ತುಳು ಕರ್ನಾಟಕದ ಎರಡನೇ ಅಧಿಕೃತ ಭಾಷೆಯಾಗಲಿ: ವಸಂತ ಶೆಟ್ಟಿ ಬೆಳ್ಳಾರೆ

 ದೆಹಲಿಯಲ್ಲಿ ಕರಾವಳಿ ಸಮಾವೇಶ

Team Udayavani, Apr 5, 2023, 10:54 AM IST

6-delhi

ನವದೆಹಲಿ: ಸರಕಾರ ತುಳು ಭಾಷೆಯನ್ನು ಎರಡನೇ ಅಧಿಕೃತ ಭಾಷೆಯನ್ನಾಗಿ ಅಂಗೀಕರಿಸಬಹುದೇ ಎಂಬುದನ್ನು ಪರಿಶೀಲಿಸಿ ವರದಿ ನೀಡಲು ಡಾ. ಮೋಹನ ಆಳ್ವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ನೇಮಕ ಮಾಡಿದೆ. ಈ ಸಮಿತಿಯ ಶಿಫಾರಸ್ಸನ್ನು ಕರ್ನಾಟಕ ಸರಕಾರ ಅಂಗೀಕರಿಸಿದರೆ ತುಳು ಎಂಟನೇ ಪರಿಚ್ಛೇದವನ್ನು ಸೇರಿ ಆ ಭಾಷೆ ಅಭಿವೃದ್ಧಿಯಾಗುತ್ತದೆ ಎಂದು ದೆಹಲಿ ತುಳುಸಿರಿಯ ಅಧ್ಯಕ್ಷ ವಸಂತ ಶೆಟ್ಟಿ ಬೆಳ್ಳಾರೆ ಹೇಳಿದರು.

ಅವರು ಏ.2 ರಂದು ದೆಹಲಿ ತುಳು ಸಿರಿ ಆಯೋಜಿಸಿದ ಕರಾವಳಿ ಸಮಾವೇಶದ ಅಧ್ಯಕ್ಷತೆ ವಹಿಸಿ ಮಾತಾನಾಡಿದರು.

ತುಳು ಬಂಧುಗಳು ಎಂದಿಗೂ ಕನ್ನಡದ ವಿರೋಧಿಗಳಾಗಿರಲೇ ಇಲ್ಲ. ತುಳುವರು ಕನ್ನಡದ ಅಭಿವೃದ್ಧಿಗೆ ವಿಶೇಷವಾಗಿ ದುಡಿದಿದ್ದಾರೆ. ಅದನ್ನು ಕನ್ನಡಿಗರೂ ಗುರುತಿಸಿದ್ದಾರೆ. ತುಳು ಭಾಷೆಗೆ ಸಂವಿಧಾನದ ಎಂಟನೇ ಪರಿಚ್ಚೇದದದಲ್ಲಿ ಸ್ಥಾನ ಸಿಗಬೇಕೆಂಬ ತುಳುವರ ಬೇಡಿಕೆಯನ್ನು ಕರ್ನಾಟಕ ಸರಕಾರವೇ ಶಿಫಾರಸ್ಸಿನೊಂದಿಗೆ ಕೇಂದ್ರ ಸರಕಾರಕ್ಕೆ ಕಳಿಸಿಕೊಟ್ಟಿದೆ. ದೆಹಲಿ ತುಳು ಸಿರಿಯೂ ಅದಕ್ಕಾಗಿ ಹೋರಾಟ ನಡೆಸುತ್ತಲೇ ಬಂದಿದೆ ಎಂದರು.

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ವಿಶ್ವ ಪ್ರಖ್ಯಾತ ಕಾಂತಾರ ಸಿನೆಮಾ ಖ್ಯಾತಿಯ ಮಾನಸಿ ಸುಧೀರ್‌ ಮಾತಾನಾಡಿ, ಕರಾವಳಿಯವರ ಜೀವನ ಕ್ರಮವೇ ಭಿನ್ನವಾಗಿದ್ದು, ಅದು ಅವರ ಸಂಸ್ಕೃತಿಯಲ್ಲಿ ಎದ್ದು ಕಾಣುತ್ತದೆ. ಕರಾವಳಿಯವರ ಭಾಷೆ, ಭೂತಾರಾಧನೆ, ವೇಷ ಭೂಷಣಗಳು ಎಲ್ಲವೂ ಗಮನಾರ್ಹವಾಗಿದೆ ಎಂದರು.

ಈ ವಿಶಿಷ್ಟ ಅಂಶಗಳನ್ನು ರಿಷಭ್‌ ಶೆಟ್ಟಿ ಸೂಕ್ಷ್ಮವಾಗಿ ಗಮನಿಸಿ ಕಾಂತಾರ ಸಿನೆಮಾದಲ್ಲಿ ಬಹಳ ಅದ್ಭುತವಾಗಿ ಹಿಡಿದಿಟ್ಟರು. ಅದರಿಂದ ಕರಾವಳಿ ಸಂಸ್ಕೃತಿಗೆ ವಿಶ್ವಮನ್ನಣೆ ದೊರಕಿದೆ ಎಂದ ಅವರು, ಕರಾವಳಿಯ ಉದ್ದಗಲಕ್ಕೂ ಇರುವ ವಿಶೇಷ ರೀತಿಯ ಆರೋಗ್ಯಕರ ವ್ಯಂಜನಗಳನ್ನು ನೆನಪಿಸಿಕೊಂಡರು ಹಾಗೂ ಭಾಷಾ ಬಾಂಧವ್ಯ, ಸಾಮಾಜಿಕ ಸಾಮರಸ್ಯದ ವಿಶೇಷತೆಯ ಒತ್ತು ಕೊಡುವ ನಿಟ್ಟಿನಲ್ಲಿ ತನ್ನ ಕೆಲವು ಅನುಭವಗಳನ್ನು ಸೊಗಸಾಗಿ ಹಂಚಿಕೊಂಡರು.

ಕಾರ್ಯಕ್ರಮದ ಅತಿಥಿಗಳಾಗಿ ಭಾಗವಹಿಸಿದ್ದ ಶ್ರೀಗಳಾದ ಈಶ್ವರ ಮಡಿವಾಳ್‌, ಕರಾವಳಿಯ ಸಾಮಾಜಿಕ ಇತಿಹಾಸಗಳನ್ನು ನೆನಪಿಸಿಕೊಂಡರು. ಜೆ.ಎನ್‌,ಯು. ನ ಕನ್ನಡ ಪೀಠದ ಅಧ್ಯಕ್ಷ ಪ್ರೊ. ವಿಶ್ವನಾಥ,ಕರಾವಳಿಯ ಅಡುಗೆ ಹಾಗೂ ಅಡುಗೆ ಭಟ್ಟರ ಕೈ ರುಚಿ ವಿಶ್ವ ಪ್ರಸಿದ್ಧ ಎಂದು ಹೇಳಿದರು.

ಡಾ. ಪುರುಷೋತ್ತಮ ಬಿಳಿಮಲೆ ಮಾತನಾಡಿ, ಕರಾವಳಿ ಬದುಕಿನಲ್ಲಿ ಹಾಸು ಹೊಕ್ಕಾಗಿರುವ ಮಣ್ಣಿನ ಗುಣ, ನೀರಿನ ಗುಣ ವಾತಾವರಣದಿಂದಾಗಿ ಕಂಗು, ತೆಂಗು, ವಿಶೇಷ ಬಗೆಯ ತರಕಾರಿ, ಸೂಜಿ ಮಲ್ಲಿಗೆ ಜಾಜಿಯಂತಹ ಹೂವುಗಳ ಬಗ್ಗೆ ಸಂಕ್ಷಿಪ್ತವಾಗಿ ಕೆಲವು ಸೂಕ್ಷ್ಮಗಳನ್ನು ತೆರೆದಿಟ್ಟರು.

ತುಳುಸಿರಿಯ ಉಪಾಧ್ಯಕ್ಷೆ ಮಾಲಿನಿ ಪ್ರಹ್ಲಾದ್‌ ಸ್ವಾಗತಿಸಿದರು. ಕಾರ್ಯದರ್ಶಿ ಉಡುಪಿ ಶ್ರೀಹರಿ ಭಟ್‌ ವಂದಿಸಿದರು. ಪೂಜಾರಾವ್‌ ಕರಾವಳಿಯ ಎಲ್ಲಾ ಭಾಷೆಗಳಲ್ಲಿ ಕಾರ್ಯಕ್ರಮ ನಿರೂಪಣೆ ಮಾಡಿದರು.

ಸ್ಥಳೀಯ ಕರಾವಳಿ ಕಲಾವಿದರಿಂದ ಸಂಗೀತ ಕಾರ್ಯಕ್ರಮದೊಂದಿಗೆ ಆರಂಭಗೊಂಡ ಕಾರ್ಯಕ್ರಮ ಕುದ್ರೋಳಿ ಗಣೇಶ್‌ ಅವರ ಮ್ಯಾಜಿಕ್‌ ಪ್ರದರ್ಶನದೊಂದಿಗೆ ಸಭೆ ಕೊನೆಗೊಂಡಿತು.

ದೊಡ್ಡ ಸಂಖ್ಯೆಯಲ್ಲಿ ಕರಾವಳಿಯ ಜನರು ತುಂಬು ಉತ್ಸಾಹದಿಂದ ಸಭೆಯಲ್ಲಿ ಭಾಗವಹಿಸಿದ್ದರು.

ವರದಿ: ಉಡುಪಿ ಶ್ರೀಹರಿ ಭಟ್‌

ಟಾಪ್ ನ್ಯೂಸ್

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.