ಪ್ರಕಾಶ್ ಬೆಳವಾಡಿ ನಟನೆಯ ‘ಸಿಗ್ನಲ್ ಮ್ಯಾನ್ 1971’
Team Udayavani, Mar 27, 2023, 12:02 PM IST
ನಟ ಪ್ರಕಾಶ್ ಬೆಳವಾಡಿ ನಟಿಸಿರುವ “ಸಿಗ್ನಲ್ ಮ್ಯಾನ್ 1971′ ಚಿತ್ರ ತೆರೆಗೆ ಬರಲು ಸಿದ್ಧವಾಗಿದೆ. ಅದಕ್ಕೂ ಮುನ್ನ ಈ ಬಾರಿಯ 14 ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಏಷ್ಯನ್ ಚಿತ್ರಗಳ ವಿಭಾಗಕ್ಕೆ ಈ ಚಿತ್ರ ಆಯ್ಕೆಯಾಗಿದೆ.
“ಇಂಗ್ಲೀಷ್ ಲೇಖಕ ಚಾರ್ಲ್ಸ್ ಡಿಕನ್ಸ್ ಅವರ ಸಿಗ್ನಲ್ ಮ್ಯಾನ್ ಕಥೆಯಿಂದ ಸ್ಫೂರ್ತಿ ಪಡೆದ ನಾನು ಈ ಚಿತ್ರ ಮಾಡಬೇಕೆಂದು ಕೊಂಡೆ. ಈ ವಿಷಯವನ್ನು ಪ್ರಕಾಶ್ ಬೆಳವಾಡಿ ಅವರ ಹತ್ತಿರ ಹೇಳಿದಾಗ, ಈ ಕಥೆಯನ್ನು ಭಾರತ ದೇಶಕ್ಕೆ ತಕ್ಕ ಹಾಗೆ ಅವರು ಕಥೆ ಹೆಣೆದು ಕೊಟ್ಟರು. 1971ರ ಕಾಲಘಟ್ಟದಲ್ಲಿ ನಡೆಯುವ ಕಥೆಯಿದು. ಆಗಷ್ಟೇ ಭಾರತ – ಪಾಕ್ ಯುದ್ಧದ ಭೀತಿ ದೇಶದೆಲ್ಲೆಡೆ ಇರುತ್ತದೆ. ಅಂತಹ ಸಮಯದಲ್ಲಿ ನಡೆಯುವ ಕಥೆ ಸಿಗ್ನಲ್ ಮ್ಯಾನ್ 1971. ಅದೊಂದು ಪಶ್ಚಿಮ ಘಟ್ಟದ ರೈಲ್ವೆ ನಿಲ್ದಾಣ. ಆದರೆ ಅಲ್ಲಿ ರೈಲು ನಿಲುವುದಿಲ್ಲ. ಆ ನಿಲ್ದಾಣದಲೊಬ್ಬ ಬಾಲು ಎಂಬ ಸಿಗ್ನಲ್ ಮ್ಯಾನ್. ಅಲ್ಲಿಗೆ ಆತನೇ ಎಲ್ಲಾ. ಅಂತಹ ಸುಂದರ ಪರಿಸರದಲ್ಲಿರುವ ನಿಲ್ದಾಣಕ್ಕೆ ಅನಿರೀಕ್ಷಿತವಾಗಿ ಫೋಟೋಗ್ರಾಫರ್ ರಾಜಶೇಖರ್ ಆಗಮನವಾಗುತ್ತದೆ. ಬಾಲುವಿನ ಒಂಟಿತನ, ತಳಮಳ, ಹಿಂದಿನ ನೆನಪುಗಳು, ಯುದ್ಧದ ಭೀತಿ. ಸೈನಿಕರನ್ನು ಹೊತ್ತೂಯ್ಯುವ ರೈಲುಗಳು… ಇವೆಲ್ಲವೂ ಐದು ದಿನಗಳಲ್ಲಿ ತೆರೆದುಕೊಳ್ಳುತ್ತಾ ಹೋಗುತ್ತದೆ. ಇದು ನನ್ನ ಹನ್ನೊಂದನೇ ನಿರ್ದೇಶನದ ಚಿತ್ರ’ ಎಂದರು ನಿರ್ದೇಶಕ ಕೆ.ಶಿವರುದ್ರಯ್ಯ.
ಚಿತ್ರದ ಬಗ್ಗೆ ಮಾತನಾಡಿದ ಪ್ರಕಾಶ್ ಬೆಳವಾಡಿ, “ನನಗೆ ಶಿವರುದ್ರಯ್ಯ ಅವರು ಈ ಕಾನ್ಸೆಪ್ಟ್ ಬಗ್ಗೆ ಹೇಳಿ, ನೀವು ಅಭಿನಯಿಸಬೇಕು ಎಂದರು. ಆನಂತರ ಕಥೆಯನ್ನು ನೀವೆ ಬರೆಯಿರಿ ಎಂದು ಹೇಳಿದರು. ನಾನು ಈ ಕಥೆಯನ್ನು ಭಾರತದ ಸೊಗಡಿಗೆ ತಕ್ಕ ಹಾಗೆ ಬರೆದಿದ್ದೇನೆ. ಊಟಿಯ ಬಳಿ ಹೆಚ್ಚು ಚಿತ್ರೀಕರಣ ನಡೆದಿದೆ. ಕೊಟ್ಟಿಗೆಹಾರ, ಚಿಕ್ಕಮಗ ಳೂರು, ಬೆಂಗಳೂರಿನಲ್ಲೂ ಚಿತ್ರೀಕರಣ ವಾಗಿದೆ. ಈ ಚಿತ್ರಕ್ಕಾಗಿ ಅದ್ಧೂರಿಸೆಟ್ ನಿರ್ಮಿಸಲಾಗಿತ್ತು. ರೈಲು ಈ ಚಿತ್ರದ ಒಂದು ಭಾಗವಾಗಿದೆ ಎಂದರು. ಚಿತ್ರಕ್ಕೆ ಶೇಖರ್ ಚಂದ್ರು ಛಾಯಾಗ್ರಾಹಣವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.