ಕರಾವಳಿಗೆ ಜಿ20 ಸಭೆ ಆತಿಥ್ಯದ ಕನಸು!
ಕರಾವಳಿಗೆ ಅವಕಾಶ ಲಭಿಸಿದರೆ ಜಾಗತಿಕ ಮನ್ನಣೆಯ ಲೆಕ್ಕಾಚಾರ
Team Udayavani, Mar 29, 2023, 7:10 AM IST
ಮಂಗಳೂರು: ಮಹತ್ವದ ಜಿ20 ಕೂಟದ ಅಧ್ಯಕ್ಷ ಸ್ಥಾನ ಈ ಬಾರಿ ಭಾರತಕ್ಕೆ ದೊರೆತಿದೆ. ಇದರ ಅಂಗವಾಗಿ ವಿವಿಧ ಹಂತದ ಪ್ರತ್ಯೇಕ ಸಭೆಗಳು ದೇಶದ ನಾನಾ ಕಡೆಗಳಲ್ಲಿ ಆಯೋಜನೆಗೊಳ್ಳುತ್ತಿವೆ. ಈ ಪೈಕಿ ಒಂದಾದರೂ ಸಭೆಯ ಆತಿಥ್ಯ ವಹಿಸುವ ಅವಕಾಶ ದಕ್ಷಿಣ ಕನ್ನಡ ಹಾಗೂ ಉಡುಪಿಯನ್ನು ಒಳಗೊಂಡ ಕರಾವಳಿಗೆ ದೊರೆಯಲಿ ಎಂಬ ಒತ್ತಾಯ ಕೇಳಿಬಂದಿದೆ.
2022ರ ಡಿ. 1ರಿಂದ 2023ರ ನ. 30ರ ವರೆಗೆ ಒಂದು ವರ್ಷ ಕಾಲ ಜಿ20ನ ಕಾರ್ಯಕಲಾಪಗಳು ಭಾರತದ ಅಧ್ಯಕ್ಷತೆಯಲ್ಲಿ ನಡೆಯಲಿವೆ. ಇದರ ಅಂಗವಾಗಿ ದೇಶದ 55 ನಗರಗಳಲ್ಲಿ 200ಕ್ಕೂ ಹೆಚ್ಚು ಮಹತ್ವದ ಸಭೆಗಳು ಜರಗಲಿವೆ. ಸಭೆಯ ಆತಿಥ್ಯ ಕರಾವಳಿಗೆ ದೊರೆತರೆ ಜಾಗತಿಕವಾಗಿ ಗುರುತಿಸಿಕೊಳ್ಳುವಲ್ಲಿ ಸಹಕಾರಿಯಾಗಬಲ್ಲುದು ಎಂಬುದು ತಜ್ಞರ ಲೆಕ್ಕಾಚಾರ. ಕೆಸಿಸಿಐ ಕೂಡ ಕೇಂದ್ರ ವಿದೇಶಾಂಗ ಸಚಿವರಿಗೆ ಪತ್ರ ಬರೆದು ಅವಕಾಶ ಒದಗಿಸುವಂತೆ ಕೋರಿದೆ.
ಬೆಂಗಳೂರಿನಲ್ಲೇ 11 ಸಭೆ!
ಹೊಸದಿಲ್ಲಿಯ ಅನಂತರ ಕರ್ನಾಟಕವು ಅತೀ ಹೆಚ್ಚು, ಅಂದರೆ 14 ಸಭೆಗಳ ಆತಿಥ್ಯ ವಹಿಸಲಿದೆ. ಈ ಪೈಕಿ ಬೆಂಗಳೂರಿನಲ್ಲಿ 11, ಹಂಪಿಯಲ್ಲಿ ಎರಡು ಹಾಗೂ ಮೈಸೂರಿನಲ್ಲಿ ಒಂದು ಸಭೆ ನಡೆಯಲಿದೆ. ಬೆಂಗಳೂರಿನಲ್ಲಿಯೇ 11 ಸಭೆ ನಡೆಸುವ ಬದಲು ಕರಾವಳಿಯಲ್ಲಿ ಒಂದೆರಡು ಸಭೆ ಮಾಡಿದರೆ ಕರಾವಳಿಯ ಅಭಿವೃದ್ಧಿಗೆ ಜಾಗತಿಕವಾಗಿ ಹೆಚ್ಚು ಬಲ ಬರುವ ನಿರೀಕ್ಷೆ ಇದೆ ಎನ್ನುತ್ತಾರೆ ತಜ್ಞರು.
ಲಾಭವೇನು?
ಜಿ20 ಸದಸ್ಯ ದೇಶಗಳ ನೂರಾರು ಗಣ್ಯರು ಸಭೆಯಲ್ಲಿ ಪಾಲ್ಗೊಳ್ಳುತ್ತಾರೆ. ಆಗ ಕರಾವಳಿಯ ಸಾಂಸ್ಕೃತಿಕ ಹಾಗೂ ವಿವಿಧ ವಿಚಾರಗಳನ್ನು ಅವರಿಗೆ ಮನದಟ್ಟು ಮಾಡಬಹುದು. ಪ್ರವಾಸೋದ್ಯಮಕ್ಕೆ ಹೊಸ ಅವಕಾಶ ತೆರೆದುಕೊಳ್ಳಬಹುದು. ಕರಾವಳಿಯ ಶೈಕ್ಷಣಿಕ, ಆರ್ಥಿಕ, ಔದ್ಯಮಿಕ ಅಭಿವೃದ್ಧಿಗೆ ಇದು ಸಹಕಾರಿಯಾಗಬಹುದು ಎಂಬುದು ತಜ್ಞರ ಅಭಿಪ್ರಾಯ.
ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. “ಉದಯವಾಣಿ’ ಜತೆಗೆ ಮಾತನಾಡಿ, “ಜಿ20 ಸಭೆ ನಿಗದಿಯನ್ನು ಕೇಂದ್ರ ಸರಕಾರ ಮಾಡುತ್ತದೆ. ಅದರಂತೆ ರಾಜ್ಯ ಸರಕಾರಕ್ಕೆ ನಿರ್ದೇಶನ, ಜಿಲ್ಲಾಡಳಿತಕ್ಕೆ ಮಾಹಿತಿ ಬರುತ್ತದೆ. ದ.ಕ. ಜಿಲ್ಲೆಯಲ್ಲಿ ಸಭೆ ನಡೆಸಬೇಕು ಎಂಬ ಬಗ್ಗೆ ಒತ್ತಾಯ ಕೇಳಿಬಂದಿದೆ. ಆದರೆ ಇದರ ತೀರ್ಮಾನ ಕೇಂದ್ರದಿಂದಲೇ ಆಗಬೇಕು’ ಎಂದಿದ್ದಾರೆ.
ಜಿ20 ಸಭೆಗಳ ಪೈಕಿ ಒಂದನ್ನಾದರೂ ಮಂಗಳೂರಿನಲ್ಲಿ ಆಯೋಜಿಸಲು ಸರಕಾರ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿದ್ದೇವೆ.
– ಎಂ. ಗಣೇಶ್ ಕಾಮತ್, ಅಧ್ಯಕ್ಷರು, ಕೆನರಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯನ್ನು ಒಳಗೊಂಡ ಕರಾವಳಿ ಭಾಗದಲ್ಲಿಯೂ ಜಿ20 ಸಭೆ ನಡೆಸಿದರೆ ಇಲ್ಲಿನ ಅಭಿವೃದ್ಧಿಗೆ ಮಹತ್ವದ ಹೆಜ್ಜೆ ಇಟ್ಟಂತಾಗುತ್ತದೆ. ಈ ನಿಟ್ಟಿನಲ್ಲಿ ಸರಕಾರ ಆದ್ಯತೆ ನೀಡಬೇಕಿದೆ.
– ಅಂಡಾರು ದೇವಿಪ್ರಸಾದ್ ಶೆಟ್ಟಿ , ಅಧ್ಯಕ್ಷರು, ಉಡುಪಿ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.