ಸಂಸದರೊಂದಿಗೆ ವೇದಿಕೆಯಲ್ಲಿ ಬಿಲ್ಕಿಸ್ ಪ್ರಕರಣದ ಅಪರಾಧಿ!
Team Udayavani, Mar 28, 2023, 6:09 AM IST
ದಾಹೋದ್: ಗುಜರಾತ್ನ ದಾಹೋದ್ ಜಿಲ್ಲೆಯ ಲಿಮ್ಖೇಡಾದಲ್ಲಿ ಬಿಜೆಪಿ ಸಂಸದ ಜಸ್ವಂತ್ ಭಾಭೋರ್ ಮತ್ತವರ ಸಹೋದರ, ಶಾಸಕ ಶೈಲೇಶ್ ಭಾಭೋರ್ ಭಾಗವಹಿಸಿದ್ದ ಸರ್ಕಾರಿ ಕಾರ್ಯಕ್ರಮದ ವೇದಿಕೆಯಲ್ಲಿ ಬಿಲ್ಕಿಸ್ ಬಾನೊ ಪ್ರಕರಣದ ಅಪರಾಧಿಗಳ ಪೈಕಿ ಒಬ್ಬನಾಗಿರುವ ಶೈಲೇಶ್ ಭಟ್ ಕಾಣಿಸಿಕೊಂಡಿರುವುದು ಟೀಕೆಗೆ ಗುರಿಯಾಗಿದೆ.
ಶನಿವಾರ ಆಯೋಜಿಸಿದ್ದ ಸರ್ಕಾರಿ ಕಾರ್ಯಕ್ರಮದ ಚಿತ್ರಗಳನ್ನು ಶೈಲೇಶ್ ಭಾಭೋರ್ ಅವರು ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ, ಇದರಲ್ಲಿ ಶೈಲೇಶ್ ಭಟ್ ಕೂಡ ಇದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಶೈಲೇಶ್ ಭಟ್, ಧಾರ್ಮಿಕ ಪೂಜಾ ಆಚರಣೆಯಲ್ಲಿ ಭಾಗವಹಿಸಲು ಅಲ್ಲಿಗೆ ಹೋಗಿದ್ದೆ ಎಂದು ಸ್ಪಷ್ಟನೆ ನೀಡಿದ್ದಾರೆ. ಕಳೆದ ವರ್ಷ ಜೈಲಿನಿಂದ ಶೈಲೇಶ್ ಭಟ್ ಬಿಡುಗಡೆಯಾಗಿದ್ದರು.
ಕೇಂದ್ರ, ಗುಜರಾತ್ ಸರ್ಕಾರಕ್ಕೆ ನೋಟಿಸ್: ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 11 ಮಂದಿ ಅಪರಾಧಿಗಳಿಗೆ ಶಿಕ್ಷೆ ವಿನಾಯ್ತಿ ನೀಡಿರುವುದರ ವಿರುದ್ಧ ಸಂತ್ರಸ್ತೆ ಬಿಲ್ಕಿಸ್ ಬಾನೊ ಸಲ್ಲಿಸಿರುವ ಅರ್ಜಿ ಸಂಬಂಧ ಕೇಂದ್ರ ಮತ್ತು ಗುಜರಾತ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಕೆ.ಎಂ.ಜೋಸೆಫ್ ಮತ್ತು ನ್ಯಾ. ಬಿ.ವಿ.ನಾಗರತ್ನ ಅವರನ್ನೊಳಗೊಂಡ ನ್ಯಾಯಪೀಠ, ಮುಂದಿನ ವಿಚಾರಣೆಯನ್ನು ಏ.18ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.