ಜನರಿಗೆ ಪರಿಸರ, ಜಲ ಜಾಗೃತಿ ಅಗತ್ಯ
Team Udayavani, Mar 28, 2023, 1:03 PM IST
ಮಂಡ್ಯ: ಪರಿಸರ ಹಾಗೂ ಜಲ ಜಾಗೃತಿ ಬಗ್ಗೆ ನಾಗರಿಕರಿಗೆ ಅರಿವು ಅಗತ್ಯ ಎಂದು ಕಾವೇರಿ ನೀರಾವರಿ ನಿಗಮ ವಿ.ಸಿ.ನಾಲಾ ವಿಭಾಗದ ಕಾರ್ಯಪಾಲಕ ಅಭಿಯಂತರ ಎಚ್.ಎಸ್.ನಾಗರಾಜು ಹೇಳಿದರು.
ನಗರದ ಕುವೆಂಪುನಗರ ಉದ್ಯಾನ ದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಕೋಶ, ಪರಿಸರ ರೂರಲ್ ಡೆವಲೆಪ್ ಮೆಂಟ್ ಸೊಸೈಟಿ, ಯುವ ಮುನ್ನಡೆ, ಮಧುರ ಮಂಡ್ಯ ಲಯನ್ಸ್ ಸಂಸ್ಥೆ, ಎನ್ ಎಸ್‌ಎಸ್ ಘಟಕ (ಸ್ನಾತಕೋತ್ತರ) ಮಹಿಳಾ ಸರ್ಕಾರಿ ಕಾಲೇಜು ವತಿಯಿಂದ ವಿಶ್ವ ಅರಣ್ಯ ದಿನ-ವಿಶ್ವ ಜಲ ದಿನ 2023 ಅಂಗವಾಗಿ ಪರಿಸರ ನಡಿಗೆ, ಮಂಡ್ಯ ನಗರದಲ್ಲಿನ ಕಾವೇರಿ ಶಾಖಾ ನಾಲೆಯ 8ನೇ ವಿತರಣಾ ನಾಲೆಯಲ್ಲಿನ ಸ್ವಚ್ಛತೆ ಬಗ್ಗೆ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಪ್ರತಿಯೊಬ್ಬರು ಪ್ಲಾಸ್ಟಿಕ್ ತ್ಯಜಿಸಬೇಕು. ಬಟ್ಟೆ ಬ್ಯಾಗ್ ಬಳಸಬೇಕು ಎಂದು ನಾಗರಿಕರಿಗೆ ಬಟ್ಟೆ ಬ್ಯಾಗ್ ವಿತರಿಸಿ, ಮುಂದಿನ ಪೀಳಿಗೆಗೆ ಪರಿಸರ ಉಳಿಸಿದರೆ ಅನುಕೂಲ ಆಗು ತ್ತದೆ ಎಂದು ಅರಿವು ಮೂಡಿಸಿದರು.
ಪರಿಸರ ಅಸಮತೋಲನ ಗಂಭೀರ ಸಮಸ್ಯೆ: ಪರಿಸರ ರೂರಲ್ ಡೆವಲಪ್ ಮೆಂಟ್ ಸೊಸೈಟಿ ಅಧ್ಯಕ್ಷ ಮಂಗಲ ಎಂ. ಯೋಗೀಶ್ ಮಾತನಾಡಿ, ಪರಿಸರ ಅಸಮತೋಲನವು ವಿಶ್ವದ ಗಂಭೀರ ಸಮಸ್ಯೆಯಾಗಿದೆ. ಪರಿಸರ ಸಂರಕ್ಷಣೆ ಹಾಗೂ ನೀರು, ಅರಣ್ಯ, ವಾಯು ಸಂರಕ್ಷಣೆಗೆ ಸಮುದಾಯವೇ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಅರಣ್ಯಗಳು ಮಣ್ಣಿನ ಸವೆತ ತಡೆಗಟ್ಟಲು ಮಣ್ಣನ್ನು ಸಮೃದ್ಧಗೊಳಿಸಲು ಮತ್ತು ಸಂರಕ್ಷಿಸುವಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತವೆ ಎಂದು ಹೇಳಿದರು.
ಪ್ಲಾಸ್ಟಿಕ್ ತಡೆಗೆ ಗಮನಹರಿಸಿ: ಮಧುರ ಮಂಡ್ಯ ಲಯನ್ಸ್ ಸಂಸ್ಥೆ ಅಧ್ಯಕ್ಷ ಸಿ. ತ್ಯಾಗರಾಜು ಮಾತನಾಡಿ, ಪ್ಲಾಸ್ಟಿಕ್ ಲೋಟದಲ್ಲಿ ಕಾಫಿ ಕುಡಿಯುವುದರಿಂದ ಕ್ಯಾನ್ಸರ್ ಬರುತ್ತದೆ ಎಂದು ತಂತ್ರಜ್ಞಾನ ದಿಂದ ತಿಳಿದು ಬಂದಿದೆ. ಈ ನಿಟ್ಟಿನಲ್ಲಿ ನಾಗರಿಕರು ಪ್ಲಾಸ್ಟಿಕ್ ಹೋಗಲಾಡಿಸಲು ಹೆಚ್ಚಿನ ಗಮನ ಹರಿಸಬೇಕು ಎಂದು ತಿಳಿಸಿದರು.
ನಾಗರಿಕರು ಮಾರುಕಟ್ಟೆ ಹಾಗೂ ಅಂಗಡಿಗಳಿಗೆ ಹೋಗುವಾಗ ಬಟ್ಟೆ ಬಾಸ್ ತೆಗೆದುಕೊಂಡು ಹೋಗ ಬೇಕು ಪ್ಲಾಸ್ಟಿಕ್ ಬಳಸಬೇಡಿ ಎಂದು ಕುವೆಂಪು ನಗರ ಹಾಗೂ ಚಾಮುಂಡೇ ಶ್ವರಿ ನಗರದ ನಿವಾಸಿಗಳಿಗೆ ಪರಿಸರದ ಬಗ್ಗೆ ಜನಜಾಗೃತಿ ಮೂಡಿಸಿದರು.
ಸಂತೆ ಕಸಲಗೆರೆ ಬಸವರಾಜು ಮತ್ತು ತಂಡದಿಂದ ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಗೀತೆಗಳನ್ನು ಹಾಡಿದರು. ಸಾರ್ವ ಜನಿಕರಿಗೆ ಬಟ್ಟೆ ಬ್ಯಾಗ್ ವಿತರಿಸಲಾಯಿತು. ಕಾವೇರಿ ನೀರಾವರಿ ನಿಗಮ ಸಹಾ ಯಕ ಕಾರ್ಯಪಾಲಕ ಅಭಿಯಂತರ ದೊಡ್ಡ ವೀರಯ್ಯ, ಕಿರಿಯ ಎಂಜಿನಿಯರ್ ಜಿ.ಎನ್.ಕೆಂಪರಾಜು, ಎನ್‌ಎಸ್‌ಎಸ್ ಜಿಲ್ಲಾ ಸಂಯೋಜನಾಧಿಕಾರಿ ಪ್ರೊ.ವೈ. ಕೆ.ಭಾಗ್ಯ, ಪರಿಸರ ರೂರಲ್ ಡೆವಲೆಪ್ ಮೆಂಟ್ ಸೊಸೈಟಿ ಕಾರ್ಯದರ್ಶಿ ಕೆ.ಪಿ.ಅರುಣಕುಮಾರಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ
By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
MUST WATCH
ಹೊಸ ಸೇರ್ಪಡೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.