“ರಂಗ್ ದ ಬರ್ಸಾ’ ಕಾರ್ಯಕ್ರಮಕ್ಕೆ ಅಡ್ಡಿ, ದಾಂಧಲೆ ಪ್ರಕರಣ: ಆರೋಪಿಗಳಿಗೆ ಜಾಮೀನು
Team Udayavani, Mar 28, 2023, 6:50 AM IST
ಮಂಗಳೂರು: ನಗರದ ಮರೋಳಿಯಲ್ಲಿ ರವಿವಾರ ಹೋಳಿ ಪ್ರಯುಕ್ತ ಆಯೋಜಿಸಲಾಗಿದ್ದ “ರಂಗ್ ದ ಬರ್ಸಾ’ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿ ದಾಂಧಲೆ ನಡೆಸಿದ ಬಜರಂಗ ದಳ ಕಾರ್ಯಕರ್ತರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಯುವಕ-ಯುವತಿಯರು ಅಶ್ಲೀಲವಾಗಿ ನಡೆದುಕೊಳ್ಳುತ್ತಾರೆ, ಅನ್ಯಕೋಮಿನ ಯುವಕರು ಕೂಡ ಪಾಲ್ಗೊಳ್ಳುತ್ತಾರೆ ಎಂದು ಆಕ್ಷೇಪಿಸಿ ಬಜರಂಗ ದಳದ ಆರು ಮಂದಿ ಕಾರ್ಯಕರ್ತರು ಸ್ಥಳಕ್ಕೆ ತೆರಳಿ ಆಯೋಜಕರನ್ನು ತರಾಟೆಗೆ ತೆಗೆದುಕೊಂಡಿದ್ದರು. ಕಾರ್ಯಕ್ರಮಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದು ಹಾಕಿದ್ದರು. ಕಂಕನಾಡಿ ನಗರ ಠಾಣಾ ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡಿದ್ದರು. ಸೋಮವಾರ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ.
ಇದನ್ನೂ ಓದಿ: ಉತ್ತರ ಪ್ರದೇಶದ ದರೋಡೆಕೋರ ಅತೀಕ್ ಅಹ್ಮದ್ ಸುರಕ್ಷಿತವಾಗಿ ನೈನಿ ಜೈಲಿಗೆ ಸ್ಥಳಾಂತರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ
Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.
Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.