ಕುಡಿಯುವ ನೀರು ಪೂರೈಕೆಗೆ ಪ್ರತ್ಯೇಕ ತಂಡ: ದ. ಕ. ಜಿಲ್ಲಾಡಳಿತ ಸೂಚನೆ


Team Udayavani, Mar 18, 2023, 7:20 AM IST

ಕುಡಿಯುವ ನೀರು ಪೂರೈಕೆಗೆ ಪ್ರತ್ಯೇಕ ತಂಡ: ದ. ಕ. ಜಿಲ್ಲಾಡಳಿತ ಸೂಚನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿಗೆ ತತ್ವಾರ ಎದುರಾದಂತೆ ಎಚ್ಚರ ವಹಿಸಲು ಪ್ರತ್ಯೇಕ ತಂಡ ರಚನೆ ಮಾಡಲಾಗಿದೆ ಎಂದು ದ.ಕ. ಜಿ.ಪಂ. ಸಿಇಒ ಡಾ| ಕುಮಾರ್‌ ಹೇಳಿದರು.

ಜಿಲ್ಲಾಧಿಕಾರಿ ರವಿಕುಮಾರ್‌ ಎಂ.ಆರ್‌. ಅಧ್ಯಕ್ಷತೆಯಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡ ಜಿಲ್ಲಾ ವಿಪತ್ತು ನಿರ್ವಹಣ ಪ್ರಾಧಿಕಾರದ ಸಭೆಯಲ್ಲಿ ಅವರು ಮಾತನಾಡಿದರು. ಸಹಾಯಕ ಕಾ.ನಿ. ಎಂಜಿನಿಯರ್‌, ಕಿ.ಸ. ಎಂಜಿನಿಯರ್‌, ಪಂ. ಅಭಿವೃದ್ಧಿ ಅಧಿಕಾರಿಗಳು ಹಾಗೂ ತಳಮಟ್ಟದ ಸಿಬಂದಿ ಒಳ ಗೊಂಡ ತಂಡ ರಚಿಸಲಾಗಿದೆ. ಆಯಾ ಗ್ರಾ.ಪಂ. ವ್ಯಾಪ್ತಿಯ ಕುಡಿ ಯುವ ನೀರಿನ ಸ್ಥಿತಿಗತಿಗಳನ್ನು ಅವ ಲೋಕಿಸಲಾಗುತ್ತಿದೆ ಎಂದರು.

ಬಾಳೆಪುಣಿ, ನರಿಕೊಂಬು, ಕೊಣಾಜೆ, ತಲಪಾಡಿ ಹಾಗೂ ಮಂಜನಾಡಿ ಯಲ್ಲಿ ಅಂತರ್ಜಲ ಮಟ್ಟ ಕಡಿಮೆ ಇದೆ. ಅಲ್ಲಿ ಲಭ್ಯ ವಿರುವ ಅನುದಾನದಲ್ಲಿ ಬೋರ್‌ವೆಲ್‌ಗ‌ಳ ಡೀಪನಿಂಗ್‌ ಹಾಗೂ ಫ್ಲಷಿಂಗ್‌ ಮಾಡಲಾಗುತ್ತಿದೆ. ಇದು ಫ‌ಲಿಸದ ಕಡೆ ಹೊಸ ಬೋರ್‌ವೆಲ್‌ ಕೊರೆಸಲಾಗುವುದು ಎಂದರು.

ಮೆಸ್ಕಾಂನವರು ಅಗತ್ಯವಿರುವಲ್ಲಿ ತುರ್ತಾಗಿ ವಿದ್ಯುತ್‌ ಸಂಪರ್ಕ ಕಲ್ಪಿಸಿಕೊಡಬೇಕು. ಹೈ ವೋಲ್ಟೆಜ್‌ ತಂತಿಗಳು, ಪರಿವರ್ತಕ ಹಾಗೂ ವಿದ್ಯುತ್‌ ತಂತಿಗಳು ಹಾದು ಹೋಗಿರುವ ಸ್ಥಳಗಳಲ್ಲಿ ಮರಗಳ ರೆಂಬೆ ಕೊಂಬೆ ಕತ್ತರಿಸಬೇಕು. ಅರಣ್ಯ ಇಲಾಖೆಯವರು ಸಹಕರಿಸಬೇಕು ಎಂದರು.

ವಿಪತ್ತು, ಆಪತ್ತುಗಳಾದಂತೆ ಎಚ್ಚರ ವಹಿಸಿ
ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳದವರು ಜಿಲ್ಲೆಯಲ್ಲಿ ಕಾಳಿYಚ್ಚು ಹಾಗೂ ಇತರ ಬೆಂಕಿ ಅವಘಡಗಳನ್ನು ನಂದಿಸುವ ಕಾರ್ಯ ಮಾಡುತ್ತಿದ್ದು, ಜಿಲ್ಲೆಯಲ್ಲಿರುವ ಬೃಹತ್‌ ಕೈಗಾರಿಕೆಗಳು, ಉದ್ದಿಮೆಗಳು ಬೆಂಕಿ ನಂದಿಸುವ ನೀರಿನ ಟ್ಯಾಂಕರ್‌ಗಳನ್ನು ಒದಗಿಸಲು ಕೈಜೋಡಿಸುವಂತೆ ಜಿಲ್ಲಾ ಕೈಗಾರಿಕಾ ಹಾಗೂ ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಗೋಕುಲ್‌ ದಾಸ್‌ ನಾಯಕ್‌ ಅವರಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಔಷಧ ದಾಸ್ತಾನಿಗೆ ಸೂಚನೆ
ಅಕಾಲಿಕ ಮಳೆ ಎದುರಾದಲ್ಲಿ ಅಗತ್ಯ ಔಷಧಗಳನ್ನು ಜಿಲ್ಲೆಯ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ದಾಸ್ತಾನಿರಿಸಿಕೊಳ್ಳಬೇಕು ಹಾಗೂ ಬಿಸಿಗಾಳಿ ಬೀಸುವ ಬಗ್ಗೆ ಸಾರ್ವಜನಿಕರಿಗೆ ಸೂಕ್ತ ಮುನ್ನೆಚ್ಚರಿಕೆ ನೀಡುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಜಿಲ್ಲೆಯ ಗೋಶಾಲೆಗಳಲ್ಲಿ ನೀರು ಹಾಗೂ ಮೇವು ಕಡಿಮೆಯಾಗದಂತೆ ಎಚ್ಚರ ವಹಿಸಬೇಕು ಎಂದು ಪಶುಸಂಗೋಪನೆ ಇಲಾಖೆಯ ಅಧಿಕಾರಿಗೆ ನಿರ್ದೇಶನ ನೀಡಿದರು.ಪಾಲಿಕೆ ಆಯುಕ್ತ ಚೆನ್ನಬಸಪ್ಪ ವೇದಿಕೆಯಲ್ಲಿದ್ದರು.

ಜಿಲ್ಲಾ ಅಗ್ನಿಶಾಮಕ ದಳದ ಅಧಿಕಾರಿ ಭರತ್‌ ಕುಮಾರ್‌, ಜಿಲ್ಲಾ ಮಟ್ಟದ ಅಧಿಕಾರಿಗಳು, ಮಂಗಳೂರು ಪಾಲಿಕೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ವಾರ್ಡ್‌ ಮಟ್ಟದಲ್ಲಿ ಕ್ರಮ: ಡಿಸಿ
ಜಿಲ್ಲಾಧಿಕಾರಿ ರವಿಕುಮಾರ್‌ ಎಂ.ಆರ್‌. ಮಾತನಾಡಿ, ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ತುಂಬೆ ಅಣೆಕಟ್ಟಿನಲ್ಲಿ ನೀರು ಕಡಿಮೆ ಮಟ್ಟ ತಲುಪಿದಲ್ಲಿ ದಿನ ಬಿಟ್ಟು ದಿನ ನೀರು ಪೂರೈಕೆ ಹಾಗೂ ಕನಿಷ್ಠ 3ರಿಂದ 4 ತಾಸು ನೀರು ಪೂರೈಕೆಯ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು.

ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗೆ ಸಂಬಂಧಿಸಿದಂತೆ ಮೂಲ್ಕಿಯಲ್ಲಿ 10, ಮೂಡುಬಿದಿರೆಯಲ್ಲಿ 2 ಹಾಗೂ ಸೋಮೇಶ್ವರದಲ್ಲಿ 4 ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಇತರ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಇಲ್ಲ ಎಂದು ಅಧಿಕಾರಿ ಸಭೆಗೆ ತಿಳಿಸಿದರು. ಸಮಸ್ಯೆ ಎದುರಾದಲ್ಲಿ ಹೊಸ ಬೋರ್‌ವೆಲ್‌ ಕೊರೆಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಟಾಪ್ ನ್ಯೂಸ್

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sand 1

Padubidri: ಮರಳು ಅಕ್ರಮ ಸಾಗಾಟ; ವಶ

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

7(1

Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

1-kuu

ಕಾರ್ಗಿಲ್‌ ದಾಳಿ ಮಾಹಿತಿ ಕೊಟ್ಟ ಕುರಿಗಾಹಿ ಸಾವು: ಸೇನೆ ನಮನ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Surjewala

Pegasus spyware ಬಗ್ಗೆ ಸುಪ್ರೀಂಕೋರ್ಟ್‌ ತನಿಖೆ ನಡೆಸಲಿ: ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.