ನೀತಿ ಸಂಹಿತೆ ಶಾಸಕರಿಗೂ ಒಂದೇ, ಪ್ರಧಾನಿಗೂ ಒಂದೇ: ಸಿದ್ದರಾಮಯ್ಯ
Team Udayavani, Apr 3, 2023, 6:32 AM IST
ಮೈಸೂರು: ನೀತಿ ಸಂಹಿತೆ ಶಾಸಕರಿಗೂ ಒಂದೇ, ಪ್ರಧಾನಿಗೂ ಒಂದೇ ಆಗಿರುತ್ತದೆ. ಆದ್ದರಿಂದ ರಾಜ್ಯಕ್ಕೆ ಪ್ರಧಾನಿ ಮೋದಿ ಬರಲು ಚುನಾವಣಾ ಆಯೋಗ ಅನುಮತಿ ನೀಡಿದೆಯೇ? ನೀತಿ ಸಂಹಿತೆ ಜಾರಿಯಾದ ಮೇಲೆ ಪ್ರಧಾನಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಹೇಗೆ ಸಾಧ್ಯ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ಎ .9ರಂದು ರಾಜ್ಯಕ್ಕೆ ಪ್ರಧಾನಿ ಮೋದಿ ಅವರು ಆಗಮಿಸುತ್ತಿರುವ ಕುರಿತು ನಗರದ ವಿಮಾನ ನಿಲ್ದಾಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ರಾಜ್ಯ ದಲ್ಲಿ ಚುನಾವಣೆ ಘೋಷಣೆಯಾದ ಮೇಲೆ ಯಾವುದೇ ಸರ್ಕಾರಿ ಕಾರ್ಯಕ್ರಮಗಳನ್ನು ಮಾಡಬಾರದು. ನೀತಿ ಸಂಹಿತೆ ಎಲ್ಲರಿಗೂ ಒಂದೇ ಎಂದು ಹೇಳಿದರು.
ಮೀಸಲಾತಿ ಪರಿಷ್ಕರಣೆಯಿಂದ ಬಿಜೆಪಿಗೆ ಅನುಕೂಲ ಎಂಬ ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಇದು ಯಾವುದೇ ಪೂರ್ವತಯಾರಿ ಇಲ್ಲದೆ ಚುನಾವಣೆಗಾಗಿ ತಂದಿರುವ ವಿಷಯವಾಗಿದೆ. ನಿಯಮ ಮೀರಿ ಶೇ. 6ರಷ್ಟು ಮೀಸಲು ಹೆಚ್ಚಳ ಮಾಡಲಾಗಿದೆ. ಇದಕ್ಕೆ ಸಂವಿಧಾನ ತಿದ್ದುಪಡಿ ಆಗಬೇಕಿತ್ತು. ಸದನದಲ್ಲಿ ಈ ಬಗ್ಗೆ ಚರ್ಚೆ ನಡೆಯಬೇಕಿತ್ತು. ಇದ್ಯಾವುದನ್ನೂ ಇವರು ಮಾಡಿಯೇ ಇಲ್ಲ. ಈ ಕಾರಣದಿಂದ ಇದು ಕೋರ್ಟಿನಲ್ಲಿ ನಿಲ್ಲುವುದಿಲ್ಲ ಎಂದು ಹೇಳಿದರು.
ಹೈಕಮಾಂಡ್ ತೀರ್ಮಾನ: ಮೈಸೂರಿನ ಚಾಮರಾಜ, ಚಾಮುಂಡೇಶ್ವರಿ ಕ್ಷೇತ್ರಗಳ ಕಾಂಗ್ರೆಸ್ ಟಿಕೆಟ್ ಹಂಚಿಕೆ ವಿಷಯ ಮಂಗಳವಾರ ಇತ್ಯರ್ಥವಾಗಲಿದೆ. ಸಭೆಯ ಬಳಿಕ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಆಗಲಿದೆ. ನಾನು ಕೋಲಾರದಲ್ಲಿ ಸ್ಪರ್ಧೆ ಮಾಡುವ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
Congress: ಜಮೀರ್ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್
H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!
Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
Puttur: ಚೆನ್ನಾಗಿ ಮಳೆ ಬಂದರೂ ಕುಸಿದ ಅಂತರ್ಜಲ ಮಟ್ಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.