ದಾಖಲೆಗಳಿಲ್ಲದೆ ಅಕ್ಕಿ ಸಾಗಾಟ :13 ಲಕ್ಷ ರೂ. ಮೌಲ್ಯದ ಸೊತ್ತುಗಳ ವಶ
Team Udayavani, Apr 2, 2023, 5:38 AM IST
ಬಂಟ್ವಾಳ: ಚುನಾವಣ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಮಾ. 31ರ ರಾತ್ರಿ ಫರಂಗಿಪೇಟೆಯಲ್ಲಿ ವಾಹನ ತಪಾಸಣೆಯ ಸಂದರ್ಭ ಯಾವುದೇ ದಾಖಲೆಗಳಿಲ್ಲದ ಅಕ್ಕಿ ಸಾಗಾಟ ಪ್ರಕರಣ ಬೆಳಕಿಗೆ ಬಂದಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸರು ಅಕ್ಕಿ ಹಾಗೂ ಲಾರಿ ಸೇರಿದಂತೆ ಒಟ್ಟು 13 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಘಟನೆಯ ಕುರಿತು ಲಾರಿ ಚಾಲಕ ಬೆಂಗಳೂರು ನೆಲಮಂಗಲ ನಿವಾಸಿ ಸುನಿಲ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಅಕ್ಕಿಯು ಯಾರಿಗೆ ಸೇರಿದ್ದು, ಎಲ್ಲಿಂದ-ಎಲ್ಲಿಗೆ ಸಾಗಿಸಲಾಗುತ್ತಿತ್ತು ಎಂಬುದು ತನಿಖೆಯಿಂದ ಹೊರ ಬರಬೇಕಿದೆ. ಗ್ರಾಮಾಂತರ ಪೊಲೀಸರು ಫರಂಗಿಪೇಟೆ ಹೊರಠಾಣೆಯ ಬಳಿ ಚೆಕ್ಪೋಸ್ಟ್ ನಿರ್ಮಿಸಿ ವಾಹನಗಳ ತಪಾಸಣೆ ಮಾಡುತ್ತಿದ್ದು, ಪ್ರಸ್ತುತ ಚುನಾವಣೆಯ ಹಿನ್ನೆಲೆಯಲ್ಲಿ ತಪಾಸಣೆಯನ್ನು ಚುರುಕುಗೊಳಿಸಲಾಗಿತ್ತು.
300 ಗೋಣಿ ಚೀಲಗಳಲ್ಲಿ ತಲಾ 50 ಕೆಜಿಯಂತೆ 15 ಸಾವಿರ ಕೆಜಿ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದ್ದು, ಅಕ್ಕಿಯ ಮೌಲ್ಯ 6 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಸಾಗಾಟಕ್ಕೆ ಬಳಸಲಾದ 7 ಲಕ್ಷ ರೂ. ಮೌಲ್ಯದ ಲಾರಿಯನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ
Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು
Bantwala: ಬಿ.ಸಿ.ರೋಡಿನಲ್ಲಿ ರೈಲ್ವೇಯ ವಿದ್ಯುತ್ ಕೇಬಲ್ ಕಳವು
Sulya: ಆರಂತೋಡು: ಚಿಕನ್ ಸೆಂಟರ್ಗೆ ದಾಳಿ; ಮದ್ಯ ಅಕ್ರಮ ದಾಸ್ತಾನು ಪತ್ತೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.