ಭಾರತಕ್ಕೆ ಹಿಂದಿರುಗಿದ ವಿದ್ಯಾರ್ಥಿಗಳಿಗೆ ಎಂಬಿಬಿಎಸ್ ಪರೀಕ್ಷೆಗೆ 2 ಅವಕಾಶ
Team Udayavani, Mar 29, 2023, 7:10 AM IST
ನವದೆಹಲಿ: ಯುದ್ಧಪೀಡಿತ ಉಕ್ರೇನ್ನಿಂದ ಹಾಗೂ ಕೊರೊನಾ ಬಿಕ್ಕಟ್ಟಿನಿಂದಾಗಿ ಚೀನಾ ಮತ್ತು ಫಿಲಿಪ್ಪೀನ್ಸ್ನಿಂದ ಭಾರತಕ್ಕೆ ಹಿಂದಿರುಗಿರುವ ವೈದ್ಯಕೀಯ ವಿದ್ಯಾರ್ಥಿಗಳಿಗೆ ಎಂಬಿಬಿಎಸ್ ಪರೀಕ್ಷೆ ಪೂರ್ಣಗೊಳಿಸಲು ಕಡೆಯ 2 ಅವಕಾಶ ನೀಡಿ ಸುಪ್ರೀಂಕೋರ್ಟ್ ಆದೇಶಿಸಿದೆ.
ವಿದ್ಯಾರ್ಥಿಗಳಿಗೆ ಎಂಬಿಬಿಎಸ್ ಪಾರ್ಟ್1 ಹಾಗೂ ಎಂಬಿಬಿಎಸ್ ಪಾರ್ಟ್2 ಪರೀಕ್ಷೆಗಳನ್ನು ಪೂರ್ಣಗೊಳಿಸಲು ಅಂತಿಮವಾಗಿ 1 ಅವಕಾಶ ನೀಡಬೇಕೆಂದು ತಜ್ಞರ ಸಮಿತಿ ನೀಡಿದ ಶಿಫಾರಸನ್ನು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ನಲ್ಲಿ ಪ್ರಸ್ತುತಪಡಿಸಿತು.
ಆದರೆ, ನ್ಯಾ. ಬಿ.ಆರ್.ಗವಾಯಿ ಮತ್ತು ವಿಕ್ರಂ ನಾಥ್ ಅವರ ನ್ಯಾಯಪೀಠವು ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಶಿಫಾರಸು ಮಾರ್ಪಾಡು ಮಾಡಿ, 2 ಬಾರಿ ಅವಕಾಶ ನೀಡಲು ಆದೇಶಿಸಿದೆ. ಇದೇ ವೇಳೆ ಪರೀಕ್ಷೆಗೆ ಅನುವು ಮಾಡಿಕೊಡುವಂತೆ ಸಲ್ಲಿಸಲಾಗಿದ್ದ ಎಲ್ಲ ವೈದ್ಯಕೀಯ ವಿದ್ಯಾರ್ಥಿಗಳ ಅರ್ಜಿಯನ್ನು ಪೀಠ ಇತ್ಯರ್ಥಪಡಿಸಿದೆ.
ಸುಪ್ರೀಂಕೋರ್ಟ್ ನಿರ್ದೇಶನದಂತೆ ಭಾರತದ ಯಾವುದೇ ವೈದ್ಯಕೀಯ ಕಾಲೇಜುಗಳಲ್ಲಿ ನೋಂದಾಯಿಸಿಕೊಳ್ಳದೆಯೂ, ಅಸ್ತಿತ್ವದಲ್ಲಿರುವ ರಾಷ್ಟ್ರೀಯ ವೈದ್ಯಕೀಯ ಮಂಡಳಿ (ಎನ್ಎಂಸಿ) ಪಠ್ಯಕ್ರಮ ಮತ್ತು ಮಾರ್ಗಸೂಚಿಗಳಿಗೆ ಅನುಗುಣವಾಗಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.
ಸಮಿತಿಯ ಸಲಹೆಯಂತೆ ವಿದ್ಯಾರ್ಥಿಗಳಿಗೆ ಥಿಯರಿ ಪರೀಕ್ಷೆಯನ್ನು ಭಾರತದ ವೈದ್ಯಕೀಯ ಪರೀಕ್ಷೆಗೆ ಅನುಸಾರವಾಗಿ ಹಾಗೂ ಪ್ರಾಯೋಗಿಕ ಪರೀಕ್ಷೆಗಳನ್ನು ನಿಯೋಜಿತ ಸರ್ಕಾರಿ ಕಾಲೇಜುಗಳಲ್ಲಿ ನಡೆಸಲಾಗುತ್ತದೆ. ಎರಡೂ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ಬಳಿಕವೂ ವಿದ್ಯಾರ್ಥಿಗಳು ಎರಡು ವರ್ಷ ಇಂಟರ್ನ್ಶಿಪ್ ಮಾಡಬೇಕಿದ್ದು, ಒಂದು ವರ್ಷ ಉಚಿತ, ಮತ್ತೂಂದು ವರ್ಷ ರಾಷ್ಟ್ರೀಯ ವೈದ್ಯಕೀಯ ಆಯೋಗ ನಿಗದಿಪಡಿಸಿದ ಮೊತ್ತ ಪಾವತಿಸಿ ಪೂರ್ಣಗೊಳಿಸಬೇಕಿರುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.