ಬರೀ ಉಪ್ಪಿನ ಮಾತಲ್ಲ; ಊರಿನ ಮಾತು


Team Udayavani, Mar 19, 2023, 6:00 AM IST

ಬರೀ ಉಪ್ಪಿನ ಮಾತಲ್ಲ; ಊರಿನ ಮಾತು

ಸ್ಥಳೀಯ ಆರ್ಥಿಕತೆಯ ಆರೋಗ್ಯ ಕಾಪಾಡುವುದು ನಮ್ಮ ಹಿರಿಯರ ಜೀವನದ ಭಾಗವೂ ಆಗಿತ್ತು, ಶೈಲಿಯೂ ಆಗಿತ್ತು. ಅವನೂ ಬದುಕಲಪ್ಪ ಎನ್ನುವ ಮಾತಿನಲ್ಲಿ ಬರೀ ಒಬ್ಬನಿಗೆ ಒಳ್ಳೆಯದು ಮಾಡುವ, ಬದುಕು ನೀಡುವ ಕಾಳಜಿಯಷ್ಟೇ ಇಲ್ಲ; ಆದರ ಹಿನ್ನೆಲೆಯಲ್ಲಿ ಒಂದು ಕುಟುಂಬ ಇದೆ, ಅದರೊಂದಿಗೆ ಅಂಥ ಕುಟುಂಬಗಳ ಊರುಗಳಿವೆ. ಅವೆಲ್ಲವೂ ಉಳಿಯಬೇಕೆಂಬ ಸ್ವಾವಲಂಬಿ ಆಲೋಚನೆಯಿದೆ.

ಇದು ಬಾಲ್ಯದಲ್ಲಿನ ಘಟನೆ. ರಾಜ್ಯದ ರಾಜಧಾನಿಯಿಂದ ಸುಮಾರು 400 ಕಿ.ಮೀ. ದೂರದಲ್ಲಿ ವಾಸವಿದ್ದ ಸಂದರ್ಭವದು. ಆಗಷ್ಟೇ ಹಳ್ಳಿಗಳ ವಿದ್ಯಾವಂತ ಹುಡುಗರು ಹಾಗೂ ಅರೆ ವಿದ್ಯಾವಂತ ಹುಡುಗರು ಉದ್ಯೋಗಕ್ಕೆಂದು ನಗರಗಳಿಗೆ, ವಿಶೇಷವಾಗಿ ಬೊಂಬಾಯಿ, ಬೆಂಗಳೂರಿಗೆ ವಲಸೆ ಹೋಗುತ್ತಿದ್ದ ಹೊತ್ತು. ಆಗ ನಮ್ಮ ಕಣ್ಣಿಗೆ ಬೊಂಬಾಯಿಯೇ ದೊಡ್ಡ ನಗರವಾಗಿ ಕಾಣುತ್ತಿದ್ದುದು. ಅನಿವಾರ್ಯತೆಯ ಬದಲಿಗೆ ಆಯ್ಕೆಯಾಗಿ ಬೆಂಗಳೂರು ಆಗತಾನೇ ಕಾಣತೊಡಗಿತ್ತು. ನನ್ನ ಸಂಬಂಧಿಕನೊಬ್ಬ ಕೆಲಸ ಹುಡುಕಿಕೊಂಡು ಬೆಂಗಳೂರಿಗೆ ಹೋಗಿ ಕೆಲವು ತಿಂಗಳ ಬಳಿಕ ಕಂಪೆನಿಯೊಂದರ ಉದ್ಯೋಗಿಯಾದ. ಆ ಸುದ್ದಿಗೆ ಊರಿಗೇ ಊರೇ ಸಂಭ್ರಮಿಸುತ್ತಿತ್ತು. ನನ್ನಂತ ಮಕ್ಕಳು ಬಹಳಷ್ಟು ಮಂದಿ ಇದ್ದರು. ಎಲ್ಲರ ಅಪ್ಪಂದಿರೂ ನನ್ನ ಸಂಬಂಧಿಕನ ಮುಖವಿರುವಲ್ಲಿ ನಮ್ಮ ಮುಖವನ್ನು ಕಟ್‌ ಆ್ಯಂಡ್‌ ಪೇಸ್ಟ್‌ ಮಾಡಿ ನೋಡುತ್ತಿದ್ದರು ಎನಿಸುತ್ತದೆ. ಯಾಕೆಂದರೆ ಎಲ್ಲ ಅಪ್ಪಂದಿರ ಒಂದೇ ಗುರಿ- “ಮಕ್ಕಳು ಓದಿ, ಬೆಂಗಳೂರಿನಂಥ ನಗರಕ್ಕೆ ಹೋಗಿ ಉದ್ಯೋಗ ಪಡೆಯಬೇಕು’. ಈ ನಗರದತ್ತ ವಲಸೆ ಆಗಲೇ ಜೋರಾಗಿತ್ತು. ಆದರೆ ಚಿಕ್ಕವರಾಗಿದ್ದ ನಮಗೆ ಈ ನಗರ ವಲಸೆ ಇತ್ಯಾದಿ ಯಾವುದೂ ಅರ್ಥವಾಗುತ್ತಿರಲಿಲ್ಲ. ಎಲ್ಲರ ಕಣ್ಣೆದುರು ಅದೊಂದು ಹಂಬಲದ ಪರ್ವತವಾಗಿತ್ತಷ್ಟೆ.

ಒಂದು ದಿನ ಉದ್ಯೋಗ ಪಡೆದ ಮೇಲೆ ಮೊದಲ ಬಾರಿಗೆ ಆತ ಊರಿಗೆ ಬಂದ. ಮನೆ ತುಂಬಾ ಜನರಿದ್ದರು. ಎಲ್ಲರೂ ವಿಶೇಷ ಪ್ರಾಣಿಯಂತೆ ಕಂಡು ಬಂದರು. ಎಲ್ಲರೂ ನಗರದಲ್ಲಿನ ಅನುಭವಗಳನ್ನು ಕಿವಿಯಲ್ಲಿ ತುಂಬಿಕೊಳ್ಳಲು ಉತ್ಸುಕರಾಗಿದ್ದರು. ಅದಕ್ಕೆ ತಕ್ಕಂತೆ ಬೆಂಗಳೂರಿನ ಬಸ್‌ಗಳ ಕಥೆ, ಅಲ್ಲಿನ ಬಂಗಲೆಗಳ ಕಥೆ, ಸಪಾಟಾಗಿದ್ದ ಕರಿ ರಸ್ತೆಗಳ ಬಗ್ಗೆ ಆತ ವಿವರಿಸಿದಾಗ ಬಾಯಿ ತೆರೆದುಕೊಂಡು ಕೇವಲ ಕೇಳಿಸಿಕೊಳ್ಳಲಿಲ್ಲ. ಪ್ರತೀ ದೃಶ್ಯದಲ್ಲೂ ಮಾತಿನ ಮಧ್ಯೆ ಅಲ್ಪವಿರಾಮ ಹಾಕಿದಾಗಲೆಲ್ಲ ತಮ್ಮ ತಮ್ಮ ಕಲ್ಪನಾಲೋಕಕ್ಕೆ ಹೋಗಿ ಬರುತ್ತಿದ್ದರು. ಸುಮಾರು ಒಂದು ಗಂಟೆ ಕಾಲ ಈ ಅನುಭವ ಲಹರಿಯನ್ನು ನಾನೂ ಕೇಳುತ್ತಾ ಕುಳಿತಿದ್ದೆ. ಎಲ್ಲವೂ ಮುಗಿದು ಜನರೆಲ್ಲ ಹೊರಟು ಹೋದರು. ನಾನು ಅಲ್ಲೇ ಕುಳಿತಿದ್ದೆ.

ಆತ ತನ್ನ ತಿಂಗಳ ಮೊದಲ ಸಂಬಳದ ಕೊಡುಗೆ ಎನ್ನುವಂತೆ ಒಂದು ವಾಚನ್ನು ತಂದು ಅಪ್ಪನೆದುರು ಹಿಡಿದ. ಅಪ್ಪನಿಗೆ ಅಚ್ಚರಿ. ಎಷ್ಟು ಕೊಟ್ಟೆ ಎಂಬ ಪ್ರಶ್ನೆ ಬಂದಿತು. ಅದಕ್ಕೊಂದು ಉತ್ತರ ಸಿಕ್ಕಿತು. ಆಗ ಅವನಪ್ಪ, “ಇದು ಇಲ್ಲಿಯೇ ಸಿಗುತ್ತಿರಲಿಲ್ಲವೇ?’ ಎಂದು ಕೇಳಿದರು. ಅದಕ್ಕೆ ಸಿಗುತ್ತಿತ್ತು, ಆದರೆ ಬೆಂಗಳೂರು ಸ್ವಲ್ಪ ಚೀಪ್‌ (ಅಗ್ಗ) ಎಂದು ವಿವರಿಸಿದ. ಆಗ ಅವನಪ್ಪ, “ದೊಡ್ಡ ನಗರದಲ್ಲಿ ನೂರಾರು ಜನ ಕೊಳ್ಳುವವರು ಇರುತ್ತಾರೆ, ಅಂಗಡಿಯವರೂ ಒಟ್ಟಿಗೇ ಸಾವಿರಾರು ವಾಚನ್ನು ಕೊಳ್ತಾರೆ, ಸ್ವಲ್ಪ ಅಗ್ಗದಲ್ಲೇ ಸಿಗಬಹುದು. ಆದರೆ ಮುಂದಿನ ಬಾರಿಯಿಂದ ಎಲ್ಲವನ್ನೂ ಸಿಟಿಯಿಂದ ತರಬೇಡಪ್ಪ, ನಮ್ಮ ಊರಿನ ಅಂಗಡಿಯೋರೂ ಸ್ವಲ್ಪ ಬದುಕಲಪ್ಪ’ ಎಂದರು.

ಈ ಇಡೀ ಪ್ರಸಂಗ ನಡೆದದ್ದು ಸರಿ ಸುಮಾರು 35 ವರ್ಷಗಳ ಹಿಂದೆ. ಆ ಹೊತ್ತಿಗೇ ಈ ನಗರ ವಲಸೆಯ ಆತಂಕಕ್ಕಿಂತಲೂ ಹೆಚ್ಚಿನ ಕಾಳಜಿ ಇದ್ದದ್ದು ಸ್ಥಳೀಯ ಆರ್ಥಿಕತೆಯ ಆರೋ ಗ್ಯವನ್ನು ಕಾಪಾಡುವ ಬಗ್ಗೆ. ಇಂದು ನಮ್ಮ ಮಕ್ಕಳೆಲ್ಲ ನಗರಗಳಿಗೆ ಹೋಗಿದ್ದಾರೆ, ನಾವೂ ಊರಲ್ಲಿರುವ ಮನೆಗೆ ಬೀಗ ಹಾಕಿ ನಗರದಲ್ಲೇ ಕುಳಿತುಕೊಳ್ಳುವ ಆಲೋಚನೆಯಲ್ಲಿದ್ದೇವೆ. ಈ ಊರಿನಲ್ಲಿದ್ದ ಅಂಗಡಿಯವರೂ ಒಂದು ದಿನ ಬೀಗ ಹಾಕಿ ಉದ್ಯೋಗ ಹುಡುಕಿಕೊಂಡು ನಾವಿರುವ ನಗರಕ್ಕೇ ಬಂದರೂ ಬರಬಹುದು. ಆಗ ಇಡೀ ಊರಿಗೆ ದೊಡ್ಡ ಬೀಗ ಹಾಕಿ ಬಿಟ್ಟರೆ ಮುಗಿಯಿತು.

ಇಂದು ನಾವಿರುವುದು ಆನ್‌ಲೈನ್‌ ಜಗತ್ತಿನಲ್ಲಿ. ಕೈಯಲ್ಲಿ ಸ್ಮಾರ್ಟ್‌ ಫೋನ್‌ ಇದೆ. ಅಂತರ್ಜಾಲ ಸಂಪರ್ಕವಿದೆ. ಮೊಬೈಲ್‌ನಲ್ಲಿ ಸಿಗುವ ಅಂಗಡಿಗಳಲ್ಲಿ ಉಪ್ಪಿನಿಂದ ಹಿಡಿದು ನಮ್ಮೂರಿನ ಸೌತೆಕಾಯಿ ಸಹಿತ ಎಲ್ಲವನ್ನೂ ಖರೀದಿಸುವ ಹುಮ್ಮಸ್ಸಿನಲ್ಲಿದ್ದೇವೆ. ಅದರಲ್ಲಿ ಕಾಣುವ ರಿಯಾಯಿತಿಯ ಬಣ್ಣಗಳು ನಮ್ಮನ್ನು ಆಕರ್ಷಿಸುತ್ತವೆ. ಇದರ ಎದುರು ನಮಗೆ ಬೇರೇನೂ ತೋರದು. ಒಂದು ವೇಳೆ ಯಾರಾ ದರೂ ಹಿರಿಯರು ಎಲ್ಲವೂ ಆನ್‌ಲೈನ್‌ನಲ್ಲಿ ಯಾಕಪ್ಪಾ ಎಂದು ಕೇಳಿದರೆ, “ನಿಮ್ಮ ಕಾಲ ಮುಗೀತಪ್ಪ. ಈಗ ಎಲ್ಲವೂ ಮೊಬೈಲ್‌ನಲ್ಲೇ. ಅದೊಂದಕ್ಕೆ ಅಲ್ಲಿ ಹೋಗಿ ಯಾರು ಟೈಮ್‌ ವೇಸ್ಟ್‌ ಮಾಡ್ತಾರೆ’ ಎಂದು ಮಾತು ಮುಗಿಸುತ್ತೇವೆ. ನಿಜ, ವಿವಿಧ ರಂಗುಗಳ ಎದುರು ಹಳೆಯದ್ದೇನಿದ್ದರೂ ಕಪ್ಪು ಮತ್ತು ಬಿಳುಪು!

ಲೇಖನದ ಆರಂಭದಲ್ಲಿ ಬಂದ ಅಪ್ಪನ ಮಾತನ್ನು ಮತ್ತೆ ನೆನಪಿಸಿಕೊಳ್ಳೋಣ. ಊರಲ್ಲಿರುವ ಅಂಗಡಿಯವನ ಬದುಕಿನ ಬಗೆಗಿನ ಪ್ರಶ್ನೆ ಸ್ಥಳೀಯ ಆರ್ಥಿಕತೆಯ ಮೂಲದ್ದೇ.

ಜಾಗತೀಕರಣದ ಭರದಲ್ಲಿ ನಾವು ಸ್ಥಳೀಯ ಆರ್ಥಿಕತೆಯ ಸರಳ ಸತ್ಯವನ್ನು ಅರ್ಥ ಮಾಡಿಕೊಳ್ಳುವಲ್ಲಿ ಸೋಲುತ್ತಿದ್ದೇವೆ. ಆ ಅಪ್ಪ ಹೇಳಿದ ಮಾತಿನ ಅರ್ಥವನ್ನು ಶೋಧಿಸದೇ ಅವ ಗಣಿಸುತ್ತೇವೆ. ಆದರೆ ಈ ಮಾತಿನಲ್ಲಿ ಸತ್ಯವೂ ಇದೆ, ಸತ್ವವೂ ಇದೆ. ಒಂದು ಕೆ.ಜಿ. ಉಪ್ಪನ್ನು ಊರಿನ ಅಂಗಡಿಯಿಂದ ಕೊಳ್ಳುವುದಕ್ಕೂ, ಆನ್‌ಲೈನ್‌ ಇತ್ಯಾದಿ ಖರೀದಿಗೂ ಇರುವ ಕಣ್ಣಿಗೆ ಢಾಳಾಗಿ ಕಾಣುವ ವ್ಯತ್ಯಾಸ ಒಂದಿದೆ. ಉದಾಹರಣೆಗೆ ನಮ್ಮ ಹಳ್ಳಿಯ ಅಂಗಡಿಯವನಲ್ಲಿ ಹತ್ತು ರೂ. ಕೊಟ್ಟು ಒಂದು ಕೆ.ಜಿ. ಉಪ್ಪನ್ನು ಖರೀದಿಸಿದೆವು ಎಂದುಕೊಳ್ಳಿ. ಆ ಹತ್ತು ರೂ. ನಲ್ಲಿ 5-6 ರೂ. ಉಪ್ಪು ಉತ್ಪಾದಿಸಿದ ಕಂಪೆನಿಗೆ ಹೋಗಬಹುದು. ಉಳಿದ ನಾಲ್ಕು ರೂ. ಗಳು ಅಂಗಡಿಯವನಿಗೆ ಸಿಗಬಹುದು. ಆತ ಆ ನಾಲ್ಕು ರೂ. ಗಳಲ್ಲಿ ಒಂದು ರೂ. ಗಳನ್ನು ತನ್ನಲ್ಲಿನ ಉದ್ಯೋಗಿಗಳಿಗೆ ಕೊಡುತ್ತಾನೆ. ಆ ಉದ್ಯೋಗಿಗಳೂ ಸ್ಥಳೀಯರೇ. ಉಳಿದ ಎರಡು ರೂ. ಗಳನ್ನು ಬಂಡವಾಳವಾಗಿ ಹೂಡಿಕೆ ಮಾಡುತ್ತಾನೆ. ಒಂದು ರೂ. ಅವನ ಸ್ಥಳೀಯ ಖಾತೆಗೆ ಠೇವಣಿಗೆ ತೆರಳಬಹುದು ಎಂದುಕೊಳ್ಳೋಣ.

ಈಗ ಇದರ ಒಂದು ವೃತ್ತವನ್ನು ಗಮನಿಸೋಣ. ಇಂಥ ಉಳಿತಾಯದ ಹಣದಿಂದಲೇ ಆ ಬ್ಯಾಂಕ್‌ ಸ್ಥಳೀಯರಿಗೆ ಸಾಲ ಒದಗಿಸುತ್ತದೆ. ಅದರ ಮೂಲಕ ಸ್ಥಳೀಯರಿಗೆ ಉದ್ಯೋಗ ಸಿಗುತ್ತದೆ. ಆರ್ಥಿಕತೆ ಬಲಗೊಳ್ಳುತ್ತದೆ. ಆ ಅಂಗಡಿಯ ಉದ್ಯೋಗಿಗಳು ಪಡೆದ ಸಂಬಳದಲ್ಲಿ ತಮ್ಮ ಅಗತ್ಯಗಳನ್ನು ಖರೀದಿಸುವ ಮೂಲಕ ಆ ಹಣವನ್ನು ಸ್ಥಳೀಯ ಆರ್ಥಿಕತೆಗೆ ಹರಿಯಬಿಡುತ್ತಾರೆ. ಅಂದರೆ ನಮ್ಮ ಹತ್ತು ರೂ. ಗಳಲ್ಲಿನ ಶೇ. 40 ರಷ್ಟು ಹಣ ಸ್ಥಳೀಯ ಆರ್ಥಿಕತೆಗೆ ಮರು ಹೊಂದಿಕೆಯಾಗುತ್ತದೆ. ಸ್ಥಳೀಯ ಪಂಚಾಯತ್‌ಗಳಿಗೆ ತೆರಿಗೆ ಪಾವತಿಯಾಗುವುದೂ ಈ ಹಣದಿಂದಲೇ. ಅದರಿಂದಲೇ ಸೌಲಭ್ಯ ಒದಗಿಸಲೂ ಸಾಧ್ಯವಾಗುವಂಥದ್ದು. ಒಂದುವೇಳೆ ಈ ಸರಪಳಿ ಕಡಿದು ಹೋದರೆ ಒಂದೊಂದೇ ಕಂಬಗಳು ಕುಸಿಯತೊಡಗುತ್ತವೆ.

ಆನ್‌ಲೈನ್‌ ಖರೀದಿಯಲ್ಲಿ ನಾಲ್ಕು ರೂ. ನಲ್ಲಿ ಹೆಚ್ಚೆಂದರೆ ಒಂದು ರೂ. ಸ್ಥಳೀಯವಾಗಿ (ತೆರಿಗೆ, ಡೆಲಿವರಿ ಬಾಯ್‌ಗೆ ಕೊಡುವ ಸಂಭಾವನೆ) ಬಳಕೆಯಾದರೆ ದೊಡ್ಡದು. ಲಾಭಾಂಶವೆಲ್ಲವೂ ಕಂಪೆನಿ ಇರುವಲ್ಲಿ ಹೂಡಿಕೆಯಾಗುತ್ತದೆ. ಇದರರ್ಥ ಸ್ಥಳೀಯ ಆರ್ಥಿಕತೆಗೆ ಹಣ ಹರಿಯುವುದಿಲ್ಲ.

ಇಂಥದೊಂದು ಸೂಕ್ಷ್ಮ ಆರ್ಥಿಕ ಸಂಗತಿಯನ್ನು ಎಷ್ಟು ಸರಳವಾಗಿ ಅವರು ಹೇಳಿಕೊಟ್ಟರು. ಮಹಾತ್ಮಾ ಗಾಂಧಿ ಗ್ರಾಮರಾಜ್ಯದ ಬಗ್ಗೆ ಹೇಳಿದ್ದು. ನಮ್ಮ ಊರುಗಳು ಸ್ವಾವಲಂಬಿಗಳಾಗಬೇಕೆಂದರೆ ಸ್ಥಳೀಯ ಆರ್ಥಿಕತೆಯ ಆರೋಗ್ಯ ಸದೃಢ ವಾಗಿರಬೇಕು. ಅಂಥದೊಂದು ಶಕ್ತಿ ತುಂಬು ವುದು ನಾವೇ, ನಮ್ಮ ಒಂದೊಂದು ರೂ. ಗಳೇ.
ಹಾಗಾಗಿ ನಮ್ಮ ಆಲೋಚನೆಯಲ್ಲಿ ಸಣ್ಣದೊಂದು ಸುಧಾರಣೆ ಮಾಡಿಕೊಳ್ಳೋಣ. ಊರಿನಲ್ಲೇ ಸಿಗುವ ಸರಕು ಗಳನ್ನು ಅಲ್ಲಿಯೇ ಖರೀದಿಸೋಣ. ಒಂದುವೇಳೆ ಸಿಗದ್ದನ್ನು ಹತ್ತಿರದ ಸಣ್ಣ ಪಟ್ಟಣದಲ್ಲಿ ಖರೀದಿಸೋಣ, ಅಲ್ಲೂ ಸಿಗದ್ದಕ್ಕೆ ನಗರಕ್ಕೆ ಹೋಗೋಣ. ಅಲ್ಲೆಲ್ಲೂ ಸಿಗದಿದ್ದನ್ನು ಮೊಬೈಲ್‌ನಲ್ಲಿ ಹುಡುಕೋಣ. ನಮ್ಮ ಮೊದಲ ಆದ್ಯತೆ ಸ್ಥಳೀಯವಾದದ್ದು, ಕೊನೆಯ ಆದ್ಯತೆ ದೂರದ್ದಾದರೆ ಮುಂದೊಂದು ದಿನ ಊರಿಗೆ ಬೀಗ ಹಾಕುವಂಥ ಪ್ರಮೇಯ ಉದ್ಭವಿಸದು.

-ಅರವಿಂದ ನಾವಡ

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

8

Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ವಿಡಿಯೋಗಳಿವು..

ಅಪಾಯಕ್ಕೆ ಎದೆಯೊಡ್ಡಿ ವಕ್ಫ್ ವರದಿ ಮಾಡಿದ್ದು ನಾನು, ಅದರಿಂದ ಹಣ ಮಾಡಿದ್ದು ಅನೇಕರು!

ಅಪಾಯಕ್ಕೆ ಎದೆಯೊಡ್ಡಿ ವಕ್ಫ್ ವರದಿ ಮಾಡಿದ್ದು ನಾನು, ಅದರಿಂದ ಹಣ ಮಾಡಿದ್ದು ಅನೇಕರು!

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ ­ಅತ್ಯಗತ್ಯ

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ ­ಅತ್ಯಗತ್ಯ

Zakir Hussain; ನಾದಯೋಗಿಯ ನಿನಾದ ಸ್ತಬ್ಧ

Zakir Hussain; ನಾದಯೋಗಿಯ ನಿನಾದ ಸ್ತಬ್ಧ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.