ಆನೆಗೊಂದಿ‌ ಸಂಸ್ಥಾನದ ಕುಪ್ಪಮ್ಮ ರಾಣಿಯ ಶಾಸನ ಸಾಣಾಪೂರದಲ್ಲಿ ಪತ್ತೆ       

Team Udayavani, Apr 4, 2023, 2:08 PM IST

tdy-18

ಗಂಗಾವತಿ : ವಿಜಯನಗರ ಪತನದ ನಂತರ ಬ್ರಿಟಿಷ್ ಆಗಮನದ ವರೆಗೂ ಅಸ್ತಿತ್ವದಲ್ಲಿ ಆನೆಗೊಂದಿ ಸಂಸ್ಥಾನದ ಕುರಿತು ಮಾಹಿತಿಯುಳ್ಳ ಶಿಲಾಶಾಸನಯೊಂದು ತಾಲೂಕಿನ ಸಾಣಾಪೂರ ಗ್ರಾಮದಲ್ಲಿ ಪತ್ತೆಯಾಗಿದೆ.

ಆನೆಗೊಂದಿ ನರಪತಿ ಸಂಸ್ಥಾನದ ರಾಣಿ ಕುಪ್ಪಮ್ಮ ಶಾಸನವನ್ನು ಗಂಗಾವತಿಯ ಇತಿಹಾಸ ಸಂಶೋಧಕ ಡಾ. ಶರಣಬಸಪ್ಪ ಕೋಲ್ಕಾರ್ ಸಂಶೋಧಿಸಿದ್ದಾರೆ.

ಸಾಣಾಪೂರ ಗ್ರಾಮದ ತುಂಗಭದ್ರಾ ನದಿಗೆ ನಿರ್ಮಿಸಿರುವ ಡ್ಯಾಂ ಎಡ ಭಾಗದ  ಮೇಲಿನ ಗಂಗಾಪರಮೇಶ್ವರಿ ದೇವಾಲಯದಲ್ಲಿ ಈ ಶಾಸನ ಪತ್ತೆಯಾಗಿದೆ

12 ಸಾಲುಗಳಲ್ಲಿರುವ ಈ ಶಾಸನ 1309ರ ಫಸಲಿ ವರ್ಷವನ್ನು ಉಲ್ಲೇಖಿಸುತ್ತಿದ್ದು ಅದು ಕ್ರಿ.ಶ. 1899 ಕ್ಕೆ ಸರಿ ಹೊಂದುತ್ತದೆ. ಶಾಸನವು ರಾಣಿ ಕುಪ್ಪಮ್ಮನವರ ಅಭಿಪ್ರಾಯದಂತೆ ಶ್ರೀರಂಗ ದೇವರಾಯ ಮಹಾರಾಯರ ಅಪ್ಪಣೆ ಪ್ರಕಾರ ಅವರ ಆಪ್ತ ಕಾರ್ಯದರ್ಶಿಯಾಗಿದ್ದ ನಂದ್ಯಾಲ್ ನಾರಾಯಣ ರಾಜರು ಶಾಸನವಿರುವ ದೇವಾಲಯವನ್ನು ಕಟ್ಟಿಸಿದ ವಿಷಯವನ್ನು ತಿಳಿಸುತ್ತದೆ.

ಆನೆಗೊಂದಿ ನರಪತಿ ಸಂಸ್ಥಾನದ ಧೀಮಂತ ರಾಣಿಯಾಗಿದ್ದ ರಾಣಿ ಕುಪ್ಪಮ್ಮ ತನ್ನ ಗಂಡ ಕೃಷ್ಣದೇವರಾಯನ ಅಕಾಲಿಕ ಮರಣಾದ ನಂತರ ಬ್ರಿಟಿಷರ ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಯನ್ನು ಧಿಕ್ಕರಿಸಿ ಸಂಸ್ಥಾನವನ್ನು ಉಳಿಸಿಕೊಳ್ಳಲು  ತನ್ನ ತಮ್ಮ ಪಂಪಾಪತಿರಾಜುವನ್ನು ದತ್ತು ಪಡೆದು ಶ್ರೀರಂಗದೇವರಾಯನೆಂದು ನಾಮಕರಣ ಮಾಡಿ ಪಟ್ಟಕ್ಕೆ ಕೂಡಿಸಿದಳು. ಅಲ್ಪವಯಸ್ಕ ನಾಗಿದ್ದ ಮಗನ ಪರವಾಗಿ ತಾನೇ ಆಡಳಿತ ನಡೆಸಿದಳು. ಜನಾನುರಾಗಿದ್ದ ಈಕೆ ಹಲವು ದಾನ ಧರ್ಮಗಳನ್ನು ಮಾಡಿದ್ದಾಳೆ.ಈಗಾಗಲೇ ರಾಣಿಯ ಹಲವು ಶಾಸನಗಳು ದೊರೆತಿದ್ದು ಅವು ವಾಲ್ಮೀಕಿ ಜನಾಂಗದ ಗುರುತ್ವ ಧಾರಣೆಯನ್ನು  ರಾಣಿ ವಹಿಸಿಕೊಂಡ ಬಗ್ಗೆ, ಕಂಪ್ಲಿ ಕಲ್ಮಠಕ್ಕೆ ಹಂಪಿಯಲ್ಲಿ ದಾಸೋಹಕ್ಕಾಗಿ ಮಂಟಪವೊಂದನ್ನು ದಾನ ನೀಡಿದ ಬಗ್ಗೆ ತಿಳಿಸುತ್ತವೆ.

ಪ್ರಸ್ತುತ ಶಾಸನ ದೇವಾಲಯ ನಿರ್ಮಾಣದ ಬಗ್ಗೆ ತಿಳಿಸುವುದರ ಮೂಲಕ ರಾಣಿಯ ಕಾರ್ಯ ಚಟುವಟಿಕೆಗಳನ್ನು ಮತ್ತಷ್ಟು ತಿಳಿಯಲು ಸಹಾಯಕವಾಗಿದೆ.

ಈ ಶಾಸನ ಸಂಶೋಧನೆಯಲ್ಲಿ   ಕೊಲ್ಲಿನಾಗೇಶ್ವರರಾವ್ ಸರಕಾರಿ ಮಹಾವಿದ್ಯಾಲಯದ ಇತಿಹಾಸ  ಪ್ರಾಧ್ಯಾಪಕ  ಭಜರಂಗಬಲಿ ಗೌಡಪ್ಪನೂರ್ , ಆನೆಗೊಂದಿ ಸತ್ಯರಾಜು, ಪತ್ರಕರ್ತ ಮಂಜುನಾಥ್ ಗುಡ್ಲಾನೂರ ನೆರವಾಗಿದ್ದಾರೆ ಎಂದು ಡಾ.  ಕೋಲ್ಕಾರ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Maharashtra Election: Focus on winning the booth: Modi’s Mantra to Workers

Maharashtra Election: ಬೂತ್‌ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

1

Lawyer Jagadish: ಮತ್ತೆ ಬಿಗ್‌ ಬಾಸ್‌ಗೆ ಕಾರ್ಯಕ್ರಮಕ್ಕೆ ಲಾಯರ್‌ ಜಗದೀಶ್‌ ಎಂಟ್ರಿ..!

6

Bengaluru: ಕಸವನ್ನು ಗೊಬ್ಬರವಾಗಿಸುವ “ಕಪ್ಪು ಸೈನಿಕ ನೊಣ’!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-koppala

Koppala ಗವಿಮಠ ಜಾತ್ರೆಗೆ ನಟ ಅಮಿತಾಬ್‌ ಬಚ್ಚನ್‌?

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು

ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Maharashtra Election: Focus on winning the booth: Modi’s Mantra to Workers

Maharashtra Election: ಬೂತ್‌ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.