ಡಬಲ್‌ ಎಂಜಿನ್‌ ಸರ್ಕಾರದಿಂದ ದೇಶ ಅಭಿವೃದ್ಧಿ

Team Udayavani, Mar 18, 2023, 2:32 PM IST

TDY-12

ಮಾಗಡಿ: ಡಬಲ್‌ ಎಂಜಿನ್‌ ಬಿಜೆಪಿ ಸರ್ಕಾರದಿಂದ ದೇಶ ಮತ್ತು ರಾಜ್ಯ ಅಭಿವೃದ್ಧಿಪಥದತ್ತ ಸಾಗುತ್ತಿದೆ ಎಂದು ನಟಿ ತಾರಾ ತಿಳಿಸಿದರು.

ಪಟ್ಟಣದ ಖಾಸಗಿ ಬಸ್ಸು ನಿಲ್ದಾಣದಲ್ಲಿ ಬಿಜೆಪಿ ಯುವ ನಾಯಕ ಕೆ.ಆರ್‌.ಪ್ರಸಾದ್‌ ಗೌಡ ತಮ್ಮ ಸ್ವಂತ ಹಣದಲ್ಲಿ ಜಮೀನು ಖರೀದಿಸಿ ನಿವೇಶನ ಹಂಚಿಕೆ ಮಾಡುವ ಮೂಲಕ ಬಡವರಿಗೆ ಹಕ್ಕುಪತ್ರದ ದಾಖಲೆಗಳನ್ನು ವಿತರಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕೇಂದ್ರದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಮುಂದಾಲೋಚನೆಯಿಂದ ಜನರ ಆಷ್ಟೋತ್ತರಗಳನ್ನು ಈಡೇರಿಸುತ್ತಾ ಬಂದಿದ್ದಾರೆ. ಈ ಮೂಲಕ ದೇಶಾದ್ಯಂತ ಬಿಜೆಪಿಯ ಅಲೆ ಎದ್ದಿದೆ ಎಂದರು.

ಬಿಜೆಪಿ ಅಲೆಯನ್ನು ವಿರೋಧ ಪಕ್ಷದ ನಾಯಕರು ತಡೆಯಲು ಸಾಧ್ಯವಿಲ್ಲ. ದೇಶದ ಆರ್ಥಿಕ ಸುಧಾರಣೆಗಾಗಿ ಪೆಟ್ರೋಲ್‌, ಡೀಸೆಲ್‌, ಗ್ಯಾಸ್‌ ಸಿಲಿಂಡರ್‌ ಬೆಲೆ ಏರಿಕೆಯಾಗಿಯೇ ಹೊರತು, ಬಡವರಿಗೆ ಅನ್ಯಾಯ ಮಾಡುತ್ತಿಲ್ಲ. ಇತರೆ ದೇಶಗಳು ದಿವಾಳಿಯಾಗಿದ್ದು, ಒಪ್ಪತ್ತಿನ ಗಂಜಿಗೂ ಪರದಾಡುವ ಸ್ಥಿತಿಯಿದೆ. ಆದರೆ, ನಮ್ಮ ದೇಶದ ಆರ್ಥಿಕ ಸುಧಾರಣೆಯಲ್ಲಿ ತಮ್ಮದೇ ಆದ ಗತ್ತು ಘನತೆಯನ್ನು ಉಳಿಸಿಕೊಂಡು ಬಂದಿದೆ. ಇದಕ್ಕೆ ಕಾರಣ ಡಬಲ್‌ ಇಂಜಿನ್‌ ಸರ್ಕಾರದ ಆಡಳಿತ ವೈಖರಿ ಎಂದರು.

ಮತ್ತೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಮಾಗಡಿಯಲ್ಲಿ ಕೆ. ಆರ್‌. ಪ್ರಸಾದ್‌ ಗೌಡ ಅವರು ಪಕ್ಷದ ಸಂಘಟ ನೆಯಲ್ಲಿ ತಮ್ಮ ದಕ್ಷತೆ ಮೆರೆದಿದ್ದಾರೆ. ಜತೆಗೆ ಬಡವರ, ದಲಿತರ ಸೇವೆ, ವಿಧವೆಯರಿಗೆ ವಿಶೇಷ ಆದ್ಯತೆ ಮೇರೆಗೆ ಉಚಿತವಾಗಿ ನಿವೇಶನದ ನೀಡುತ್ತಿ ರುವುದು ಅವರ ಸಮಾಜಮುಖೀ ಸೇವೆಗೆ ಹಿಡಿದ ಕನ್ನಡಿಯಾಗಿದೆ. ರಾಜಕೀಯಕ್ಕಾಗಿ ಅಲ್ಲ, ನನ್ನದು ಸಮಾಜಮುಖೀ ಸೇವೆಯಷ್ಟೆ ಎನ್ನುವ ಮೂಲಕ ಮಾನವೀಯತೆ ಮರೆದಿದ್ದಾರೆ ಎಂದ ಅವರು, ಮಾಗಡಿ ಕ್ಷೇತ್ರದ ಬಿಜೆಪಿ ಆಕಾಂಕ್ಷಿ ಕೆ.ಆರ್‌.ಪ್ರಸಾದ್‌ ಗೌಡ ಅವರಿಗೆ ಟಿಕೆಟ್‌ ನೀಡುವುದು ನಾವು, ನೀವ್ಯಾರು ಅಲ್ಲ. ಅದಕ್ಕಾಗಿಯೇ ಹೈಕಮಾಂಡ್‌ ಇದೆ. ಇವರ ಜನಪರವಾದ ಸೇವೆ, ಪಕ್ಷದ ಸಂಘಟನೆ ಗುರುತಿಸಿ ಟಿಕೆಟ್‌ ನೀಡಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಅವರು, ಮತ್ತೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬರಲಿದೆ ಎಂದರು.

3 ಸಾವಿರ ಮಂದಿಗೆ ನಿವೇಶನ: ಬಿಜೆಪಿ ಟಿಕೆಟ್‌ ಆಕಾಂಕ್ಷಿ ಕೆ.ಆರ್‌.ಪ್ರಸಾದ್‌ ಗೌಡ ಮಾತನಾಡಿ, ನನಗೆ ರಾಜಕೀಯವಾಗಿ ಕ್ಷೇತ್ರದ ಜನಶಕ್ತಿ ನೀಡಬೇಕಿದೆ. ನನಗೆ ಅಧಿಕಾರ ಸಿಗಲಿ ಅಥವಾ ಸಿಗದಿರಲಿ ನಿರಂತರವಾಗಿ ಸಮಾಜಮುಖೀ ಸೇವೆಯಲ್ಲಿ ತೊಡಗಿಸಿಕೊಳ್ಳುತ್ತೇನೆ. ಈಗಾಗಲೇ ಸಾವಿರಾರು ಮಹಿಳೆಯರಿಗೆ ಮೂಗುತಿ ನೀಡಿದ್ದೇನೆ. ಧರ್ಮಸ್ಥಳಕ್ಕೆ ಪ್ರವಾಸ ಕಳಿಸಿ ಕೊಟ್ಟಿದ್ದೇನೆ. ದಿವ್ಯಾಂಗ ಕುಟುಂಬಕ್ಕೆ ವಿಧವೆಯರಿಗೆ ನಿವೇಶನ ರಹಿತರಿಗೆ ನಮ್ಮ ತಂದೆ ತಾಯಿ ಹೆಸರಿನಲ್ಲಿದ್ದ ಭೂಮಿಯನ್ನು ಭೂ ಪರಿವರ್ತನೆ ಮಾಡಿಸಿ ನಿವೇಶನ ಹಂಚಿಕೆ ಮಾಡುವ ಮೂಲಕ ಹಕ್ಕುಪತ್ರ ವಿತರಿಸುವ ಕಾರ್ಯಕ್ರಮಕ್ಕೆ ನಟಿ ತಾರಾ ಅವರು ಚಾಲನೆ ನೀಡಿದ್ದಾರೆ.

ಸುಮಾರು 3 ಸಾವಿರ ಮಂದಿಗೆ ಹಂತ- ಹಂತವಾಗಿ ನಿವೇಶನ ನೀಡುವ ಮೂಲಕ ಅವರಿಗೆ ಸೂರು ಕೊಡುವ ಗುರಿ ಹಾಕಿಕೊಂಡಿದ್ದೇನೆ ಎಂದರು. ಬಿಜೆಪಿ ರಾಜ್ಯ ವಕ್ತಾರರಾದ ಆಶ್ವಿ‌ನಿ, ಶಂಕರ್‌, ಪಿಲ್ಮ ಸಿಟಿ ನಿರ್ದೇಶಕ ಸುನೀಲ್‌ ಪುರಾಣಿಕ್‌, ಬಿಜೆಪಿ ಜಿಲ್ಲಾಧ್ಯಕ್ಷ ಹುಲುವಾಡಿ ದೇವರಾಜು, ತಾಲೂಕು ಬಿಜೆಪಿ ಅಧ್ಯಕ್ಷ ಬಿ.ಎಂ. ಧನಂಜಯ, ವೀಣಾ, ಭಾಗ್ಯಮ್ಮ, ಜಯರಾಮ್‌ ಬಸವರಾಜು, ಶಿವಕುಮಾರ್‌, ನಾರಾಯಣ್‌, ಭಾಸ್ಕರ್‌, ಪಾಂಡುರಂಗ, ಮೂರ್ತಿ ಲೋಕೇಶ್‌, ಕುಮಾರ್‌ ಹಾಗೂ ಇತರರು ಇದ್ದರು.

ಟಾಪ್ ನ್ಯೂಸ್

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.