ಕ್ಷೇತ್ರದ ಅಭಿವೃದ್ಧಿಗೆ ಸಂಕಲ್ಪ ಮಾಡೋಣ


Team Udayavani, Mar 27, 2023, 12:54 PM IST

tdy-15

ಕೋಲಾರ: ರೈತರ ಬ್ಯಾಂಕ್‌ ಖಾತೆಗೆ ನೇರವಾಗಿ ವರ್ಷಕ್ಕೆ 10 ಸಾವಿರ ರೂ. ಹಾಕುತ್ತಿರುವ ಯೋಜನೆ ಜಾರಿ ಮಾಡಿದ ಬಿಜೆಪಿಯನ್ನು ಜನತೆ ಬೆಂಬಲಿಸುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಸಂಕಲ್ಪ ಮಾಡೋಣ ಎಂದು ಮಾಜಿ ಸಚಿವ ವರ್ತೂರು ಪ್ರಕಾಶ್‌ ಕರೆ ನೀಡಿದರು.

ತಾಲೂಕಿನ ನರಸಾಪುರ ಹೋಬಳಿಯ ಬಿಜೆಪಿ ಸ್ವಾಭಿಮಾನ ಸಂಕಲ್ಪ ಬೃಹತ್‌ ಬಹಿರಂಗ ಸಭೆ ಉದ್ಘಾಟಿಸಿ ಮಾತನಾಡಿ, ಬಿಜೆಪಿಯಿಂದ ದೇಶ ಮತ್ತು ರಾಜ್ಯ ಅಭಿವೃದ್ಧಿ. ಎಸ್ಸಿ ಎಸ್ಟಿ ಜನಾಂಗಕ್ಕೆ ಮೀಸಲಾತಿ ಹೆಚ್ಚಿಸಿದ್ದಾರೆ. 60 ವರ್ಷ ಕಾಂಗ್ರೆಸ್‌ ಸರ್ಕಾರ ಮಾಡದ ಕೆಲಸವನ್ನು ಬಿಜೆಪಿ ಸರ್ಕಾರ ಕೇವಲ ಒಂಬತ್ತು ವರ್ಷದಲ್ಲಿ ಮಾಡಿ ತೋರಿಸಿದೆ ಎಂದರು.

ಕೈ-ದಳದವರ ಮಾತು ನಂಬಬೇಡಿ: ಈ ದೇಶದಲ್ಲಿ ಈ ರಾಜ್ಯದಲ್ಲಿ ಹಿಂದುತ್ವ ಉಳಿಯಬೇಕಾದರೆ ಬಿಜೆಪಿ ಪಕ್ಷಕ್ಕೆ ಮತ ನೀಡಬೇಕು. ಭಾರತೀಯ ಜನತಾ ಪಕ್ಷ ದಲಿತರ ವಿರೋಧಿಯಾಗಿದ್ದರೆ ಮೀಸಲಾತಿ ಹೆಚ್ಚಿಸುತ್ತಿರಲಿಲ್ಲ. ಸುಖ ಸುಮ್ಮನೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷದವರು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಇವರ ಮಾತುಗಳನ್ನು ನೀವು ನಂಬಬೇಡಿ. ದಲಿತರನ್ನ ರಾಷ್ಟ್ರಪತಿಯನ್ನಾಗಿ ಮಾಡಿದ ಪಕ್ಷ ಬಿಜೆಪಿ. ಮುಸ್ಲಿಂರನ್ನು ಆಂಧ್ರದ ರಾಜ್ಯಪಾಲರನ್ನಾಗಿ ಮಾಡಿದ್ದಾರೆ ಕಾಂಗ್ರೆಸ್‌ ಪಕ್ಷ ಯಾಕೆ ಮಾಡಲಿಲ್ಲ ಎಂದು ಪ್ರಶ್ನಿಸಿದರು.

ಪಕ್ಷದ ಸಾಮಾನ್ಯ ಕಾರ್ಯಕರ್ತನಿಗೂ ಅಧಿಕಾರ: ಕಾರ್ಯಕರ್ತರು ನಿಮ್ಮ ಗ್ರಾಮಗಳಲ್ಲಿ ನಿಮ್ಮ ಬೂತ್‌ಗಳಲ್ಲಿ ಹೆಚ್ಚಿನ ಮತಗಳು ಬರುವ ತರಹ ಕೆಲಸ ಮಾಡಬೇಕು. ಚುನಾವಣೆ ಇನ್ನೇನು 40 ದಿನಗಳು ಬಾಕಿ ಇದ್ದು, ಪ್ರತಿ ದಿನವೂ ಪ್ರತಿ ನಿಮಿಷವು ಸಮಯ ವ್ಯರ್ಥ ಮಾಡದೆ ಪಕ್ಷಕ್ಕಾಗಿ ದುಡಿದರೆ, ಭಾರತೀಯ ಜನತಾ ಪಕ್ಷ ಸಾಮಾನ್ಯ ಕಾರ್ಯಕರ್ತರಿಗೂ ಅಧಿಕಾರ ನೀಡುವ ಪಕ್ಷ. ಇದನ್ನ ಗಮನದಲ್ಲಿ ಇಟ್ಟುಕೊಂಡು ಕೆಲಸ ಮಾಡಿ ಎಂದರು.

ನಾನು ಹತ್ತು ವರ್ಷಗಳ ಕಾಲ ಶಾಸಕನಾಗಿದ್ದ ವೇಳೆ ಕೋಲಾರ ಅಭಿವೃದ್ಧಿಯಾಗಿತ್ತು.ಐದು ವರ್ಷಗಳಿಂದ ಕೋಲಾರ 25 ವರ್ಷಗಳ ಹಿಂದಕ್ಕೆ ಹೋಗಿದೆ. ಜೆಡಿಎಸ್‌ ಮತ್ತು ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದಲ್ಲಿ ಕೆ.ಶ್ರೀನಿವಾಸಗೌಡರು ನಯಾ ಪೈಸೆ ಕೂಡ ಅನುದಾನ ತಂದು ಅಭಿವೃದ್ಧಿ ಮಾಡಿಲ್ಲ ಎಂದರು.

ನಗರದಲ್ಲಿ ಜೆಡಿಎಸ್‌ -ಕಾಂಗ್ರೆಸ್‌ ತಲೆ ಎತ್ತಲ್ಲ: ಸಂಸದ ಎಸ್‌. ಮುನಿಸ್ವಾಮಿ ಮಾತನಾಡಿ, ಕೋಲಾರದಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್‌ ಉತ್ತಮ ಸಂಘಟನೆ ಮಾಡುತ್ತಿದ್ದು, ಹೈಕಮಾಂಡ್‌ ಯಾರು ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿರುತ್ತಾರೋ, ಅಂತವರಿಗೆ ಪಕ್ಷ ಟಿಕೆಟ್‌ ನೀಡುತ್ತದೆ ಎಂದರು. ಕೋಲಾರದಲ್ಲಿ ಜೆಡಿಎಸ್‌, ಕಾಂಗ್ರೆಸ್‌ ಯಾವುದೇ ಕಾರಣಕ್ಕೂ ತಲೆ ಎತ್ತುವುದಿಲ್ಲ. ಕಾಂಗ್ರೆಸ್‌ ಪಕ್ಷ ದಲಿತರನ್ನು ಹಾಳು ಮಾಡಿದೆ. ಜೆಡಿಎಸ್‌ ರೈತರ ಹೆಸರಿನಲ್ಲಿ ರೈತರನ್ನು ಹಾಳು ಮಾಡುತ್ತಿರುವ ಪಕ್ಷ. ಇಂತಹ ಪಕ್ಷದ ಮುಖಂಡರು ಮನೆಗೆ ಬಂದರೆ ತಕ್ಕ ಶಾಸ್ತಿ ಮಾಡಿ ಕಳಿಸಿ ಎಂದು ತಿಳಿಸಿದರು.

ಬೆಗ್ಲಿ ಸೂರ್ಯ ಪ್ರಕಾಶ್‌, ಜಿಲ್ಲಾ ಪಂಚಾಯತ್‌ ಮಾಜಿ ಸದಸ್ಯರಾದ ರೂಪಶ್ರೀ ಮಂಜುನಾಥ್‌, ಅರುಣ್‌ ಪ್ರಸಾದ್‌, ತಾಲೂಕು ಅಧ್ಯಕ್ಷ ಸಿಡಿರಾಮಚಂದ್ರಗೌಡ, ನರಸಾಪುರ ಗ್ರಾ.ಪಂ ಅಧ್ಯಕ್ಷ ಶೈಲಜಾ, ಉಪಾಧ್ಯಕ್ಷ ಹಸೀನಾ ತಾಪಂ ಮಾಜಿ ಸದಸ್ಯಎನ್‌.ಕೆ. ನಾಗರಾಜ್‌, ಗ್ರಾಪಂ ಮಾಜಿ ಅಧ್ಯಕ್ಷ ಎ.ನಾರಾಯಣಸ್ವಾಮಿ, ನರಸಾಪುರ ಗ್ರಾ.ಪಂ ಸದಸ್ಯರಾದ ಕೆಇಬಿ ಚಂದ್ರು, ಸುಮನ್‌, ರಾಜೇಂದ್ರ, ಮುನಿರಾಜು, ಕಾಜಿಕಲ್ಲಳ್ಳಿ ರಾಜಣ್ಣ, ಗೋಪಿ ಮುಖಂಡರಾದ ಹರೀಶ್‌, ಸತೀಶ್‌, ಯಲ್ಲೇಶ್‌, ಬೆಳ್ಳೂರು ಬಿ.ಜಿ.ಎನ್‌. ಮುರಳಿ, ದೊಡ್ಡವಲ್ಲ ಚನ್ನಕೇಶವ ಹಾಗೂ ಅನೇಕ ಬಿಜೆಪಿ ಕಾರ್ಯಕರ್ತರು ಹಾಜರಿದ್ದರು

ಟಾಪ್ ನ್ಯೂಸ್

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

1-aaa

PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

1-aaa

PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

Yuva rajkumar’s Ekka movie muhurtha

Ekka: ಯುವ ರಾಜಕುಮಾರ್‌ ಹೊಸ ಸಿನಿಮಾ ʼಎಕ್ಕʼ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.