‘ವೀರಂ’ನಲ್ಲಿ ‘ರಚಿತಾ’ ರಂಗು
Team Udayavani, Mar 19, 2023, 2:51 PM IST
ಪ್ರಜ್ವಲ್ ದೇವರಾಜ್ ನಟಿಸಿರುವ “ವೀರಂ’ ಚಿತ್ರ ಏಪ್ರಿಲ್ 7ರಂದು ತೆರೆಕಾಣುತ್ತಿದೆ. ಈ ಚಿತ್ರದ ಮೂಲಕ ರಚಿತಾ ರಾಮ್ ಕೂಡಾ ಅಭಿಮಾನಿಗಳಿಗೆ ದರ್ಶನ ನೀಡುತ್ತಿದ್ದಾರೆ.
ಹೌದು, “ವೀರಂ’ ಸಿನಿಮಾದಲ್ಲಿ ರಚಿತಾ ರಾಮ್ ನಾಯಕಿಯಾಗಿ ಕಾಣಿಸಿ ಕೊಂಡಿದ್ದಾರೆ. ಇದು ರಚಿತಾ ಈ ವರ್ಷ ತೆರೆಮೇಲೆ ಕಾಣಿಸಿಕೊಳ್ಳುತ್ತಿರುವ ಎರಡನೇ ಸಿನಿಮಾ. ಈಗಾಗಲೇ “ಕ್ರಾಂತಿ’ ಮೂಲಕ ಹೊಸ ವರ್ಷದ ಅಕೌಂಟ್ ಓಪನ್ ಮಾಡಿರುವ ರಚಿತಾ ಈಗ “ವೀರಂ’ ಮೇಲೆ ನಿರೀಕ್ಷೆ ಇಟ್ಟಿದ್ದಾರೆ. ಶಶಿಧರ್ ಕೆ.ಎಂ ನಿರ್ಮಾಣದ ಈ ಚಿತ್ರವನ್ನು ಕುಮಾರ್ ರಾಜ್ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.
ಇನ್ನು, ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಟೀಸರ್ ಹಿಟ್‌ಲಿಸ್ಟ್ ಸೇರಿದೆ. ಶ್ರೀನಗರ ಕಿಟ್ಟಿ ಚಿತ್ರದಲ್ಲಿ ಮತ್ತೂಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸುಮಾರು ಏಳು ವರ್ಷಗಳ ಬಳಿಕ ನಟ ಶಿಷ್ಯ ದೀಪಕ್ ಚಿತ್ರದಲ್ಲಿ ನೆಗೆಟಿವ್ ಪಾತ್ರವೊಂದರಲ್ಲಿ ಅಭಿನಯಿಸುತ್ತಿದ್ದಾರೆ. ಉಳಿದಂತೆ ಹಿರಿಯ ನಟಿ ಶ್ರುತಿ, ಅಚ್ಯುತಕುಮಾರ್, ಗಿರಿ ಮೊದಲಾದವರು “ವೀರಂ’ನ ಇತರ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. “ವೀರಂ’ ಚಿತ್ರದ ಹಾಡುಗಳಿಗೆ ಅನೂಪ್ ಸೀಳಿನ್ ಸಂಗೀತ ಸಂಯೋಜನೆಯಿದ್ದು, ಲವಿತ್ ಛಾಯಾಗ್ರಹಣ, ರವಿಚಂದ್ರನ್ ಸಂಕಲನವಿದೆ. “ಶಶಿಧರ್ ಸ್ಟುಡಿಯೋಸ್ ಪ್ರೊಡಕ್ಷನ್’ ಬ್ಯಾನರ್‌ನಲ್ಲಿ ನಿರ್ಮಾಣವಾಗುತ್ತಿರುವ “ವೀರಂ’ ಚಿತ್ರಕ್ಕೆ ಶಶಿಧರ್ ಕೆ.ಎಂ ಬಂಡವಾಳ ಹೂಡಿ ನಿರ್ಮಿಸುತ್ತಿದ್ದಾರೆ.
“ವೀರಂ’ ಚಿತ್ರದ ಬಗ್ಗೆ ಮಾತನಾಡುವ ನಿರ್ಮಾಪಕ ಶಶಿಧರ್ ಕೆ.ಎಂ, “ಪ್ರಜ್ವಲ್ ದೇವರಾಜ್ ಸಿನಿ ಕೆರಿಯರ್‌ನಲ್ಲಿ “ವೀರಂ’ ಹೊಸಥರದ ಸಿನಿಮಾ. ಇದರಲ್ಲಿ ಪ್ರಜ್ವಲ್ ದೇವರಾಜ್ ಸಾಹಸಸಿಂಹ ವಿಷ್ಣುವರ್ಧನ್ ಅಭಿಮಾನಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಬಿಗ್ ಸ್ಟಾರ್ ಕಾಸ್ಟಿಂಗ್, ಬಿಗ್ ಬಜೆಟ್‌ನಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದೆ. ಲವ್, ಸೆಂಟಿಮೆಂಟ್, ಆ್ಯಕ್ಷನ್, ಕಾಮಿಡಿ ಹೀಗೆ ಕಂಪ್ಲೀಟ್ ಎಂಟರ್ ಟೈನ್ಮೆಂಟ್ ಎಲಿಮೆಂಟ್ಸ್ “ವೀರಂ’ನಲ್ಲಿದೆ. ಮಾಸ್ ಮತ್ತು ಕ್ಲಾಸ್ ಆಡಿಯನ್ಸ್‌ಗೆ “ವೀರಂ’ ಸಿನಿಮಾ ಖಂಡಿತಾ ಇಷ್ಟವಾಗುತ್ತದೆ’ ಎಂಬ ಭರವಸೆ ವ್ಯಕ್ತಪಡಿಸುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Sandalwood: ಮಾಸ್ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
MUST WATCH
ಹೊಸ ಸೇರ್ಪಡೆ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.