ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ಅಡ್ಡಿ


Team Udayavani, Mar 28, 2023, 7:05 AM IST

ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ಅಡ್ಡಿ

ಮಲ್ಪೆ: ಮೂರ್ನಾಲ್ಕು ದಿನಗಳಿಂದ ಆಳಸಮುದ್ರದಲ್ಲಿ ಬಲವಾದ ಗಾಳಿ ಬೀಸುತ್ತಿದ್ದು, ಮೀನುಗಾರಿಕೆಗೆ ಅಡ್ಡಿಯಾಗಿದೆ.

ಭಾರೀ ಗಾಳಿ ಬೀಸುತ್ತಿರುವುದರಿಂದ ಕೆಲವು ಮೀನುಗಾರರು ಕಡಲಿಗಿಳಿ¿ಲು ಹಿಂದೇಟು ಹಾಕುತ್ತಿ ದ್ದಾರೆ. ಕರ್ನಾಟಕ, ಮಹಾರಾಷ್ಟ್ರ, ಗೋವಾ ಆಳಸಮುದ್ರ ದಲ್ಲಿ ಉತ್ತರದಿಂದ ಬಲವಾದ ಗಾಳಿ ಬೀಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಎರಡು- ಮೂರು ದಿನಗಳಿಂದ ಮಲ್ಪೆ ಬಂದರಿನಲ್ಲಿ ಬಹುತೇಕ ಎಲ್ಲ ಪರ್ಸಿನ್‌ ಬೋಟುಗಳು ಲಂಗರು ಹಾಕಿವೆ. ಟ್ರಾಲ್‌ಬೋಟ್‌ (370), ಸಣ್ಣ ಟ್ರಾಲ್‌ ಬೋಟುಗಳು ದಡದತ್ತ ಧಾವಿಸಿದ್ದು, ಮತ್ತೆ ಮೀನುಗಾರಿಕೆಗೆ ತೆರಳಿಲ್ಲ.

ಮೀನುಗಾರ ಕೃಷ್ಣ ಎಸ್‌. ಸುವರ್ಣ ಹೇಳುವಂತೆ, ಈ ಸಮಯದಲ್ಲಿ ಸಮುದ್ರದಲ್ಲಿ ಗಾಳಿ ತಾಸಿಗೆ ಹೆಚ್ಚೆಂದರೆ 15ರಿಂದ 20 ಕಿ.ಮೀ. ವೇಗದಲ್ಲಿ ಬೀಸುತ್ತಿದ್ದರೆ ಮೀನುಗಾರಿಕೆಗೆ ತೆರಳಬಹುದು. ಆದರೆ ಈಗ ತಾಸಿಗೆ 35-40 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿದ್ದು, ಮೀನುಗಾರಿಕೆ ನಡೆಸುವುದು ಅಪಾಯಕಾರಿ. ಅಲೆಗಳ ಅಬ್ಬರವೂ ಇರುವುದರಿಂದ ಬಲೆ ಹಾಕಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಹೆಚ್ಚಿನ ಬೋಟುಗಳು ಮೀನುಗಾರಿಕೆ ನಡೆಸಲಾಗದೆ ಸಮುದ್ರ ಮಧ್ಯೆ ಲಂಗರು ಹಾಕಿವೆ. ಇನ್ನು ಕೆಲವು ಆಳಸಮುದ್ರ ಬೋಟುಗಳು ಸಮೀಪದ ಬಂದರು ಪ್ರವೇಶಿಸಿವೆ.
ಅಪಾಯವನ್ನು ಅರಿತು ಗಾಳಿ ಕಡಿಮೆಯಾಗುವವರೆಗೆ ಪರ್ಸಿನ್‌ ಮೀನುಗಾರಿಕೆಯನ್ನು ಸ್ಥಗಿತಗೊಳಿಸಿದ್ದೇವೆ ಎಂದು ಪರ್ಸಿನ್‌ ಮೀನುಗಾರರ ಸಂಘದ ಅಧ್ಯಕ್ಷ ನಾಗರಾಜ್‌ ಸುವರ್ಣ ತಿಳಿಸಿದ್ದಾರೆ.

ಮೀನು ಧಾರಣೆ ಹೆಚ್ಚಳ
ಪ್ರಸ್ತುತ ಮೀನಿಗೆ ಬೇಡಿಕೆ ಇದ್ದರೂ ಬೇಕಾದಷ್ಟು ಪ್ರಮಾಣದಲ್ಲಿ ಮೀನು ಸಿಗುತ್ತಿಲ್ಲ. ಗಾಳಿ ಅಡ್ಡಿಯಾಗುವುದರಿಂದ ಮೀನುಗಾರಿಕೆಗೆ ತೆರಳಿದರೂ ಮೀನು ಸಿಗದೆ ಬರಿಗೈಯಲ್ಲಿ ವಾಪಸಾಗುವ ಪರಿಸ್ಥಿತಿ ಇದೆ ಎಂದು ಮೀನುಗಾರ ಕಾರ್ಮಿಕರು ಹೇಳಿದ್ದಾರೆ. ಇದರಿಂದಾಗಿ ಮಾರುಕಟ್ಟೆಯಲ್ಲಿ ಮೀನು ಲಭ್ಯತೆ ಕಡಿಮೆಯಾಗಿದ್ದು, ದರ ಏರಿದೆ.

ಮೂರು ದಿನಗಳಿಂದ ಸಮುದ್ರ ಮಧ್ಯೆ ಒಂದೇ ಸವನೆ ಬಲವಾದ ಗಾಳಿ ಬೀಸುತ್ತಿದ್ದು, ಮೀನುಗಾರಿಕೆ ನಡೆಸಲಾಗದೆ ಮಲ್ಪೆಯ ಬಹುತೇಕ ಬೋಟುಗಳು ವಾಪಸಾಗಿವೆ. ಆಳಸಮುದ್ರ ಬೋಟುಗಳಲ್ಲಿ ಕೆಲವು ಸಮುದ್ರ ಮಧ್ಯೆ ಲಂಗರು ಹಾಕಿದ್ದರೆ, ಇನ್ನು ಕೆಲವು ಸಮೀಪದ ಬಂದರು ಪ್ರವೇಶಿಸಿವೆ.
-ರತ್ನಾಕರ ಸಾಲ್ಯಾನ್‌, ಪ್ರ. ಕಾರ್ಯದರ್ಶಿ, ಮಲ್ಪೆ ಮೀನುಗಾರರ ಸಂಘ

ಗಾಳಿಯಿಂದಾಗಿ ಅಲೆಗಳಲ್ಲಿ ಭಾರೀ ವ್ಯತ್ಯಾಸ ಕಂಡುಬಂದಿದ್ದು ಮೀನುಗಾರ ರಿಗೆ ಬಲೆ ಹಾಕಲು ಸಾಧ್ಯವಾಗುತ್ತಿಲ್ಲ. ಶೇ. 40ರಷ್ಟು ಬೋಟುಗಳು ಮಲ್ಪೆ ಬಂದರಿಗೆ ವಾಪಸಾಗಿವೆ. ಒಂದೆರಡು ದಿನಗಳಲ್ಲಿ ಗಾಳಿ ಕಡಿಮೆಯಾಗುವ ಲಕ್ಷಣವಿದೆ.
-ಶಿವಕುಮಾರ್‌, ಉಪನಿರ್ದೇಶಕರು, ಮೀನುಗಾರಿಕೆ ಇಲಾಖೆ

ಟಾಪ್ ನ್ಯೂಸ್

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

courts-s

Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

courts-s

Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.