ಸಕಲೇಶಪುರ: ಮತಬೇಟೆಗಿಳಿದ ಅಭ್ಯರ್ಥಿಗಳ ಪತ್ನಿಯರು

Team Udayavani, Apr 4, 2023, 11:20 AM IST

tdy-14

ಸಕಲೇಶಪುರ: ವಿಧಾನಸಭೆ ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಚುನಾವಣೆ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಮಧ್ಯೆ, ಸ್ಪರ್ಧಿಗಳ ಪತ್ನಿಯರು ಅಖಾಡಕ್ಕೆ ಧುಮುಕಿದ್ದು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ.

ತಾಲೂಕಿನಲ್ಲಿ ಜೆಡಿಎಸ್‌ ಪರವಾಗಿ ಜಿಪಂ ಮಾಜಿ ಸದಸ್ಯೆ ಚಂಚಲಾ ಕುಮಾರಸ್ವಾಮಿ ಅವರು ತಮ್ಮ ಪತಿಯ ಪರ ಭರ್ಜರಿ ಚುನಾವಣೆ ಪ್ರಚಾರ ನಡೆಸುತ್ತಿದ್ದಾರೆ. ಇನ್ನು ಇವರಿಗೆ ಸಡ್ಡು ಹೊಡೆ ಯಲು ಕಾಂಗ್ರೆಸ್‌ ಅಭ್ಯರ್ಥಿ ಮುರಳಿ ಮೋಹನ್‌ರ ಪತ್ನಿ ನಂದಿನಿ ಮುರಳಿಮೋಹನ್‌ ಅವರು ಪ್ರಚಾರದಲ್ಲಿ ತಲ್ಲೀನರಾಗಿದ್ದಾರೆ.

ಮತಬೇಟೆ: ಕಾಂಗ್ರೆಸ್‌ಗೆ ಸಾಂಪ್ರದಾಯಿಕವಾಗಿ ದಲಿತ, ಅಲ್ಪಸಂಖ್ಯಾತ ಮತಬ್ಯಾಂಕ್‌ ಇದ್ದು ಈ ಹಿನ್ನೆಲೆ ಒಕ್ಕಲಿಗ ಹಾಗೂ ವೀರಶೈವ ಮತ ಸೆಳೆದು ಗೆಲುವು ಸಾಧಿಸಲು ಹೆಚ್ಚಿನ ಪ್ರಯತ್ನ ಮಾಡ ಬೇಕಿದೆ. ಹೀಗಾಗಿ ನಂದಿನಿ ಮುರಳಿ ಮೋಹನ್‌ ಭರ್ಜರಿ ಮತಬೇಟೆಗೆಇಳಿದಿದ್ದಾರೆ.

ಕ್ಷೇತ್ರದಲ್ಲಿ ಬಹಿರಂಗವಾಗಿ ಕಾಣಿಸುತ್ತಿಲ್ಲ: ಇದೇ ವೇಳೆ ಬಿಜೆಪಿ ಪ್ರಬಲ ಟಿಕೆಟ್‌ ಅಕಾಂಕ್ಷಿ ಸಿಮೆಂಟ್‌ ಮಂಜುನಾಥ್‌ ಪರ ಪ್ರತಿಭಾ ಮಂಜುನಾಥ್‌ ಸಹ ಪ್ರಚಾರ ನಡೆಸುತ್ತಿದ್ದಾರೆ. ಆದರೆ, ಇನ್ನೂ ಬಿಜೆಪಿ ಟಿಕೆಟ್‌ ಘೋಷಣೆಯಾಗದ ಕಾರಣ ಬಹಿರಂಗವಾಗಿ ಹೆಚ್ಚಾಗಿ ಕಾಣುತ್ತಿಲ್ಲ. ಇನ್ನು ಕಳೆದ ಬಾರಿ ಬಿಜೆಪಿಯಿಂದ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ನಾರ್ವೆ ಸೋಮಶೇಖರ್‌ರ ಧರ್ಮಪತ್ನಿ ದಾಮಿನಿ ಸಹ ಈಗಾಗಲೇ ಕ್ಷೇತ್ರಕ್ಕೆ ಆಗಮಿಸಿ ಒಂದು ಸುತ್ತು ಬಿಜೆಪಿಯ ಪ್ರಮುಖ ಮುಖಂಡರನ್ನು ಭೇಟಿ ಮಾಡಿ ಹೋಗಿದ್ದರೆ. ಮುರಳಿ ಮೋಹನ್‌ ಹಾಗೂ ಸಿಮೆಂಟ್‌ ಮಂಜುನಾಥ್‌ರ ಪತ್ನಿಯರು ತಮ್ಮ ಚಿಕ್ಕ ಮಕ್ಕಳನ್ನು ನಿಭಾಯಿಸುವ ಜತೆಗೆ ಅನಿವಾರ್ಯವಾಗಿ ರಾಜಕೀಯ ರಂಗ ಪ್ರವೇಶ ಮಾಡಬೇಕಾಗಿದೆ.

ಮಹಿಳಾ ಮತಕ್ಕೆ ಕಾರ್ಯತಂತ: ಕಳೆದ 3 ಚುನಾ ವಣೆಗಳಲ್ಲಿ ಶಾಸಕ ಎಚ್‌.ಕೆ.ಕುಮಾರಸ್ವಾಮಿ ಗೆಲುವಿನ ಹಿಂದೆ ಅವರ ಧರ್ಮಪತ್ನಿ ಚಂಚಲಾ ಕುಮಾರಸ್ವಾಮಿ ಅವರ ಪಾತ್ರವೂ ಬಹಳ ದೊಡ್ಡದಿದೆ. ಮಹಿಳೆಯರ ಮತಗಳನ್ನು ಮಾತ್ರವಲ್ಲ, ಎಲ್ಲಾ ವರ್ಗದವರ ಮತಗಳನ್ನು ಜೆಡಿಎಸ್‌ ಪರ ಸೆಳೆಯುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದೀಗ ನಾಲ್ಕನೇ ಬಾರಿಗೆ ತಮ್ಮ ಪತಿಯನ್ನು ಗೆಲ್ಲಿಸಿಕೊಂಡು ಬರಲು ಈಗಾಗಲೇ ಭರ್ಜರಿ ಚುನಾವಣೆ ಕಾರ್ಯತಂತ್ರ ರೂಪಿಸಿದ್ದಾರೆ.

ಈ ಹಿನ್ನೆಲೆ ಕಾಂಗ್ರೆಸ್‌ ಅಭ್ಯರ್ಥಿ ಮುರಳಿಮೋಹನ್‌ ಸಹ ಚುನಾವಣಾ ಅಖಾಡಕ್ಕೆ ತಮ್ಮ ಪತ್ನಿ ನಂದಿನಿ ಮುರಳಿಮೋಹನ್‌ರನ್ನು ಇಳಿಸಿದ್ದು ಕಳೆದ 1 ತಿಂಗಳಿನಿಂದ ಕ್ಷೇತ್ರವನ್ನು ಪ್ರತ್ಯೇಕವಾಗಿ ಅವರು ಸುತ್ತುತ್ತಿದ್ದಾರೆ. ಈ ಮೂಲಕ, ಮಹಿಳೆಯರ ಮತ ಗಳನ್ನು ಸೆಳೆಯಲು ಹೆಚ್ಚಿನ ಪ್ರಯತ್ನ ಮಾಡುತ್ತಿದ್ದಾರೆ.

ಕ್ಷೇತ್ರ ದೊಡ್ಡದಾಗಿದ್ದು ಕುಮಾರಸ್ವಾಮಿ ಅವರ ಜತೆ ನಾನು ಪ್ರತಿ ಬಾರಿಯಂತೆ ಚುನಾವಣೆ ಪ್ರಚಾರದಲ್ಲಿ ಭಾಗಿಯಾಗಿದ್ದೇನೆ. ಇದರಲ್ಲಿ ವಿಶೇಷತೆ ಏನಿಲ್ಲ. ಈ ಬಾರಿಯೂ ಗೆಲುವು ಸಾಧಿಸುತ್ತಾರೆ. ಚಂಚಲಾ ಕುಮಾರಸ್ವಾಮಿ, ಜೆಡಿಎಸ್‌

ಕಳೆದ ಒಂದು ದಶಕದಿಂದ ಮುರಳಿಮೋಹನ್‌ ಕ್ಷೇತ್ರದಲ್ಲಿ ಬೀಡುಬಿಟ್ಟಿದ್ದು ಪ್ರಪ್ರಥಮವಾಗಿ ಚುನಾವಣೆ ಎದುರಿಸುತ್ತಿದ್ದಾರೆ. ಉತ್ತಮ ಸ್ಪಂದನೆ ದೊರಕುತ್ತಿದ್ದು ಕಾಂಗ್ರೆಸ್‌ ಗೆಲುವು ಖಚಿತ. ನಂದಿನಿ, ಮುರಳಿ ಮೋಹನ್‌ಪತ್ನಿ

ಸುಧೀರ್‌ ಎಸ್‌.ಎಲ್‌

ಟಾಪ್ ನ್ಯೂಸ್

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

muslim marriage

Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

Hasanmbe

Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.