ಬ್ಯಾಡಗಿ:ದೇಶದ ಆರ್ಥಿಕತೆಗೆ ಸಹಕಾರಿ ಬ್ಯಾಂಕ್‌ಗಳೇ ಅಡಿಪಾಯ

ಇಚ್ಛಾಶಕ್ತಿ ಕೊರತೆಯಿಂದ ಇಂದಿಗೂ ಸಾಧ್ಯವಾಗಿಲ್ಲ

Team Udayavani, Mar 18, 2023, 3:24 PM IST

ಬ್ಯಾಡಗಿ:ದೇಶದ ಆರ್ಥಿಕತೆಗೆ ಸಹಕಾರಿ ಬ್ಯಾಂಕ್‌ಗಳೇ ಅಡಿಪಾಯ

ಬ್ಯಾಡಗಿ: ರೈತರೇ ಕಾರ್ಯನಿರ್ವಹಿಸುತ್ತಿರುವ ಸಹಕಾರಿ ಬ್ಯಾಂಕ್‌ಗಳು (ಫಾರ್ಮರ್ಸ್‌ ಸೊಸೈಟಿ) ದೇಶದ ಆರ್ಥಿಕ ಅಭ್ಯುದಯಕ್ಕೆ ಭದ್ರ ಬುನಾದಿ ಹಾಕಿವೆ. ಆದರೆ, ಇಡೀ ಬ್ಯಾಂಕ್‌ ವ್ಯವಸ್ಥೆಯನ್ನು, ಸಂಸ್ಥೆಯನ್ನು ಸ್ವಾರ್ಥಕ್ಕಾಗಿ ಬಳಸಿಕೊಂಡಿರುವ ಕೆಲವರಿಂದ ಅವುಗಳು ವಿನಾಶದ ಅಂಚಿಗೆ ಬಂದಿರುವುದು ಖೇದಕರ ಸಂಗತಿ ಎಂದು ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಅಭಿಪ್ರಾಯ ವ್ಯಕ್ತಪಡಿಸಿದರು.

ಆತ್ಮನಿರ್ಭರ ಭಾರತ ಯೋಜನೆಯಡಿ ನಬಾರ್ಡ್‌ ಪ್ರಾಯೋಜಕತ್ವದಲ್ಲಿ ಪಟ್ಟಣದ ವ್ಯವಸಾಯೋತ್ಪನ್ನ ಸೇವಾ ಸಹಕಾರಿ(ವಿಎಸ್‌ ಎಸ್‌)ಬ್ಯಾಂಕ್‌ 65 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ನೂತನ ಗೋದಾಮು ಹಾಗೂ ವಾಣಿಜ್ಯ ಸಂಕೀರ್ಣ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.

ಆತ್ಮನಿರ್ಭರ ಯಶಸ್ವಿ ಹೆಜ್ಜೆ: ಪ್ರಧಾನಿ ನರೇಂದ್ರ ಮೋದಿ ಅವರು ಪ್ರಕಟಿಸಿದ ಆತ್ಮನಿರ್ಭರ ಭಾರತ ಅತ್ಯಂತ ಯಶಸ್ಸಿನತ್ತ ದಾಪುಗಾಲು ಹಾಕಿದೆ. ಹೀಗಾಗಿ, ದೇಶದ ರೈತರ ಸಹಕಾರಿ ಬ್ಯಾಂಕ್‌ಗಳನ್ನು ಸ್ವಾಯತ್ವವಾಗಿ ಕಾರ್ಯ ನಿರ್ವಹಿಸುವುದು ಸೇರಿದಂತೆ ಸ್ವಂತ ನಿವೇಶನ ಹೊಂದಿರುವ ಕಡೆಗಳಲ್ಲಿ ಮೇಲ್ದರ್ಜೆಗೇರಿಸಲು ಅನುದಾನ ನೀಡಿದ್ದು ಅತ್ಯಂತ ಸ್ತುತ್ಯರ್ಹ ಹಾಗೂ ಸ್ವಾಗತಾರ್ಹ ಕ್ರಮವಾಗಿದೆ ಎಂದರು.

ಪ್ರಯೋಜನ ಪಡೆದುಕೊಳ್ಳಿ: ಸದರಿ ಸಹಕಾರಿ ಬ್ಯಾಂಕ್‌ಗಳಲ್ಲಿ ರೈತರು ಹಣ ಹೂಡಿಕೆ ಮಾಡುವ ಮೂಲಕ ಕಡಿಮೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ಸಹಕಾರಿ ಬ್ಯಾಂಕ್‌ಗಳನ್ನು ಆದಾಯಕ್ಕೆ ತರುವುದೂ ಸಹ ನಿಮ್ಮೆಲ್ಲರ ಕೈಯಲ್ಲಿದೆ. ಸದರಿ ವಿಎಸ್‌ ಎಸ್‌ ಬ್ಯಾಂಕ್‌ ವ್ಯಾಪ್ತಿಗೆ ಬರುವ ಎಲ್ಲ ರೈತರು ಇದರ ಪ್ರಯೋಜನ ಪಡೆದುಕೊಳ್ಳುವ ಮೂಲಕ ಸರ್ಕಾರದ ಮೂಲ ಉದ್ದೇಶಕ್ಕೆ ಸಹಕರಿಸುವಂತೆ ಮನವಿ ಮಾಡಿದರು.

ಸಹಕಾರಿ ವ್ಯವಸ್ಥೆ ಗಟ್ಟಿಗೊಳ್ಳಲಿ: ಕಾಂಗ್ರೆಸ್‌ ಮುಖಂಡ ಎಸ್‌.ಆರ್‌.ಪಾಟೀಲ ಮಾತನಾಡಿ, ಸಹಕಾರಿ ವ್ಯವಸ್ಥೆ ಗಟ್ಟಿಗೊಳ್ಳಬೇಕಾದಲ್ಲಿ ರೈತರು ಇದರಲ್ಲಿ ಸಂಪೂರ್ಣವಾಗಿ ಹಣ ಹೂಡಿಕೆ  ಮಾಡಬೇಕಾಗುತ್ತದೆ. ಜಿಲ್ಲೆಗೆ ಡಿಸಿಸಿ ಬ್ಯಾಂಕ್‌ ಸ್ಥಾಪನೆಯಾಗಬೇಕೆಂಬುದು ಜಿಲ್ಲೆಯ ರೈತರು ಮತ್ತು ಎಲ್ಲ ವಿಎಸ್‌ಎಸ್‌ ಬ್ಯಾಂಕ್‌ ಗಳ ಒತ್ತಾಸೆಯಾಗಿತ್ತು. ಆದರೆ, ಇಚ್ಛಾಶಕ್ತಿ ಕೊರತೆಯಿಂದ ಇಂದಿಗೂ ಸಾಧ್ಯವಾಗಿಲ್ಲ. ಹೀಗಾಗಿ, ರೈತರು ಸಾಲ ಸೌಲಭ್ಯದಿಂದ ವಂಚಿತರಾಗಿದ್ದು, ಈ ಕುರಿತು ಆಡಳಿತಾರೂಢ ಸರ್ಕಾರಗಳು ಚಿಂತನೆ ನಡೆಸಬೇಕಾಗಿದೆ ಎಂದರು.

ಮುಪ್ಪಿನೇಶ್ವರ ಮಠದ ಚನ್ನಮಲ್ಲಿಕಾರ್ಜುನ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು. ವೇದಿಕೆಯಲ್ಲಿ ಪುರಸಭೆ ಅಧ್ಯಕ್ಷೆ ಫಕ್ಕೀರಮ್ಮ ಛಲವಾದಿ, ಉಪಾಧ್ಯಕ್ಷೆ ಮಲ್ಲಮ್ಮ ಪಾಟೀಲ, ಸದಸ್ಯ ಚಂದ್ರಣ್ಣ ಶೆಟ್ಟರ, ವಿಎಸ್‌ಎಸ್‌ ಬ್ಯಾಂಕ್‌ ಅಧ್ಯಕ್ಷ ಚಿಕ್ಕಪ್ಪ ಛತ್ರದ, ಮಾಜಿ ಅಧ್ಯಕ್ಷ ಗಂಗಣ್ಣ ಎಲಿ, ಉಪಾಧ್ಯಕ್ಷ ಕರಬಸಪ್ಪ ಬೆನಕನಕೊಂಡ, ಸದಸ್ಯರಾದ ಚನ್ನಬಸಪ್ಪ ಎಲಿ, ಉಮೇಶ ಸಂಕಣ್ಣನವರ ಚಂದ್ರಶೇಖರ ಛತ್ರದ, ರಾಜಶೇಖರಗೌಡ ಚನ್ನಗೌಡ್ರ, ಪೀರಸಾಬ್‌ ಮೆಡ್ಲೆರಿ, ಸಂತೋಷ
ಬಾಣಾಪೂರ, ಭಾಷಾಸಾಬ್‌ ಕಬ್ಬೂರ, ನೀಲಮ್ಮ ಹೊಸ್ಮನಿ, ಮಲ್ಲವ್ವ ಸಂಕಣ್ಣನವರ, ಕೆಸಿಸಿ ಬ್ಯಾಂಕ್‌ ನಿರ್ದೇಶಕ ಪ್ರಕಾಶ ಗಣೇಶ್ಕರ, ಕೆಸಿಸಿ ಬ್ಯಾಂಕ್‌ ನಿರೀಕ್ಷಕ ಕೆ.ಬಿ.ಹೊನ್ನತ್ತೇರ, ವಿಎಸ್‌ಎಸ್‌ ಸಿಇಒ ರಾಜೇಂದ್ರ ಹಿರೇಮಠ ಉಪಸ್ಥಿತರಿದ್ದರು. ಪೂಜಾ ಸೋಗಿ ಸ್ವಾಗತಿಸಿ, ಕಿರಣ ಸೋಗಿ ವಂದಿಸಿದರು.

ಟಾಪ್ ನ್ಯೂಸ್

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

Suicide 3

Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

Haveri: ಜಾನಪದ ವಿವಿ ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

4

Karkala: ಅಸ್ವಸ್ಥಗೊಂಡು ವ್ಯಕ್ತಿ ಸಾವು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

1-vasu

Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.