ಟಿ20 ಪಂದ್ಯ: ಸೂಪರ್ ಓವರಿನಲ್ಲಿ ಲಂಕೆಗೆ ಗೆಲುವು
Team Udayavani, Apr 3, 2023, 6:31 AM IST
ಆಕ್ಲಂಡ್: ತೀವ್ರ ಪೈಪೋಟನಿಂದ ಸಾಗಿದ ಮೊದಲ ಟಿ20 ಪಂದ್ಯದಲ್ಲಿ ಪ್ರವಾಸಿ ಶ್ರೀಲಂಕಾ ತಂಡವು ನ್ಯೂಜಿಲ್ಯಾಂಡ್ ತಂಡವನ್ನು ಸೂಪರ್ ಓವರ್ನಲ್ಲಿ ಸೋಲಿಸಿದೆ. ಈ ಮೊದಲು ನ್ಯೂಜಿಲ್ಯಾಂಡ್ ಇನ್ನಿಂಗ್ಸ್ನ ಅಂತಿಮ ಎಸೆತದಲ್ಲಿ ಐಶ್ ಸೋಧಿ ಅವರು ಸಿಕ್ಸರ್ ಬಾರಿಸಿದ್ದರಿಂದ ಪಂದ್ಯ ಟೈಗೊಂಡಿತ್ತು ಮತ್ತು ಫಲಿತಾಂಶ ನಿರ್ಧರಿಸಲು ಸೂಪರ್ ಓವರ್ ಅಳವಡಿಸಲಾಯಿತು.
ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ ತಂಡವು ಚರಿತ ಅಸಲಂಕ ಅವರ 67 ರನ್ ನೆರವಿನಿಂದ 5 ವಿಕೆಟಿಗೆ 196 ರನ್ನುಗಳ ಉತ್ತಮ ಮೊತ್ತ ಪೇರಿಸಿತ್ತು. ಇದಕ್ಕುತ್ತರವಾಗಿ ನ್ಯೂಜಿಲ್ಯಾಂಡ್ ತಂಡವು ಡ್ಯಾರಿಲ್ ಮಿಚೆಲ್ ಅವರ 66 ರನ್ ನೆರವಿನಿಂದ ಗೆಲುವಿನತ್ತ ಹೊರಟಿತ್ತು. ಅಂತಿಮ ಓವರಿನಲ್ಲಿ ಗೆಲ್ಲಲು 13 ರನ್ ಬೇಕಿತ್ತು. ಆದರೆ ತಂಡ 12 ರನ್ ಗಳಿಸಿದ್ದರಿಂದ ಪಂದ್ಯ ಸಮಬಲದಲ್ಲಿ ಅಂತ್ಯಗೊಂಡಿತು. ಅಂತಿಮ ಎಸೆತದಲ್ಲಿ ಸೋಧಿ ಸಿಕ್ಸರ್ ಬಾರಿಸಿದ್ದರಿಂದ ತಂಡ ಟೈಗೊಳ್ಳಲು ಸಾಧ್ಯವಾಗಿತ್ತು.
ಸೂಪರ್ ಓವರ್ನಲ್ಲಿ ನ್ಯೂಜಿಲ್ಯಾಂಡ್ ಮೊದಲು ಬ್ಯಾಟಿಂಗ್ ಮಾಡಿತ್ತು. ಡ್ಯಾರಿಲ್ ಮಿಚೆಲ್, ಜಿಮ್ಮಿ ನೀಶಮ್ ಮತ್ತು ಮಾರ್ಕ್ ಚಾಪ್ಮನ್ ಬ್ಯಾಟ್ಸ್ಮನ್ ಆಗಿದ್ದರು. ಮಹೀಶ್ ತೀಕ್ಷಣ ಬೌಲರ್. ನ್ಯೂಜಿಲ್ಯಾಂಡ್ ಎರಡು ವಿಕೆಟ್ ಕಳೆದುಕೊಂಡು ಕೇವಲ 8 ರನ್ ಗಳಿಸಲಷ್ಟೇ ಶಕ್ತವಾಗಿತ್ತು. ಶ್ರೀಲಂಕಾ ಪರ ಕುಸಲ್ ಮೆಂಡಿಸ್, ಚರಿತ ಅಸಲಂಕ ಆಡಿದ್ದರು. ಅಸಲಂಕ ಅವರ ಸ್ಫೋಟಕ ಆಟದಿಂದಾಗಿ ಶ್ರೀಲಂಕಾ ವಿಕೆಟ್ ನಷ್ಟವಿಲ್ಲದೇ 11 ರನ್ ಗಳಿಸಿ ಜಯಭೇರಿ ಬಾರಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cricket: ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ
Afghanistan Cricketer: ಏಕದಿನ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಅಫ್ಘಾನ್ ಆಲ್ರೌಂಡರ್
IND Vs SA: ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್ ಆಫ್ರಿಕಾ ಸವಾಲು
Pro Kabaddi 2024: ಗೆಲುವಿನ ಹಳಿ ಏರಿದ ದಬಾಂಗ್ ಡೆಲ್ಲಿ
Ranji Trophy: ಕರ್ನಾಟಕಕ್ಕೆ ಹಿನ್ನಡೆ ಭೀತಿ
MUST WATCH
ಹೊಸ ಸೇರ್ಪಡೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.