ರಾಜಕೀಯದಲ್ಲಿ ಧರ್ಮ ಬಳಸುವುದನ್ನು ನಿಲ್ಲಿಸಿದಾಗ ದ್ವೇಷ ಭಾಷಣಗಳು ದೂರ:ಸುಪ್ರೀಂ
ರಾಜಕೀಯ ಮತ್ತು ಧರ್ಮಗಳು ಬೇರ್ಪಡಬೇಕು...
Team Udayavani, Mar 29, 2023, 5:35 PM IST
ನವದೆಹಲಿ: ದ್ವೇಷದ ಭಾಷಣಗಳನ್ನು ಸುಪ್ರೀಂ ಕೋರ್ಟ್ ಗಂಭೀರವಾಗಿ ಪರಿಗಣಿಸಿದ್ದು ಮತ್ತು ರಾಜಕೀಯ ಮತ್ತು ಧರ್ಮಗಳನ್ನು ಬೇರ್ಪಡಿಸಿದ ಕ್ಷಣ, ರಾಜಕಾರಣಿಗಳು ರಾಜಕೀಯದಲ್ಲಿ ಧರ್ಮವನ್ನು ಬಳಸುವುದನ್ನು ನಿಲ್ಲಿಸಿದ ಕ್ಷಣದಲ್ಲಿ ಅಂತಹ ಭಾಷಣಗಳು ದೂರವಾಗುತ್ತವೆ ಎಂದು ಬುಧವಾರ ಹೇಳಿದೆ.
ಕೋಮು ವಿಚಾರವುಳ್ಳವರಿಂದ ಕೆಲ ದ್ವೇಷದ ಭಾಷಣಗಳನ್ನು ಮಾಡಲಾಗುತ್ತಿದೆ, ಜನರು ತಮ್ಮನ್ನು ತಾವು ನಿಗ್ರಹಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರು ಮತ್ತು ಅಟಲ್ ಬಿಹಾರಿ ವಾಜಪೇಯಿ ಅವರ ಭಾಷಣಗಳನ್ನು ಉಲ್ಲೇಖಿಸಿದ ನ್ಯಾಯಮೂರ್ತಿಗಳಾದ ಕೆಎಂ ಜೋಸೆಫ್ ಮತ್ತು ಬಿವಿ ನಾಗರತ್ನ ಅವರ ಪೀಠ, ದೂರದ ಪ್ರದೇಶಗಳು ಮತ್ತು ಮೂಲೆ ಮೂಲೆಗಳಿಂದ ಜನರು ಅವುಗಳನ್ನು ಕೇಳಲು ಸೇರುತ್ತಿದ್ದರು ಎಂದು ಹೇಳಿದರು.
”ಎಷ್ಟು ಜನರ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮವನ್ನು ಪ್ರಾರಂಭಿಸಬಹುದು” ಎಂದು ಆಶ್ಚರ್ಯ ವ್ಯಕ್ತಪಡಿಸಿದ ಪೀಠ, ”ಇತರ ನಾಗರಿಕರು ಅಥವಾ ಸಮುದಾಯಗಳನ್ನು ನಿಂದಿಸುವುದಿಲ್ಲ ಎಂದು ಭಾರತದ ಜನರು ಏಕೆ ಪ್ರತಿಜ್ಞೆ ತೆಗೆದುಕೊಳ್ಳಬಾರದು” ಎಂದು ಹೇಳಿದೆ.
ದ್ವೇಷದ ಭಾಷಣಗಳನ್ನು ಮಾಡುವವರ ವಿರುದ್ಧ ಎಫ್‌ಐಆರ್‌ಗಳನ್ನು ದಾಖಲಿಸಲು ವಿಫಲವಾದ ವಿವಿಧ ರಾಜ್ಯಗಳ ಅಧಿಕಾರಿಗಳ ವಿರುದ್ಧದ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಪೀಠ ಹೇಳಿದೆ.
ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ನಿರ್ದಿಷ್ಟ ಸಮುದಾಯದ ವಿರುದ್ಧ ಕೇರಳದಲ್ಲಿ ಮಾಡಿದ ಅವಹೇಳನಕಾರಿ ಭಾಷಣವನ್ನು ಎತ್ತಿ ತೋರಿಸಿ, ಅರ್ಜಿದಾರರಾದ ಶಾಹೀನ್ ಅಬ್ದುಲ್ಲಾ ಅವರು ದೇಶದಲ್ಲಿ ದ್ವೇಷದ ಭಾಷಣಗಳ ಘಟನೆಗಳನ್ನು ಆಯ್ದು ತೋರಿಸಿದ್ದಾರೆ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್ ಹೇಳಿದ್ದೇನು?
Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್
Mangaluru: 7 ಕೆರೆ, ಪಾರ್ಕ್ ಅಭಿವೃದ್ಧಿಗೆ ಅಮೃತ 2.0
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.