ಕಳವುಗೈದ ಆರೋಪಿಗೆ ಶಿಕ್ಷೆ
Team Udayavani, Mar 24, 2023, 5:22 AM IST
ಉಡುಪಿ: ಮನೆಗೆ ನುಗ್ಗಿ ನಗದು ಹಾಗೂ ಚಿನ್ನಾಭರಣ ಕಳವು ಮಾಡಿದ ಆರೋಪಿಗೆ ನಗರದ ಪ್ರಧಾನ ಸಿ.ಜೆ. ಮತ್ತು ಸಿ.ಜೆ.ಎಂ. ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.
2022ರ ಜೂ. 29ರಂದು ರಾತ್ರಿ ಸುಖೇಶ್ ನಾಯ್ಕ ಎಂಬಾತ ಉಡುಪಿ ತಾಲೂಕು ಪುತ್ತೂರು ಗ್ರಾಮದ ಕೊಡಂಕೂರು ಸಾಯಿಬಾಬಾ ನಗರದ ಅಡ್ಡ ರಸ್ತೆಯಲ್ಲಿರುವ ಸತ್ಯನಾರಾಯಣ ಹೆಗ್ಡೆ ಅವರ ಮನೆಗೆ ನುಗ್ಗಿ ಮನೆಯಲ್ಲಿದ್ದ ಚಿನ್ನಾಭರಣ, ನಗದು ಹಾಗೂ ಬೆಳ್ಳಿಯ ಪದಕಗಳನ್ನು ಕಳವು ಮಾಡಿದ್ದ. ಈ ಬಗ್ಗೆ ಉಡುಪಿ ನಗರ ಠಾಣೆಯ ಪೊಲೀಸ್ ನಿರೀಕ್ಷಕರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆ ನ್ಯಾಯಾಧೀಶೆ ಶಕುಂತಲಾ ಅವರು ಆರೋಪಿ ಸುಖೇಶ್ ನಾಯ್ಕಗೆ ಒಟ್ಟು 10,000 ರೂ. ದಂಡ ಹಾಗೂ 10 ವರ್ಷಗಳ ಕಠಿನ ಕಾರಾಗೃಹ ವಾಸ ಶಿಕ್ಷೆ, ದಂಡ ಪಾವತಿಸಲು ತಪ್ಪಿದಲ್ಲಿ 1 ವರ್ಷದ ಸಾಧಾರಣ ಶಿಕ್ಷೆ ವಿಧಿಸಿ, ತೀರ್ಪು ನೀಡಿದ್ದಾರೆ.
ಸರಕಾರದ ಪರವಾಗಿ ಹಿರಿಯ ಸಹಾಯಕ ಸರಕಾರಿ ಅಭಿಯೋಜಕಿ ಜಯಂತಿ ಕೆ.ವಾದ ಮಂಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.