ಸು| ಏಕನಾಥ ಶೆಟ್ಟಿಗೆ ಕೆದಂಬಾಡಿ ರಾಮಯ್ಯ ಗೌಡ ಶೌರ್ಯ ಪ್ರಶಸ್ತಿ

ಎ.5: ಅಮರ ಸುಳ್ಯ ಸ್ವಾತಂತ್ರ್ಯ ಸಂಗ್ರಾಮ ಸಂಸ್ಮರಣ ದಿನ

Team Udayavani, Apr 4, 2023, 6:10 AM IST

ಸು| ಏಕನಾಥ ಶೆಟ್ಟಿಗೆ ಕೆದಂಬಾಡಿ ರಾಮಯ್ಯ ಗೌಡ ಶೌರ್ಯ ಪ್ರಶಸ್ತಿ

ಮಂಗಳೂರು: ಕೆದಂಬಾಡಿ ರಾಮಯ್ಯ ಗೌಡರ ನಾಯಕತ್ವದ ತುಳುನಾಡಿನ ವೀರ ರೈತಾಪಿ ಸೇನೆಯು ಬಾವುಟ ಗುಡ್ಡೆಯಲ್ಲಿ ಬ್ರಿಟಿಷ್‌ ಧ್ವಜ ಕಿತ್ತೆಸೆದು ತುಳುನಾಡಿನಲ್ಲಿ ಸ್ವಾತಂತ್ರ್ಯ ಸಂಗ್ರಾಮದ ಪ್ರಥಮ ವಿಜಯ ಪತಾಕೆ ಹಾರಿಸಿದ ಸ್ಮರಣಾರ್ಥ “ಅಮರ ಸುಳ್ಯ ಸ್ವಾತಂತ್ರ್ಯ ಸಂಗ್ರಾಮ- ಸಂಸ್ಮರಣ ದಿನ’ ಕಾರ್ಯಕ್ರಮವನ್ನು ಎ. 5ರಂದು ಬೆಳಗ್ಗೆ 10.30ಕ್ಕೆ ನಗರದ ಅಲೋಶಿಯಸ್‌ ಕಾಲೇಜಿನ ಲೊಯೊಲ್ಲಾ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿ ವತಿಯಿಂದ ನಡೆಯುವ ಸಮಾರಂಭದಲ್ಲಿ ಕೆದಂಬಾಡಿ ರಾಮಯ್ಯ ಗೌಡ ರಾಜ್ಯ ಶೌರ್ಯ ಪ್ರಶಸ್ತಿಗಾಗಿ ಭಾರತೀಯ ಭೂ ಸೇನೆಯ ನಿವೃತ್ತ ಯೋಧ, 2016ರಲ್ಲಿ ನಿಗೂಢವಾಗಿ ಕಣ್ಮರೆಯಾಗಿ ಇನ್ನೂ ಪತ್ತೆಯಾಗದ ವಿಮಾನದಲ್ಲಿದ್ದ ಸುಬೇದಾರ್‌ ಏಕನಾಥ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಮಿತಿ ಅಧ್ಯಕ್ಷ ಎಂ.ಬಿ. ಕಿರಣ್‌ ಬುಡ್ಲೆಗುತ್ತು ಅವರು ಸೋಮವಾರ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ| ನಿರ್ಮಲಾ ನಂದನಾಥ ಮಹಾಸ್ವಾಮೀಜಿ ಅನುಗ್ರಹ ಸಂದೇಶ ನೀಡುವರು. ಮಂಗಳೂರು ಶಾಖಾ ಮಠದ ಡಾ| ಧರ್ಮಪಾಲನಾಥ ಸ್ವಾಮೀಜಿ ಉಪಸ್ಥಿತರಿದ್ದು, ಒಡಿಯೂರು ಸಂಸ್ಥಾನದ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡುವರು. ಮಂಗಳೂರು ಕ್ರೈಸ್ತ ಧರ್ಮ ಪ್ರಾಂತ್ಯದ ವಿಗಾರ್‌ ಜನರಲ್‌ ಅತಿ ವಂ| ಮ್ಯಾಕ್ಸಿಮ್‌ ನೊರೊನ್ಹಾ, ಎಸ್‌ವೈಎಸ್‌ ದ.ಕ. ಜಿಲ್ಲಾ ಅಧ್ಯಕ್ಷ ಹಾಗೂ ಮುಸ್ಲಿಂ ಧರ್ಮಗುರು ಮೌಲಾನ ಯು.ಕೆ. ಅಬ್ದುಲ್‌ ಅಝೀಝ್ ದಾರಿಮಿ ಶುಭ ನುಡಿಗಳನ್ನಾಡಲಿದ್ದಾರೆ ಎಂದು ಅವರು ಹೇಳಿದರು.

1837ರ ಎಪ್ರಿಲ್‌ 5ರಂದು ಬ್ರಿಟಿಷರನ್ನು ಮಂಗಳೂರಿನಿಂದ ಹೊಡೆದೋಡಿಸಿ ಬಾವುಟಗುಡ್ಡೆ ಯಲ್ಲಿ ಪ್ರಥಮ ವಿಜಯ ಪತಾಕೆಯನ್ನು ಹಾರಿಸಿದ ಸ್ಮರಣಾರ್ಥ ಮೂರು ವರ್ಷಗಳಿಂದ ಸಂಸ್ಮರಣ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಜತೆಗೆ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಯನ್ನು ಬಾವುಟಗುಡ್ಡದಲ್ಲಿ ಅನಾವರಣಗೊಳಿಸಲಾಗಿದೆ ಎಂದು ಹೇಳಿದರು.
ಸಮಿತಿ ಉಪಾಧ್ಯಕ್ಷ ಪಿ.ಎಚ್‌.ಆನಂದ್‌ ನೆರಿಯ, ಪ್ರಧಾನ ಕಾರ್ಯದರ್ಶಿ ರಕ್ಷಿತ್‌ ಪುತ್ತಿಲ, ಪ್ರಧಾನ ಸಂಚಾಲಕ ಭಾಸ್ಕರ್‌ ದೇವಸ್ಯ, ಕೋಶಾ ಧಿಕಾರಿ ಶಿವರಾಮ ಗೌಡ ನಿನ್ನಿಕಲ್‌ ಉಪಸ್ಥಿತರಿದ್ದರು.

ಏಕನಾಥ ಶೆಟ್ಟಿ ಪರಿಚಯ
ಕುತ್ತಾರಿನ ಯೋಧ ಏಕನಾಥ ಶೆಟ್ಟಿ 1985ರಲ್ಲಿ ಭಾರತೀಯ ಭೂ ಸೇನೆಗೆ ಸೇರ್ಪಡೆಗೊಂಡು ಕಾರ್ಗಿಲ್‌ ಕಾರ್ಯಾಚರಣೆಯಲ್ಲಿ ಅಪ್ರತಿಮ ಸಾಹಸ ಮೆರೆದು ಸೇನಾ ಪದಕ ಪಡೆದವರು. 2009ರಲ್ಲಿ ಸುಬೇದಾರ್‌ ರ್‍ಯಾಂಕ್‌ನೊಂದಿಗೆ ಸೇವಾ ನಿವೃತ್ತಿ ಹೊಂದಿದ್ದರು. ಆದರೆ ಊರಿನಲ್ಲಿ ದೊರೆತ ಉದ್ಯೋಗ ತ್ಯಜಿಸಿ ಮತ್ತೆ ಸೇನೆಯ ರಕ್ಷಣ ವಿಭಾಗಕ್ಕೆ ಸೇರ್ಪಡೆಗೊಂಡು ಕೇರಳದ ಕಣ್ಣೂರಿನಲ್ಲಿ ತರಬೇತಿ ಮುಗಿಸಿ ವಾಯುಸೇನೆಯಲ್ಲಿ ಎನ್‌ಸಿಸಿ ತರಬೇತುದಾರರಾಗಿ ನೇಮಕಗೊಂಡಿದ್ದರು. 2016ರ ಜುಲೈ 22ರಂದು ಸೇನಾ ಕರ್ತವ್ಯ ನಿಮಿತ್ತ ಚೆನ್ನೈನ ತಾಂಬರಂ ವಾಯುನೆಲೆಯಿಂದ ಅಂಡಮಾನ್‌ ಪೋರ್ಟ್‌ಬ್ಲೇರ್‌ಗೆ ವಿಮಾನದಲ್ಲಿ ತೆರಳುತ್ತಿದ್ದಾಗ ವಿಮಾನ ನಿಗೂಢವಾಗಿ ನಾಪತ್ತೆಯಾಗಿ ಈವರೆಗೂ ಸುಳಿವು ದೊರೆತಿಲ್ಲ. ವಿಮಾನದಲ್ಲಿದ್ದ 29 ಮಂದಿ ಸೈನಿಕರಲ್ಲಿ ಏಕೈಕ ಕನ್ನಡಿಗ ಯೋಧ ಏಕನಾಥ ಶೆಟ್ಟಿ ಎಂದು ಕಿರಣ್‌ ಬುಡ್ಲೆಗುತ್ತು ವಿವರಿಸಿದರು.

ಟಾಪ್ ನ್ಯೂಸ್

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Uddhav Thackeray’s bag inspection by election commission, controversy

Maha Election; ಚು.ಆಯೋಗದಿಂದ ಉದ್ಧವ್‌ ಠಾಕ್ರೆ ಬ್ಯಾಗ್‌ ಪರಿಶೀಲನೆ, ವಿವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ACT

Mangaluru: ಗಾಂಜಾ ಸೇವನೆ; ಯುವಕನ ಬಂಧನ

14

Mangaluru: ಸ್ಕೂಟರ್‌ ಕಳವು; ಪ್ರಕರಣ ದಾಖಲು

16-moodbidri

Mudbidri: ದ್ವಿಚಕ್ರ ವಾಹನ ಅಪಘಾತ; ಗಾಯಾಳು ಸವಾರ ಮೃತ್ಯು

5

Bajpe: ಊರಿನ ಜಾರಿಗೆ ಸಿಪ್ಪೆಗೆ ಹೊರರಾಜ್ಯದಲ್ಲಿ ಬೇಡಿಕೆ

4(3

Mangaluru: ಮುಂಗಾರು ಹಂಗಾಮಿನಲ್ಲಿ ಈ ಬಾರಿ ಬೇಸಾಯ ತಡವಾದರೂ ಉತ್ತಮ ಬೆಳೆ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.