ಸುಟ್ಟು ಕರಕಲಾದ ಲಾರಿ
Team Udayavani, Mar 24, 2023, 5:24 AM IST
ಮಡಿಕೇರಿ: ಅನುಪಯುಕ್ತ ರಾಸಾಯನಿಕದ ಸರಕುಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಅಗ್ನಿ ಆಕಸ್ಮಿಕದಿಂದ ಸುಟ್ಟು ಕರಕಲಾಗಿರುವ ಘಟನೆ ಕುಶಾಲನಗರದಲ್ಲಿ ಸಂಭವಿಸಿದೆ.
ಕೊಯಮತ್ತೂರಿನಿಂದ ಮಂಗಳೂರಿನ ಬೈಕಂಪಾಡಿಗೆ ತೆರಳುತ್ತಿದ್ದ ಲಾರಿ ಬುಧವಾರ ತಡರಾತ್ರಿ ಬೆಂಕಿಗೆ ಆಹುತಿಯಾಗಿದೆ. ಲಾರಿಯ ಹಿಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಚಾಲಕ ತತ್‌ಕ್ಷಣ ಕುಶಾಲನಗರದ ಹಿರಿಯ ಪ್ರಾಥಮಿಕ ಶಾಲೆಯ ಮುಂಭಾಗ ರಸ್ತೆ ಬದಿಯಲ್ಲಿ ನಿಲ್ಲಿಸಿ ಲಾರಿಯಲ್ಲಿದ್ದ ದಾಖಲೆಗಳನ್ನು ತನ್ನೊಂದಿಗೆ ತೆಗೆದುಕೊಂಡು ಹೊರಬಂದು ಸ್ಥಳೀಯರಿಗೆ ಮಾಹಿತಿ ನೀಡಿದರು.
ಸ್ಥಳೀಯರು ತತ್‌ಕ್ಷಣ ಪೊಲೀಸ್ ಠಾಣೆ ಮತ್ತು ಅಗ್ನಿಶಾಮಕ ತಂಡಕ್ಕೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ತಂಡ ಬೆಂಕಿ ನಂದಿಸಲು ಹರಸಾಹಸ ಪಟ್ಟರೂ ಬೆಂಕಿ ರಾಸಾಯನಿಕ ವಸ್ತುಗಳಿಗೆ ತಗಲಿ ಅಪಾಯಕಾರಿ ಪರಿಸ್ಥಿತಿ ಸೃಷ್ಟಿಯಾಯಿತು.
ಸ್ಥಳೀಯ ಅಧಿಕಾರಿಗಳ ಕೋರಿಕೆ ಮೇರೆಗೆ ಪಿರಿಯಾಪಟ್ಟಣ ಭಾಗದಿಂದ ಆಗಮಿಸಿದ ಅಗ್ನಿಶಾಮಕ ಸಿಬಂದಿ ಆಗಮಿಸಿ ಬೆಂಕಿ ಶಮನಗೊಳಿಸಲು ಪ್ರಯತ್ನಿಸಿದರು. ಮುಂಜಾನೆ 5 ಗಂಟೆಯ ವರೆಗೆ 2 ಅಗ್ನಿಶಾಮಕ ವಾಹನಗಳ ಸಹಕಾರದಿಂದ ಸಿಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಪೊಲೀಸರು ಸ್ಥಳದಲ್ಲಿದ್ದು ಹೆದ್ದಾರಿ ವಾಹನ ಸಂಚಾರ ವ್ಯವಸ್ಥೆಗೆ ಅನುವು ಮಾಡಿಕೊಟ್ಟರು.
ಕುಶಾಲನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.