ಸಗ್ರಿ ಚಕ್ರತೀರ್ಥ ಶ್ರೀ ಉಮಾಮಹೇಶ್ವರ ದೇಗುಲ: ನೂತನ ಧ್ವಜಸ್ತಂಭ ಶೋಭಾಯಾತ್ರೆ
Team Udayavani, Mar 30, 2023, 5:50 AM IST
ಉಡುಪಿ: ಸಗ್ರಿ ಚಕ್ರತೀರ್ಥ ಶ್ರೀ ಉಮಾಮಹೇಶ್ವರ ದೇಗುಲದ ನೂತನ ಧ್ವಜಸ್ತಂಭ ಶೋಭಾಯಾತ್ರೆಗೆ ಚಾಲನೆ ಕಾರ್ಯಕ್ರಮ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಬುಧವಾರ ನಡೆಯಿತು.
ಚಾಲನೆ ನೀಡಿದ ಶ್ರೀ ಕಾಣಿಯೂರು ಶ್ರೀಪಾದರು ಮಾತನಾಡಿ, 1.41 ಕೋ.ರೂ. ವೆಚ್ಚದಲ್ಲಿ ಅಭಿವೃದ್ಧಿಗೊಳ್ಳುತ್ತಿರುವ ದೇಗುಲದ ಕಾರ್ಯ ಶೀಘ್ರವಾಗಿ ವ್ಯವಸ್ಥಿತವಾಗಿ ನೆರವೇರಲಿ ಎಂದು ಆಶೀರ್ವಚನ ನೀಡಿದರು.
ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ, ಉಜ್ವಲ್ ಡೆವಲಪರ್ನ ಎಂಡಿ ಪುರುಷೋತ್ತಮ ಪಿ. ಶೆಟ್ಟಿ, ಆರ್ಕಿಟೆಕ್ಟ್ ಶ್ರೀನಾಗೇಶ್ ಹೆಗ್ಡೆ, ವಕೀಲರ ಸಂಘದ ಅಧ್ಯಕ್ಷ ಬಿ. ನಾಗರಾಜ್, ಕಾಪು ಹೊಸ ಮಾರಿಗುಡಿ ದೇಗುಲದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಉದ್ಯಮಿ ಡಾ| ತಲ್ಲೂರು ಶಿವರಾಮ ಶೆಟ್ಟಿ, ಮಟ್ಟು ಶ್ರೀ ವಿಷ್ಣುಮೂರ್ತಿ ದೇಗುಲದ ಅಧ್ಯಕ್ಷ ಮಟ್ಟು ಲಕ್ಷ್ಮೀನಾರಾಯಣ ರಾವ್, ಕೊಡವೂರು ಶ್ರೀ ಶಂಕರನಾರಾಯಣ ದೇಗುಲದ ಅಧ್ಯಕ್ಷ ಸಾಧು ಸಾಲ್ಯಾನ್, ಕಾರ್ತಿಕ್ ಎಸ್ಟೇಟ್‌ನ ಹರಿಯಪ್ಪ ಕೋಟ್ಯಾನ್, ಸ್ವರ್ಣೋದ್ಯಮಿ ಮುರಹರಿ ಕೆ. ಆಚಾರ್ಯ, ಉದ್ಯಮಿ ಗಳಾದ ರಂಜನ್ ಕಲ್ಕೂರ್, ತೋನ್ಸೆ ಮನೋಹರ ಶೆಟ್ಟಿ, ನಗರಸಭೆ ಸದಸ್ಯರಾದ ಬಾಲಕೃಷ್ಣ ಶೆಟ್ಟಿ, ರಮೇಶ್ ಕಾಂಚನ್, ಭಾರತಿ ಪ್ರಶಾಂತ್, ಮಾಜಿ ಸದಸ್ಯ ರಮೇಶ್ ನಾಯಕ್ ಪೆರಂಪಳ್ಳಿ, ವಿಷ್ಣುಪ್ರಸಾದ್ ಪಾಡಿಗಾರು, ದೇಗು ಲದ ತಂತ್ರಿಗಳಾದ ಡಾ| ವಿಟuಲ ತಂತ್ರಿ ಕೊರಂಗ್ರಪಾಡಿ, ಅರ್ಚಕ ಗುರುರಾಜ ಭಟ್,ಅನಂತೇಶ್ವರ ದೇಗುಲದ ಪ್ರದಾನ ಅರ್ಚಕ ಸಗ್ರಿ ವೇದವ್ಯಾಸ ಐತಾಳ್, ಗಿರಿಧರ ಆಚಾರ್ಯ, ಅನಿ ವಾಸಿ ಭಾರತೀಯ ಉದ್ಯಮಿ ಬಿ.ಕೆ. ಶೆಟ್ಟಿ, ಹರಿಕೃಷ್ಣ ಶಿವತ್ತಾಯ, ದೇಗುಲದ ಆಡಳಿತ ಸಮಿತಿ ಮತ್ತು ಬ್ರಹ್ಮಕಲಶ ಅಭಿವೃದ್ಧಿ ಸಮಿತಿ ಪದಾಧಿಕಾರಿಗಳು, ಸದಸ್ಯರು, ಭಕ್ತರು ಭಾಗವಹಿಸಿದ್ದರು.
ದೇಗುಲದ ಆಡಳಿತ ಸಮಿತಿ ಅಧ್ಯಕ್ಷ ರುದ್ರಯ್ಯ ಕೆ. ಆಚಾರ್ಯ ಅತಿಥಿಗಳನ್ನು ಗೌರವಿಸಿದರು. ಬ್ರಹ್ಮಕಲಶ ಅಭಿವೃದ್ಧಿ ಸಮಿತಿ ಅಧ್ಯಕ್ಷ ಸುಪ್ರಸಾದ್ ಶೆಟ್ಟಿ ಬೈಕಾಡಿ ಸ್ವಾಗತಿಸಿ, ಪ್ರಸ್ತಾವಿಸಿದರು.
ಬ್ಯಾಂಡ್‌ಸೆಟ್, ಕೀಲು ಕುದುರೆ, ಚೆಂಡೆ ವಾದನ, ಸ್ಯಾಕೊÕàಫೋನ್, ವಿವಿಧ ಆಕರ್ಷಕ ವೇಷಭೂಷಣಗಳು, ಅಪಾರ ಭಕ್ತರಿಂದ ಕೂಡಿದ ಶೋಭಾ ಯಾತ್ರೆಯು ಶ್ರೀ ಕೃಷ್ಣಮಠದ ರಾಜಾಂಗಣದ ವಾಹನ ನಿಲ್ದಾಣದಿಂದ ಕಲ್ಸಂಕ, ಗುಂಡಿಬೈಲು, ದೊಡ್ಡಣಗುಡ್ಡೆ ಮಾರ್ಗವಾಗಿ ಸಾಗಿ ದೇಗುಲ ತಲುಪಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ
Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ
Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ
Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ
Manipal: ಮಾಹೆಯ ಪ್ರಸನ್ನ ಸ್ಕೂಲ್ ಆಪ್ ಪಬ್ಲಿಕ್ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.