ಏ.28ಕ್ಕೆ ಏಕವ್ಯಕ್ತಿ ಚಿತ್ರ ‘ರಾಘು’
Team Udayavani, Apr 4, 2023, 12:55 PM IST
ವಿಜಯ್ ರಾಘವೇಂದ್ರ ನಾಯಕನಾಗಿ ನಟಿಸಿರುವ “ರಾಘು’ ಏಪ್ರಿಲ್ 28ಕ್ಕೆ ತೆರೆಗೆ ಬರುತ್ತಿದೆ. ಇದು ಏಕವ್ಯಕ್ತಿ ಚಿತ್ರ ಎಂಬುದು ಮತ್ತೂಂದು ವಿಶೇಷ. ಅಂದರೆ ಸಿನಿಮಾದ ಆರಂಭದಿಂದ ಅಂತ್ಯದವರೆಗೆ ನಿಮಗೆ ಕಾಣಿಸೋದು ನಾಯಕ ಮಾತ್ರ. ರಾಘು ಸಿನಿಮಾ ಮೂಲಕ ವಿಜಯ್ ರಾಘವೇಂದ್ರ ಇಂತಹದೊಂದು ಪ್ರಯೋಗಕ್ಕೆ ತಮ್ಮನ್ನು ತಾವು ಒಡ್ಡಿಕೊಂಡಿದ್ದಾರೆ.
ಇಡೀ ಸಿನಿಮಾದಲ್ಲಿ ವಿಜಯ್ ರಾಘವೇಂದ್ರ ಒಬ್ಬರೇ ಇರುತ್ತಾರೆ. ಎಂ. ಆನಂದ್ ರಾಜ್ ಈ ಚಿತ್ರದ ನಿರ್ದೇಶಕರು. ಆನ ಹಾಗೂ ಬ್ಯಾಂಗ್ ಸಿನಿಮಾಗಳಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರುವ ಅನುಭವವಿರುವ ಎಂ ಆನಂದ್ ರಾಜ್ ಸ್ವತಂತ್ರ ನಿರ್ದೇಶಕರಾಗಿ “ರಾಘು’ ಮೂಲಕ ಬಡ್ತಿ ಪಡೆದಿದ್ದಾರೆ.
“ಡಿಕೆ ಎಸ್ ಸ್ಟುಡಿಯೋ’, “ಕೋಟಾ ಫಿಲಂ ಫ್ಯಾಕ್ಟರಿ ಪ್ರೊಡಕ್ಷನ್ ಹೌಸ್’ನಡಿ ರಾಘು ಸಿನಿಮಾವನ್ನು ರನ್ವಿತ್ ಶಿವಕುಮಾರ್ ಹಾಗೂ ಅಭಿಷೇಕ್ ಕೋಟ ನಿರ್ಮಾಣ ಮಾಡಿದ್ದಾರೆ. ಚಿತ್ರಕ್ಕೆ ಉದಯ್ ಲೀಲಾ ಛಾಯಾಗ್ರಹಣ, ವಿಜೇತ್ ಚಂದ್ರ ಸಂಕಲನ, ರಿತ್ವಿಕ್ ಮುರುಳಿಧರ್ ಹಿನ್ನೆಲೆ ಸಂಗೀತ ಚಿತ್ರಕ್ಕಿದೆ. ಸೂರಜ್ ಜೋಯಿಸ್ ಸಂಗೀತ ನಿರ್ದೇಶನವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.