ಕುಂಬಳೆಯಲ್ಲಿ ಹೊಡೆದಾಟ:ಪೊಲೀಸರಿಂದ ಲಾಠಿ ಪ್ರಹಾರ
Team Udayavani, Mar 19, 2023, 5:20 AM IST
ಕುಂಬಳೆ: ಕುಂಬಳೆ ಬಸ್ ನಿಲ್ದಾಣ ಪರಿಸರದಲ್ಲಿ ಪರಸ್ಪರ ಹೊಡೆದಾಡಿಕೊಂಡ ಘಟನೆ ನಡೆದಿದ್ದು, ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಇಲ್ಲಿನ ಜಿಎಚ್‌ಎಸ್‌ಎಸ್‌ನ ವಿದ್ಯಾರ್ಥಿಗಳ ಮಧ್ಯೆ ನಡೆದ ಹೊಡೆದಾಟದಲ್ಲಿ ನಿರತರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು. ವಿದ್ಯಾರ್ಥಿನಿಯರ ಬಗ್ಗೆ ಉಂಟಾದ ವಾಗ್ವಾದವೇ ವಿದ್ಯಾರ್ಥಿಗಳ ಮಧ್ಯೆ ಹೊಡೆದಾಟಕ್ಕೆ ಕಾರಣವಾಗಿದೆ ಎನ್ನಲಾಗಿದೆ.
ಎಸೆಸೆಲ್ಸಿ ಪರೀಕ್ಷೆ ಮುಗಿದು ಪೇಟೆಗೆ ತಲುಪಿದ ಹತ್ತನೇ ವಿದ್ಯಾರ್ಥಿಗಳ ಹಾಗೂ ಒಂಬತ್ತನೇ ತರಗತಿ ವಿದ್ಯಾರ್ಥಿಗಳ ಮಧ್ಯೆ ಹೊಡೆದಾಟ ನಡೆದಿದೆ. ಈ ಹಿಂದೆಯೂ ವಿದ್ಯಾರ್ಥಿಗಳ ಮಧ್ಯೆ ಹೊಡೆದಾಟ ನಡೆದಿತ್ತು. ಕೆಲವು ವಿದ್ಯಾರ್ಥಿಗಳಿಗೆ ಟಿ.ಸಿ. ನೀಡಿ ಶಾಲೆಯಿಂದ ಹೊರ ಹಾಕಿದ್ದರಿಂದ ಹೊಡೆದಾಟ ನಿಯಂತ್ರಣಕ್ಕೆ ಬಂದಿತ್ತು.
ನಾಪತ್ತೆಯಾಗಿದ್ದ ಯುವತಿ : ವಿವಾಹಿತೆಯಾಗಿ ಪತ್ತೆ
ಬದಿಯಡ್ಕ: ನಾಪತ್ತೆಯಾಗಿದ್ದ ಯುವತಿ ಅನ್ಯ ಧರ್ಮೀಯ ಯುವಕನ ಜತೆ ವಿವಾಹವಾಗಿದ್ದು, ಈ ದಂಪತಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯ ಅವರನ್ನು ಸ್ವ ಇಚ್ಛೆಯಂತೆ ತೆರಳಲು ತಿಳಿಸಿದಾಗ ಯುವತಿ ಯುವಕನ ಜತೆ ತೆರಳಿದ್ದಾಳೆ. ಪಿಲಾಂಕಟ್ಟೆಯ ನಿವಾಸಿ 19 ವರ್ಷದ ಫಾತಿಮಾ ನಾಪತ್ತೆಯಾದ ಬಗ್ಗೆ ಬದಿಯಡ್ಕ ಪೊಲೀಸರಿಗೆ ದೂರು ನೀಡಲಾಗಿತ್ತು. ಪೊಲೀಸರು ನಡೆಸಿದ ತನಿಖೆಯಲ್ಲಿ ಈಕೆ ಪಾಣತ್ತೂರು ಚೆಂಬೇರಿ ನಿವಾಸಿ ಚಾಲಕನ ಜತೆ ವಿವಾಹವಾಗಿರುವುದನ್ನು ಪತ್ತೆಹಚ್ಚಲಾಗಿದೆ. ಯುವಕ ಬಸ್ ಹಾಗೂ ಕಲ್ಲಿನ ಲಾರಿಯಲ್ಲಿ ಚಾಲಕನಾಗಿ ದುಡಿಯುತ್ತಿದ್ದು, ಇವರು ಕಳೆದ ಮೂರು ವರ್ಷದಿಂದ ಪ್ರೀತಿಸುತ್ತಿದ್ದರೆನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು
Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ
Kumbale: ವರ್ಕಾಡಿ ಪ್ಲೈವುಡ್ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ
Kasargod: ಬೆಕ್ಕಿಗಾಗಿ ಬಾವಿಗಿಳಿದ ವಿದ್ಯಾರ್ಥಿಯ ರಕ್ಷಣೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.