ಉಮೇಶ್ ಪಾಲ್ ಪ್ರಕರಣ: ಅತೀಖ್ ಅಹಮದ್ ಗೆ ಜೀವಾವಧಿ ಶಿಕ್ಷೆ ಘೋಷಣೆ
Team Udayavani, Mar 28, 2023, 2:15 PM IST
ಪ್ರಯಾಗ್ ರಾಜ್: ಉಮೇಶ್ ಪಾಲ್ ಪ್ರಕರಣದ ಪ್ರಮುಖ ಆರೋಪಿ ಮಾಜಿ ಸಂಸದ- ಗ್ಯಾಂಗ್ ಸ್ಟರ್ ಅತೀಖ್ ಅಹಮದ್ ಗೆ ಜೀವಾವಧಿ ಶಿಕ್ಷೆ ವಿಧಿಸಿ ಪ್ರಯಾಗ್ ರಾಜ್ ಕೋರ್ಟ್ ಆದೇಶಿಸಿದೆ. ಅಲ್ಲದೆ ಐದು ಸಾವಿರ ರೂ ದಂಡ ವಿಧಿಸಲಾಗಿದೆ.
ಇದಕ್ಕೂ ಮೊದಲು ಇಂದು ಉಮೇಶ್ ಪಾಲ್ ಕಿಡ್ನಾಪ್ ಪ್ರಕರಣದಲ್ಲಿ ಗ್ಯಾಂಗ್ ಸ್ಟರ್ ಮತ್ತು ಮಾಜಿ ಸಂಸದ ಅತೀಖ್ ಅಹಮದ್ ದೋಷಿ ಎಂದು ಉತ್ತರ ಪ್ರದೇಶದ ಪ್ರಯಾಗ್ ರಾಜ್ ನ ವಿಶೇಷ ನ್ಯಾಯಾಲಯವು ತೀರ್ಪು ನೀಡಿತ್ತು.
ಪ್ರಕರಣದಲ್ಲಿ ಅತೀಖ್ ಅಹ್ಮದ್, ದಿನೇಶ್ ಪಾಸಿ ಮತ್ತು ಖಾನ್ ಸೌಲತ್ ಹನೀಫ್ ಅವರನ್ನು ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿದೆ. ಅತೀಖ್ ಅಹ್ಮದ್ ಸಹೋದರ ಅಶ್ರಫ್ ಸೇರಿದಂತೆ ಉಳಿದ ಎಲ್ಲಾ ಏಳು ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ.
ಇದನ್ನೂ ಓದಿ:ಪ್ರಿಯಾಂಕಾ ಬಾಲಿವುಡ್ ತೊರೆಯಲು ಕರಣ್ ಜೋಹರ್ ಕಾರಣ! ಕಂಗನಾ V/S ಪ್ರಿಯಾಂಕಾ ಚೋಪ್ರಾ
2006ರಲ್ಲಿ ಬಿಎಸ್ಪಿ ಶಾಸಕ ರಾಜು ಪಾಲ್ ಹತ್ಯೆ ಪ್ರಕರಣದ ಪ್ರಮುಖ ಸಾಕ್ಷಿಯಾಗಿದ್ದ ಉಮೇಶ್ ಪಾಲ್ ಅವರ ಅಪಹರಣ ಮಾಡಲಾಗಿತ್ತು. ಜನವರಿ 25, 2005 ರಂದು ಬಿಎಸ್ ಪಿ ಶಾಸಕ ರಾಜು ಪಾಲ್ ಅವರ ಹತ್ಯೆಯ ನಂತರ, ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಉಮೇಶ್ ಪಾಲ್ ಅವರು ಕೊಲೆಗೆ ಸಾಕ್ಷಿಯಾಗಿರುವುದಾಗಿ ಪೊಲೀಸರಿಗೆ ತಿಳಿಸಿದ್ದರು.
ಉಮೇಶ್ ಪಾಲ್ ಅವರನ್ನು 2006ರ ಫೆಬ್ರವರಿ 28 ರಂದು ಬಂದೂಕು ತೋರಿಸಿ ಅಪಹರಿಸಲಾಗಿತ್ತು. ಜುಲೈ 5, 2007 ರಂದು ಅಹ್ಮದ್, ಅವರ ಸಹೋದರ ಮತ್ತು ನಾಲ್ಕು ಅಪರಿಚಿತ ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಫೆಬ್ರವರಿ 24 ರಂದು ಉಮೇಶ್ ಪಾಲ್ ಅವರ ಪ್ರಯಾಗರಾಜ್ ನಿವಾಸದ ಹೊರಗೆ ಗುಂಡೇಟಿಗೆ ಒಳಗಾಗಿದ್ದರು. ಅತಿಖ್ ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ಅವರು ಉಮೇಶ್ ಪಾಲ್ ಅವರನ್ನು ಕೊಲ್ಲುವ ಸಂಚಿನಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.