ರಾಹುಲ್ ಗಾಂಧಿ ಅನರ್ಹತೆ ಖಂಡಿಸಿದ ಅಮೆರಿಕ ಕಾಂಗ್ರೆಸ್ ನಾಯಕರು
Team Udayavani, Mar 25, 2023, 2:54 PM IST
ವಾಷಿಂಗ್ಟನ್: ಕಾಂಗ್ರೆಸ್ ನಾಯಕ, ವಯನಾಡ್‌ನ ಸಂಸದ ರಾಹುಲ್ ಗಾಂಧಿಯನ್ನು ಲೋಕಸಭೆಯ ಸದ್ಯ ಸ್ಥಾನದಿಂದ ಅನರ್ಹಗೊಳಿಸಿರುವುದು ʻಗಾಂಧಿ ತತ್ವಕ್ಕೆ ಎಸಗಿದ ದ್ರೋಹʼ ಎಂದು ಭಾರತೀಯ ಮೂಲದ ಅಮೆರಿಕ ಕಾಂಗ್ರೆಸ್ ಸದಸ್ಯ ರೋ ಖನ್ನಾ ಹೇಳಿದ್ದಾರೆ.
ʻರಾಹುಲ್ ಅವರನ್ನು ಸಂಸತ್ತಿನಿಂದ ಹೊರಹಾಕಿರುವುದು ಗಾಂಧಿ ತತ್ವಗಳಿಗೆ ಮತ್ತು ಬಾರತದ ಮೌಲ್ಯಗಳಿಗೆ ಮಾಡಿದ ದ್ರೋಹʼ ಎಂದು ರೋ ಖನ್ನಾ ಟ್ವೀಟ್ ಮಾಡಿದ್ಧಾರೆ.
ʻನನ್ನ ಅಜ್ಜ ಹಲವಾರು ವರ್ಷ ಜೈಲಿನಲ್ಲಿದ್ದದ್ದು, ತ್ಯಾಗ ಮಾಡಿದ್ದು ಇದಕ್ಕಾಗಿ ಅಲ್ಲ. ರಾಹುಲ್ ಗಾಂಧಿಯವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹ ಮಾಡಿದ್ದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸಬೇಕುʼ ಎಂದು ಖನ್ನಾ ತಮ್ಮ ಟ್ವಿಟ್‌ನಲ್ಲಿ ಪ್ರಧಾನಿ ಮೋದಿ ಅವರ ಬಳಿಯಲ್ಲಿ ಮನವಿ ಮಾಡಿಕೊಂಡಿದ್ದಾರೆ.
The expulsion of Rahul Gandhi from parliament is a deep betrayal of Gandhian philosophy and India’s deepest values. This is not what my grandfather sacrificed years in jail for. @narendramodi you have the power to reverse this decision for the the sake of Indian democracy. https://t.co/h85qlYMn1J
— Ro Khanna (@RoKhanna) March 24, 2023
ʻಭಾರತೀಯ ಪ್ರಜಾಪ್ರಭುತ್ವದ ಬಗ್ಗೆ ನಿರ್ಧಾರ ಕೈಗೊಗೊಳ್ಳುವ ಶಕ್ತಿ ನಿಮಗಿದೆʼ ಎಂದು ಅವರು ಪ್ರಧಾನಿ ನರೇಂದ್ರ ಮೋದಿಯನ್ನು ಕುರಿತು ಹೇಳಿದ್ದಾರೆ.
ಇದನ್ನೂ ಓದಿ: ಭಾರತದ ಅಭಿವೃದ್ಧಿಯಲ್ಲಿ ಸಾಮಾಜಿಕ- ಧಾರ್ಮಿಕ ಸಂಸ್ಥೆಗಳ ಪಾತ್ರ ಮಹತ್ವದ್ದು: ನರೇಂದ್ರ ಮೋದಿ
ಅದಲ್ಲದೆ, ಈ ವಿಚಾರಕ್ಕೆ ಕುರಿತಂತೆ ಅಮೆರಿಕದ ಇಂಡಿಯನ್ ಓವರ್‌ಸೀಸ್ ಕಾಂಗ್ರೆಸ್‌ನ ಉಪಾಧ್ಯಕ್ಷ ಜಾರ್ಜ್ ಅಬ್ರಹಾಂ ಕೂಡಾ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ʻಇದು ಭಾರತದ ಪ್ರಜಾಪ್ರಭುತ್ವದ ಕರಾಳ ದಿನವಾಗಿದೆ. ರಾಹುಲ್ ಗಾಂಧಿಯನ್ನು ಅನರ್ಹಗೊಳಿಸುವ ಮೂಲಕ ಮೋದಿ ಸರ್ಕಾರ ಭಾರತೀಯರ ವಾಕ್ ಸ್ವಾತಂತ್ರ್ಯವನ್ನು ಮೊಟಕುಗೊಳಿಸಲು ಪ್ರಯತ್ನಿಸುತ್ತಿದೆʼ ಎಂದು ಜಾರ್ಜ್ ಅಬ್ರಹಾಂ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.