಕರು ಅದರಲ್ಲೂ ಮುಖ್ಯವಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಸಮರ್ಥನೆ ಮಾಡಿಕೊಂಡಿದ್ದಾರೆ. ಹಾಗಾದರೆ ಕಾಂಗ್ರೆಸ್ಸಿನ ಉದ್ದೇಶ ಏನು? ಎಸ್‌ಡಿಪಿಐ ಉದ್ದೇಶ ಏನು? ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ಮತ್ತು ಪಿಎಫ್ಐ ಹಾಗೂ ಕಾಂಗ್ರೆಸ್ ಮತ್ತು ಎಸ್‌ಡಿಪಿಐಗೆ ಇರುವ ಸಂಬಂಧದ ಸತ್ಯಾಸತ್ಯತೆ ಬಹಿರಂಗವಾಗಬೇಕು. ಸಂಬಂಧ ಕುರಿತಾಗಿ ತನಿಖೆ ಆಗಬೇಕು ಕಾಂಗ್ರೆಸ್ಸಿನ ಮಾನಸಿಕತೆ ಏನು ಎಂಬುದು ಜನರಿಗೆ ತಿಳಿಯಬೇಕು ಎಂದು ಆಗ್ರಹಿಸಿದರು.
ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ, ರಾಜ್ಯ ಬಿಜೆಪಿ ಎಸ್. ಸಿ. ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಉಪಸ್ಥಿತರಿದ್ದರು.
ಪಿಎಫ್ಐಯ ರಾಜಕೀಯ ಮುಖವಾಡ ಮತ್ತು ರಾಜಕೀಯ ಮುಖವಾಣಿ ಎಸ್ ಡಿ ಪಿ ಐ. ಈ ಹಿಂದೆ ರಾಜ್ಯದಲ್ಲಿ ಅವರು ಕೆಎಫ್ಡಿ ಹೆಸರಿನಲ್ಲಿ ಕೆಲಸ ಮಾಡುತ್ತಿದ್ದರು. ಹಲವಾರು ಜನರನ್ನು ಬಂಧಿಸಲಾಗಿತ್ತು. ಸಿದ್ದರಾಮಯ್ಯನವರ ನೇತೃತ್ವದ ಸರಕಾರ ಸುಮಾರು 116 ಕೇಸುಗಳಲ್ಲಿ ಸಿಕ್ಕಿ ಬಿದ್ದಿದ್ದ 1700 ಪಿ ಎಫ್ ಐ ಮತ್ತು ಕೆಎಫ್ ಡಿ ಮುಖಂಡರು ಮತ್ತು ಕಾರ್ಯಕರ್ತರನ್ನು ಬಿಡುಗಡೆ ಮಾಡಿತ್ತು. ಹಾಗೆ ಬಿಡುಗಡೆಯಾದವರೇ ಸಮಾಜದಲ್ಲಿ ಗೊಂದಲದ ವಾತಾವರಣವನ್ನು ನಿರ್ಮಾಣ ಮಾಡಿದರು. ಕೆಜೆ ಹಳ್ಳಿ ಡಿಜೆ ಹಳ್ಳಿ, ಮಂಗಳೂರಿನ ಸ್ಟೇಷನ್ನಿಗೆ ನುಗ್ಗಿರುವುದು, ಹುಬ್ಬಳ್ಳಿಯಲ್ಲಿ ಪೆಲೀಸ್ ಠಾಣೆ ಮೇಲೆ ದಾಳಿ ಮಾಡಿರುವುದು ಪಿಎಫ್ ಐ ಕಾರ್ಯಕರ್ತರೇ ಆಗಿದ್ದಾರೆ ಎಂದು ದೂರಿದರು.
ಕಳೆದ ಬಾರಿ ನಾವು 25 ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಯೋಜಿಸಿದ್ದೆವು. ಆದರೆ ಕಾಂಗ್ರೆಸ್ಸಿನ ನೇತಾರರ- ನಾಯಕರ ಕೋರಿಕೆ ಮೇರೆಗೆ ಅವರೆಲ್ಲರನ್ನು ಕಣಕ್ಕಿಳಿಸದೆ ಮೂರು ಜನರನ್ನು ಮಾತ್ರ ಕಣಕ್ಕಿಳಿಸಿದೆವು’ ಎಂದು ಎಸ್ ಡಿ ಪಿ ಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹೇಳಿಕೆ ನೀಡಿದ್ದಾರೆ. ಕಳೆದ ಚುನಾವಣೆಯಲ್ಲಿ ಸಿದ್ದರಾಮಯ್ಯನವರು ಪಿಎಫ್ ಐ -ಎಸ್ ಡಿ ಪಿ ಐಗೆ ಸಹಾಯ ಮಾಡಿದ್ದಕ್ಕಾಗಿ ಎಸ್‌ಡಿಪಿಐ ಹೊಂದಾಣಿಕೆ ರಾಜಕೀಯ ಮಾಡಿಕೊಂಡಿದೆ ಎಂಬುದು ಇದರಿಂದ ದೃಢಪಟ್ಟಿದೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.