ಕಲಬುರಗಿ ಗ್ರಾಮೀಣ ಬಿಜೆಪಿಯಲ್ಲಿ ಭುಗಿಲೆದ್ದ ಬಂಡಾಯ
ಶಾಸಕ ಬಸವರಾಜ್ ಮತ್ತಿಮೂಡ ವಿರುದ್ಧ ಬಿಜೆಪಿಗರಿಂದಲೇ ಬೃಹತ್ ಪ್ರತಿಭಟನೆ
Team Udayavani, Apr 2, 2023, 5:43 PM IST
ಕಲಬುರಗಿ: ಇಲ್ಲಿನ ಕಲಬುರಗಿ ಗ್ರಾಮೀಣ ಮೀಸಲು ಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಪಕ್ಷದ ಕಾರ್ಯಕರ್ತರನ್ನು ಕಡೆಗಣಿಸುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರೇ ಬೀದಿಗಿಳಿದು ಬೃಹತ್ ಪ್ರತಿಭಟನೆ ನಡೆಸಿದರಲ್ಲದೇ ಸ್ವಾಭಿಮಾನಿ ಹೆಸರಿನಲ್ಲಿ ಸಮಾವೇಶ ಸಹ ನಡೆಸಿದರು.
ಬಿಜೆಪಿ ಬಾವುಟ ಹಿಡಿದು ಮತ್ತಿಮಡು ಹಟಾವೋ ಕಲಬುರಗಿ ಗ್ರಾಮೀಣ ಬಿಜೆಪಿ ಬಚಾವೋ ಎಂಬ ಅಭಿಯಾನ ಕೈಗೊಂಡ ಬಿಜೆಪಿ ಕಾರ್ಯಕರ್ತರು ಹಾಗೂ ಪ್ರಮುಖರು, ಶಾಸಕ ಮತ್ತಿಮಡು ಲಿಂಗಾಯತರ ವಿರುದ್ದ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು
ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ಶಾಸಕರು ಮೂಲೆಗುಂಪು ಮಾಡಿದ್ದಾರೆ. ಬರೀ ಸುಳ್ಳು ಹೇಳುವುದರಲ್ಲೇ ಕಾಲ ಕಳೆದಿದ್ದಾರೆ. ಹೀಗಾಗಿ ಈ ಬಾರಿ ಟಿಕೆಟ್ ಕೊಡಬೇಡಿ ಸ್ಥಳೀಯ ಪಕ್ಷದ ಮುಖಂಡರಾದ ಅಂಬಾರಾಯ ಅಷ್ಠಗಿ, ಕಮಲಾಕರ ರಾಠೋಡ, ರಾಜಕುಮಾರ ಚವ್ಹಾ, ಅಂಬಾರಾಯ ಬೆಳಕೋಟಾ, ಸೋನುಬಾಯಿ ರಾಠೋಡ ಇವರಲ್ಲಿ ಯಾರಿಗಾದರೂ ಟಿಕೆಟ್ ಕೊಟ್ಟರೂ ಗೆಲ್ಲಿಸಿಕೊಂಡು ಬರುತ್ತೇವೆ ಎಂದು ಬಿಜೆಪಿ ವರಿಷ್ಠರಿಗೆ ಪ್ರತಿಭಟನೆ ನಿರತ ಬಿಜೆಪಿ ಕಾರ್ಯಕರ್ತರು ಘೋಷಣೆಗಳನ್ನು ಕೂಗಿದರು.
ಪ್ರತಿ ಭಟನಾ ಮೆರವಣಿಗೆಯಲ್ಲಿ ಪ್ರಮುಖರಾದ ವೀರು ಸ್ವಾಮಿ ನರೋಣಾ, ಧರ್ಮಣ್ಣ ಹುಂಪಳ್ಳಿ, ಶಶಿಧರ ಮಾಕಾ, ಸತೀಶ ಪಾಟೀಲ್, ಗುರುಶಾಂತಪ್ಪಗೌಡ ಹೊಡಲ್, ಚಿದಾನಂದ ಪಾಟೀಲ್, ವಿಜಯಕುಮಾರ ಪವಾರ ಸೇರಿದಂತೆ ಮುಂತಾದವರಿದ್ದರು.
ಕಲಬುರಗಿ ನಗರದ ಜಗತ್ ಸರ್ಕಲ್ ದಿಂದ ವೀರಶೈವ ಕಲ್ಯಾಣ ಮಂಟಪದವರೆಗೆ ಬೃಹತ್ ಪ್ರತಿಭಟನೆ ನಡೆಸಿ ತದನಂತರ ಕಲ್ಯಾಣ ಮಂಟಪದಲ್ಲಿ ಸ್ವಾಭಿಮಾನ ಸಮಾವೇಶ ನಡೆಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.