ಸಲ್ಮಾನ್ ಖಾನ್ ಗೆ ಬೆದರಿಕೆ ಇ-ಮೇಲ್: ನಟನ ನಿವಾಸದ ಹೊರಗೆ ಬಿಗಿ ಪೊಲೀಸ್ ಭದ್ರತೆ
Team Udayavani, Mar 19, 2023, 10:20 PM IST
ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಮತ್ತೊಮ್ಮೆ ಜೀವ ಬೆದರಿಕೆ ಇ-ಮೇಲ್ ಬಂದಿದ್ದು ಈ ಹಿನ್ನೆಲೆಯಲ್ಲಿ ಬಾಂದ್ರಾದಲ್ಲಿರುವ ಅವರ ನಿವಾಸದ ಹೊರಗೆ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ಸಲ್ಮಾನ್ ಖಾನ್‌ಗೆ ಬೆದರಿಕೆ ಇ-ಮೇಲ್‌ಗೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ದರೋಡೆಕೋರರಾದ ಲಾರೆನ್ಸ್ ಬಿಷ್ಣೋಯ್ ಮತ್ತು ಗೋಲ್ಡಿ ಬ್ರಾರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬಿಷ್ಣೋಯ್ ಸಮುದಾಯ ಆರಾಧಿಸುವ ಕೃಷ್ಣ ಮೃಗವನ್ನು ಭೇಟಿಯಾಡಿದ್ದ ಸಲ್ಮಾನ್ ಖಾನ್ ಬಹಿರಂಗವಾಗಿ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಆತನನ್ನು ಕೊಲ್ಲುವುದಾಗಿ ಲಾರೆನ್ಸ್ ಬಿಷ್ಣೋಯ್ ಹೇಳಿಕೊಂಡಿದ್ದ.
ಸಲ್ಮಾನ್ ಖಾನ್ ಕೊಲ್ಲುವುದೇ ನನ್ನ ಜೀವನದ ಮುಖ್ಯ ಗುರಿ ಎಂದು ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಹೇಳಿದ್ದಾನೆ.
ಸಲ್ಮಾನ್ ಖಾನ್ ಅವರ ಆಪ್ತರಾಗಿರುವ ಪ್ರಶಾಂತ್ ಗುಂಜಾಲ್ಕರ್ ಅವರಿಗೆ ರೋಹಿತ್ ಗಾರ್ಗ್ ಎಂಬ ಹೆಸರಿನಿಂದ ಶನಿವಾರ ಬೆದರಿಕೆ ಮೇಲ್ ಕಳುಹಿಸಲಾಗಿತ್ತು. ಬೆದರಿಕೆ ಇ-ಮೇಲ್ ಕಳುಹಿಸಿದ್ದಕ್ಕಾಗಿ ಗಾರ್ಗ್, ಗೋಲ್ಡಿ ಬ್ರಾರ್ ಮತ್ತು ಲಾರೆನ್ಸ್ ಬಿಷ್ಣೋಯ್ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: ಯುಗಾದಿ ಬಳಿಕ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಎಂ.ಬಿ.ಪಾಟೀಲ
Mumbai Police beefs up security outside actor Salman Khan's house after he received threats by email, Bandra Police registered a case under sections 506(2),120(b) & 34 of IPC.
Earlier on Saturday, Mumbai Police booked jailed gangsters Lawrence Bishnoi, Goldie Brar & Rohit Garg… https://t.co/XujH67eTbC
— ANI (@ANI) March 19, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Armaan Malik: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕ ಅರ್ಮಾನ್ ಮಲಿಕ್; ಇಲ್ಲಿದೆ ಫೋಟೋಸ್
ಹಲವು ಬಾರಿ ಸಾಯುವ ಬಗ್ಗೆ ಯೋಚಿಸಿದ್ದೆ.. #MeToo ಆರೋಪದ ಬಗ್ಗೆ ನಿರ್ದೇಶಕ ಸಾಜಿದ್ ಮಾತು
Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Hollywood: Billy the kid- ಹಾಲಿವುಡ್ ಹಿರಿಯ ನಟ ಜೆಫ್ರಿ ಡ್ಯುಯೆಲ್ ಇನ್ನಿಲ್ಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.