ಟೌನ್ ಶಿಫ್ ಗೆ ಭೂಮಿ ಕಳೆದುಕೊಂಡ ರೈತರಿಗೆ ಸೂಕ್ತ ಪರಿಹಾರ ಸಿಗದಿದ್ದಲ್ಲಿ ಭೂಮಿ ವಾಪಾಸ್
Team Udayavani, Mar 27, 2023, 9:23 PM IST
ಬೆಂಗಳೂರು: ನೈಸ್ ಸಂಸ್ಥೆಯು ಟೌನ್ ಶಿಪ್ ಗೆಂದು ಭೂಮಿ ಸ್ವಾಧೀನಪಡಿಸಿಕೊಂಡ ರೈತರಿಗೆ ಸೂಕ್ತ ರೀತಿಯಲ್ಲಿ ಪರಿಹಾರ ನೀಡಬೇಕು. 2013ರಲ್ಲಿ ಕೆಐಎಡಿಬಿ ನಿಗದಿಪಡಿಸಿದ ದರದಲ್ಲಿ ಸಂಸ್ಥೆ ಪರಿಹಾರ ನೀಡದಿದ್ದರೆ ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿ ಭೂಮಿ ವಾಪಸ್ ಕೊಡಿಸಲು ಕ್ರಮವಹಿಸಲಾಗುವುದು ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹೇಳಿದರು.
ವಿಧಾನಸೌಧದಲ್ಲಿ ಲೋಕೋಪಯೋಗಿ ಸಚಿವರಾದ ಸಿ.ಸಿ.ಪಾಟೀಲ್ ಅವರ ಉಪಸ್ಥಿತಿಯಲ್ಲಿ ಸಂಪುಟ ಉಪಸಮಿತಿ ಸಭೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.
26 ವರ್ಷದ ಹಿಂದೆ ಟೌನ್ ಶಿಫ್ ಗೆ 1906 ಎಕರೆ ಜಾಗ ವಶಪಡಿಸಿಕೊಳ್ಳಲಾಗಿತ್ತು. 9-10 ಹಳ್ಳಿಗಳಿಗೆ ಪರಿಹಾರ ಅಂತಿಮವಾಗಿರಲಿಲ್ಲ. 2013ರಲ್ಲಿ ಕೆಐಎಡಿಬಿನವರು ಹೊಸದರ ಅಂತಿಮಗೊಳಿಸಿದ್ದು, ಅದರಂತೆ ನೈಸ್ ಸಂಸ್ಥೆ ಪರಿಹಾರ ನೀಡಬೇಕು ಎಂದರು.
ನಗರಪ್ರದೇಶದಲ್ಲಿ 1:2, ಗ್ರಾಮಾಂತರ ಭಾಗದಲ್ಲಿ 1:4ನಂತೆ ಅಂತಿಮಗೊಳಿಸಿದ್ದಾರೆ. 1 ಎಕರೆಗೆ 3 ಕೋಟಿ ರೂ.ಗೂ ಅಧಿಕ ಪರಿಹಾರಧನವನ್ನು ಕೆಐಎಡಿಬಿ ನಿಗದಿಪಡಿಸಿದೆ. ಆದರೆ ನೈಸ್ ಕಂಪನಿಯವರು 41 ಲಕ್ಷಕ್ಕೆ ಸೀಮಿತ ಮಾಡಿ ರೈತರಿಗೆ ಅನ್ಯಾಯವೆಸಗಿದ್ದಾರೆ.
ಸಚಿವರಾದ ಸಿ.ಸಿ.ಪಾಟೀಲ್ ಅವರ ಸಮ್ಮುಖದಲ್ಲಿ ಸಭೆ ನಡೆಸಲಾಯಿತು. ರೈತರಿಗೆ ಅನ್ಯಾಯ ಆಗದಂತೆ ಕ್ರಮಕೈಗೊಳ್ಳುವ ಕುರಿತು ಚರ್ಚೆಯಾಯಿತು. ಎಕರೆಗೆ 3 ಕೋಟಿ ರೂ.ಗೂ ಅಧಿಕ ಮೊತ್ತದ ಪರಿಹಾರ ನೀಡಬೇಕು. ಇಲ್ಲವಾದಲ್ಲಿ ನಿಯಮಾನುಸಾರ ಸ್ವಾಧೀನ ಪಡಿಸಿಕೊಂಡ ಭೂಮಿ ವಾಪಸ್ ಕೊಡಬೇಕು ಎಂದರು.
ಸುಮಾರು ವರ್ಷಗಳಿಂದ ರೈತರಿಗೆ ಪರಿಹಾರ ಸಿಗದೆ ಅನ್ಯಾಯವಾಗಿದೆ. ರೈತರಿಗೆ ಸೂಕ್ತ ಪರಿಹಾರ ಕಲ್ಪಿಸುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. 2013ರಲ್ಲಿ ಕೆಐಎಡಿಬಿ ನಿಗದಿಪಡಿಸಿದ ಬೆಲೆ ನೀಡದಿದ್ದರೆ ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿ ಜಮೀನು ವಾಪಸ್ ಕೊಡಿಸುವ ಕುರಿತು ಸಭೆಯಲ್ಲಿ ಚರ್ಚೆಯಾಯಿತು ಎಂದರು.
ನೈಸ್ ಸಂಸ್ಥೆಯ ಮೇಲೆ ಸರ್ಕಾರಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಸುಪ್ರೀಂ ಕೋರ್ಟ್ ನಲ್ಲಿ ನೈಸ್ ಸಂಸ್ಥೆ ದಾಖಲಿಸಿದ್ದ ಕೇಸ್ ಗಳು ಒಂದೊಂದಾಗಿ ವಜಾ ಆಗುತ್ತಿವೆ ಎಂದು ಹೇಳಿದರು.
ಸುಪ್ರೀಂ ಕೋರ್ಟ್ ನಲ್ಲಿ ದಾಖಲಿಸಿರುವ ಪ್ರಕರಣಗಳ ಮೇಲೆ ನಿಗಾ ವಹಿಸಲು ಸರ್ಕಾರ ವಕೀಲರನ್ನು ನೇಮಕ ಮಾಡಿದೆ. ಟೋಲ್ ದರ ಸಂಬಂಧ ನೈಸ್ ಸಂಸ್ಥೆಯವರು ಸುಪ್ರೀಂ ಕೋರ್ಟ್ ನಲ್ಲಿ ತಡೆ ತಂದಿದ್ದಾರೆ. ತಡೆ ತೆರವು ಸಂಬಂಧ ವಕೀಲ ಜೊತೆ ಚರ್ಚೆ ನಡೆಸಲಾಗಿದೆ. ಸಂಪೂರ್ಣ ಸಿಮೆಂಟ್ ರಸ್ತೆ ಮಾಡಿ ನಂತರ ಟೋಲ್ ಸಂಗ್ರಹಿಸಬೇಕಿತ್ತು. ಈ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ತಡೆ ತಂದಿದ್ದು ಸದ್ಯದಲ್ಲೇ ತೆರವಾಗುವ ಸಾಧ್ಯತೆಯಿದೆ ಎಂದರು.
ಇದನ್ನೂ ಓದಿ: ರೈತರಿಗೆ ಸಾಗುವಳಿ ಚೀಟಿ ನೀಡಲು ಮೀನಾಮೇಷ: ಕಂದಾಯ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
ಸಿಎಂ ಗೆ ರೈತರ ಬಗ್ಗೆ ಕಾಳಜಿ ಇದ್ದರೆ ವಕ್ಫ್ ಗೆಜೆಟ್ ನೋಟಿಫಿಕೇಶನ್ ರದ್ದು ಮಾಡಲಿ: ಬೊಮ್ಮಾಯಿ
ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ
Director Guruprasad: ಖ್ಯಾತ ಸ್ಯಾಂಡಲ್‌ವುಡ್ ನಿರ್ದೇಶಕ ಗುರುಪ್ರಸಾದ್ ಆ*ತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
BBK11: ಬಿಗ್‌ಬಾಸ್ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.