ಸಾಲದ ಬಾಕಿ ಅರ್ಜಿ ತ್ವರಿತ ವಿಲೇವಾರಿಗೆ ಸೂಚನೆ

ಉಡುಪಿ ಜಿಲ್ಲಾ ಲೀಡ್‌ ಬ್ಯಾಂಕ್‌ ಪ್ರಗತಿ ಪರಿಶೀಲನೆ ಸಭೆ

Team Udayavani, Mar 30, 2023, 6:45 AM IST

ಸಾಲದ ಬಾಕಿ ಅರ್ಜಿ ತ್ವರಿತ ವಿಲೇವಾರಿಗೆ ಸೂಚನೆ

ಉಡುಪಿ: ಪ್ರಧಾನಮಂತ್ರಿ ಸ್ವನಿಧಿ ಯೋಜನೆಯ ಸಾಲ ವಿತರಣೆಯಲ್ಲಿ ಜಿಲ್ಲೆಯು ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದೆ. 3,049 ಮಂದಿಗೆ ಸಾಲ ನೀಡುವ ಗುರಿ ಇದ್ದು, 4,550 ಮಂದಿಗೆ ಸಾಲ ವಿತರಣೆ ಮಾಡಿ, ಶೇ. 149ರಷ್ಟು ಸಾಧನೆ ಮಾಡಲಾಗಿದೆ. ಆದರೂ ಬ್ಯಾಂಕ್‌ಗಳಲ್ಲಿ ಕೆಲವು ಅರ್ಜಿ ಬಾಕಿಯಿದ್ದು, ಕೂಡಲೇ ವಿಲೇವಾರಿ ಮಾಡುವಂತೆ ಜಿ.ಪಂ. ಸಿಇಒ ಪ್ರಸನ್ನ ಎಚ್‌. ಸೂಚಿಸಿದರು.

ಜಿ.ಪಂ. ಕಚೇರಿಯ ಸಭಾಂಗಣದಲ್ಲಿ ಬುಧವಾರ ಲೀಡ್‌ ಬ್ಯಾಂಕ್‌ ಪ್ರಗತಿ ಪರಿಶೀಲನೆ ಸಭೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಿ ಯೋಜನೆಗಳ ಪ್ರಗತಿ ಪರಿಶೀಲಿಸಿ ಅವರು ಮಾತನಾಡಿದರು.
ಪ್ರಧಾನಮಂತ್ರಿ ಉದ್ಯೋಗ ಸೃಜನ ಯೋಜನೆಯಡಿ 180 ಮಂದಿಗೆ ಸಾಲ ನೀಡುವ ಗುರಿ ಇದ್ದು, 472 ಮಂದಿಗೆ ಸಾಲ ವಿತರಿಸುವ ಮೂಲಕ ಶೇ. 262 ಸಾಧನೆ ಮಾಡಿ ರಾಜ್ಯದಲ್ಲಿ 2ನೇ ಸ್ಥಾನ ಪಡೆದಿದೆ. ವಿವಿಧ ಯೋಜನೆಗಳಲ್ಲಿ ಸಾಲಕ್ಕಾಗಿ ಸಲ್ಲಿಕೆಯಾಗುವ ಅರ್ಜಿಗಳನ್ನು ತಿರಸ್ಕರಿಸದೆ, ತಾಂತ್ರಿಕ ಕಾರಣಗಳ ಬಗ್ಗೆ ಬ್ಯಾಂಕ್‌ ಅಧಿಕಾರಿಗಳು ಮತ್ತು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಚರ್ಚಿಸಿ ಸೂಕ್ತ ಪರಿಹಾರ ಕಂಡುಕೊಂಡು ಅರ್ಹರಿಗೆ ಸಾಲವನ್ನು ವಿತರಿಸುವಂತೆ ತಿಳಿಸಿದರು.

ಸಾಲ ನೀಡಿಕೆ ಪ್ರಮಾಣ ಹೆಚ್ಚಳ
ತ್ತೈಮಾಸಿಕ ವರದಿ ನೀಡಿದ ಕೆನರಾ ಬ್ಯಾಂಕಿನ ಪ್ರಾದೇಶಿಕ ಕಚೇರಿಯ ಡಿಜಿಎಂ ಲೀನಾ ಪಿಂಟೋ, ಜಿಲ್ಲೆಯಲ್ಲಿ ಕಳೆದ ಡಿಸೆಂಬರ್‌ ಹೋಲಿಸಿದಲ್ಲಿ ಸಾಲ ನೀಡುವ ಪ್ರಮಾಣ ಶೇ. 9.58 ಹೆಚ್ಚಳವಾಗಿದ್ದು, 15,964 ಕೋ.ರೂ. ಸಾಲ ವಿತರಣೆ ಹಾಗೂ 34,120 ಕೋ.ರೂ. ಠೇವಣಿ ಸಂಗ್ರಹಿಸಲಾಗಿದೆ. ದುರ್ಬಲ ವರ್ಗಕ್ಕೆ ಸಾಲ ವಿತರಿಸಲು ವಿಶೇಷ ಒತ್ತು ನೀಡಿ, 1,30,277 ಫಲಾನುಭವಿಗಳಿಗೆ 1,855 ಕೋ.ರೂ. ವಿತರಿಸಲಾಗಿದೆ. ಎಲ್ಲ ಬ್ಯಾಂಕ್‌ಗಳು ಮಾರ್ಚ್‌ ಅಂತ್ಯಕ್ಕೆ ನಿಗದಿತ ಗುರಿಯನ್ನು ಸಾಧಿಸುವಂತೆ ತಿಳಿಸಿದರು.

ಆರ್‌ಬಿಐ ಕಾರ್ಯನಿರ್ವಾಹಕ ಅಧಿಕಾರಿ ಅಲೋಕ್‌ ಸಿನ್ಹಾ ಮಾತನಾಡಿ, ಆನ್‌ಲೈನ್‌ ಬ್ಯಾಂಕಿಂಗ್‌ ಮತ್ತು ಬ್ಯಾಂಕ್‌ ಹೆಸರಿನಲ್ಲಿ ಆಗುತ್ತಿರುವ ಮೋಸದ ಬಗ್ಗೆ ಗ್ರಾಹಕರ ಜಾಗೃತಿ ಕಾರ್ಯ ನಿರಂತರ ಆಗುತ್ತಿದೆ. ಚುನಾವಣೆ ಪ್ರಯುಕ್ತ ಬ್ಯಾಂಕ್‌ ವಹಿವಾಟುಗಳ ನಿರ್ವಹಣೆ ಕುರಿತಂತೆ ಕೇಂದ್ರ ಚುನಾವಣ ಆಯೋಗ ಸೂಚಿಸಿರುವ ಮಾರ್ಗಸೂಚಿಯನ್ನು ಪಾಲಿಸುವಂತೆ ಹಾಗೂ ಆಯೋಗ ಕೋರುವ ಅಗತ್ಯ ಮಾಹಿತಿಗಳನ್ನು ನೀಡುವಂತೆ ಬ್ಯಾಂಕ್‌ಗಳಿಗೆ ಸೂಚಿಸಿದರು.

ನಬಾರ್ಡ್‌ನ ಡಿಡಿಎಂ ಸಂಗೀತಾ ಖರ್ತಾ, ಯೂನಿಯನ್‌ ಬ್ಯಾಂಕ್‌ನ ಪ್ರಾದೇಶಿಕ ಮ್ಯಾನೇಜರ್‌ ಡಾ| ವಾಸಪ್ಪ, ಎಸ್‌ಸಿಡಿಸಿಸಿ ಬ್ಯಾಂಕ್‌ ಸ. ಜನರಲ್‌ ಮ್ಯಾನೇಜರ್‌ ನಿತ್ಯಾನಂದ ಉಪಸ್ಥಿತರಿದ್ದರು. ಜಿಲ್ಲಾ ಲೀಡ್‌ ಬ್ಯಾಂಕ್‌ ಮ್ಯಾನೇಜರ್‌ ಪಿ.ಎಂ. ಪಿಂಜಾರ ನಿರೂಪಿಸಿದರು.
ಜಿಲ್ಲೆಯ ವಿವಿಧ ಬ್ಯಾಂಕ್‌, ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

13,878 ಕೋ.ರೂ. ಸಾಲ ಗುರಿ
ಉಡುಪಿ, ಮಾ. 29: ಜಿಲ್ಲೆಯಲ್ಲಿ ಕೇಂದ್ರ – ರಾಜ್ಯ ಸರಕಾರಗಳ ವಿವಿಧ ಯೋಜನೆ ಸೇರಿದಂತೆ ಆದ್ಯತೆ, ಆದ್ಯತೇತರ ವಲಯಕ್ಕೆ 2023-24ನೇ ಸಾಲಿನಲ್ಲಿ ವಿವಿಧ ಬ್ಯಾಂಕ್‌ಗಳ ಮೂಲಕ 13,878 ಕೋ.ರೂ. ಸಾಲ ವಿತರಣೆಯ ಗುರಿಯನ್ನು ಹೊಂದಲಾಗಿದೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಲೀಡ್‌ ಬ್ಯಾಂಕ್‌ ಪ್ರಗತಿ ಪರಿಶೀಲನೆ ಸಭೆಯಲ್ಲಿ 2023-24ನೇ ಸಾಲಿನ ಕ್ರೆಡಿಟ್‌ ಪ್ಲಾನ್‌ ಪುಸ್ತಕವನ್ನು ಜಿ.ಪಂ. ಸಿಇಒ ಪ್ರಸನ್ನ ಎಚ್‌. ಬಿಡುಗಡೆ ಮಾಡಿದರು. ಎ. 1ರಿಂದ ಹೊಸ ಹಣಕಾಸು ವರ್ಷ ಆರಂಭವಾಗುವುದರಿಂದ ರಾಜ್ಯ – ಕೇಂದ್ರ ಸರಕಾರಿ ಯೋಜನೆಗಳನ್ನು ಫ‌ಲಾನು  ಭವಿಗಳಿಗೆ ನಿರ್ದಿಷ್ಟ ಸಮಯ ದಲ್ಲಿ ತಲುಪಿಸಬೇಕು. ಯಾವುದೇ ಅರ್ಜಿಯನ್ನು ಸಕಾರಣವಿಲ್ಲದೆ ತಿರಸ್ಕರಿಸುವುದು ಅಥವಾ ಬ್ಯಾಂಕ್‌ನಲ್ಲೇ ಇರಿಸಿಕೊಳ್ಳುವುದನ್ನು ಮಾಡಬಾರದು ಎಂದು ಸೂಚನೆ ನೀಡಿದರು.

ವಲಯವಾರು ಸಾಲ ವಿವರ
ಕೃಷಿ ಸಾಲಕ್ಕೆ 2,446.39 ಕೋ.ರೂ., ಕೃಷಿ ಮೂಲ ಸೌಕರ್ಯಕ್ಕೆ 330.39 ಕೋ.ರೂ., ಕೃಷಿ ಸಂಬಂಧಿತ ಚಟುವಟಿಕೆಗೆ 2,725.79 ಕೋ.ರೂ. ಸೇರಿ ಒಟ್ಟು ಕೃಷಿ ಕ್ಷೇತ್ರದಲ್ಲಿ ಸಾಲಕ್ಕಾಗಿ 5,502 ಕೋ.ರೂ. ಮೀಸಲಿ ಡಲಾಗಿದೆ. ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕ ವಲಯಕ್ಕೆ 3,444.72 ಕೋ.ರೂ., ಶಿಕ್ಷಣ ಕ್ಷೇತ್ರಕ್ಕೆ 190.06 ಕೋ.ರೂ., ವಸತಿ ಕ್ಷೇತ್ರಕ್ಕೆ 1,063 ಕೋ.ರೂ., ರಫ್ತು ವಿಭಾಗಕ್ಕೆ 324.28 ಕೋ.ರೂ., ಸಾಮಾಜಿಕ ಮೂಲ ಸೌಕರ್ಯಕ್ಕೆ 58.19 ಕೋ.ರೂ., ನವೀಕರಿಸ ಬಹುದಾದ ಇಂಧನ ವಲಯಕ್ಕೆ 49.87 ಕೋ.ರೂ. ಸೇರಿದಂತೆ ಆದ್ಯತ ವಲಯಕ್ಕೆ ಒಟ್ಟು 10,644.72 ಕೋ.ರೂ. ಮೀಸಲಿಡಲಾಗಿದೆ. ಬಡವರಿಗೆ ಆದ್ಯತ ವಲಯದಲ್ಲಿ ಸಾಲ ಸೌಲಭ್ಯಕ್ಕೆ 809.60 ಕೋ.ರೂ. ಹಾಗೂ ಆದ್ಯತೇತರ ವಲಯಕ್ಕೆ 3,233.53 ಕೋ.ರೂ. ಮೀಸಲಿಡಲಾಗಿದೆ.
ವಿವಿಧ ವಲಯಗಳ ಒಟ್ಟು 4,05,308 ಖಾತೆಗಳಿಗೆ ಸಾಲ ಸೌಲಭ್ಯ ನೀಡುವ ಅಂದಾಜು ಮಾಡಲಾಗಿದೆ.

ಟಾಪ್ ನ್ಯೂಸ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!

3

Karkala: ಕಾಮಗಾರಿಗೆ ಅಡ್ಡಿ; ಸಾರ್ವಜನಿಕರ ಆಕ್ರೋಶ

5-katapady

Katapady: ಕುಂತಳನಗರ ಭಾರತಿ ಹಿ. ಪ್ರಾ. ಶಾಲೆ; ಶತಮಾನೋತ್ಸ ವ ಸಮಾರಂಭಕ್ಕೆ ಚಾಲನೆ

4-katapady

ಶ್ರೀಕ್ಷೇತ್ರ ಪೇಟೆಬೆಟ್ಟು ಕಟಪಾಡಿ- ಜ.4,5: ಬಬ್ಬುಸ್ವಾಮಿ, ಪರಿವಾರ ದೈವಗಳ ನೇಮೋತ್ಸವ

1-magu

Manipal; ಝೀರೋ ಟ್ರಾಫಿಕ್‌ನಲ್ಲಿ ಮಗು ಬೆಂಗಳೂರಿಗೆ : ಈಶ್ವರ ಮಲ್ಪೆ ನೆರವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.