Covid:5ತಿಂಗಳಲ್ಲಿ ಇದೇ ಮೊದಲ ಬಾರಿ 4 ಸಾವಿರ ಗಡಿ ದಾಟಿದ ಕೋವಿಡ್ ಸೋಂಕು: 15 ಮಂದಿ ಮೃತ್ಯು
Team Udayavani, Apr 5, 2023, 11:33 AM IST
ನವದೆಹಲಿ: ಕೋವಿಡ್(Covid) ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆಯಾಗಿದೆ. ಕಳೆದ 5 ತಿಂಗಳಲ್ಲೇ ಇಷ್ಟು ದೊಡ್ಡ ಪ್ರಮಾಣದಲ್ಲಿ ಸೋಂಕು ಪತ್ತೆಯಾಗಿದೆ. ಬುಧವಾರ ದೇಶದಲ್ಲಿ 4,435 ಮಂದಿಗೆ ಪಾಸಿಟಿವ್ ಕಾಣಿಸಿಕೊಂಡಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶ ಹೇಳಿದೆ.
ಕಳೆದ ವರ್ಷ ಸೆಪ್ಟೆಂಬರ್ 25 ರಂದು ಒಟ್ಟು 4,777 ಪ್ರಕರಣಗಳು ದಾಖಲಾಗಿದ್ದವು. ಇದಾದ ಬಳಿಕ 5 ತಿಂಗಳು 13 ದಿನಗಳ ನಂತರ ಒಂದೇ ದಿನದಲ್ಲಿ 4,435 ಮಂದಿಗೆ ಪಾಸಿಟಿವ್ ಕಾಣಿಸಿಕೊಂಡಿರುವುದು ಇದೇ ಮೊದಲು. ಇದರೊಂದಿಗೆ ಭಾರತದ ಕೋವಿಡ್19 ಪ್ರಕರಣಗಳ ಸಂಖ್ಯೆ 4.47 ಕೋಟಿಗೆ (4,47,33,719) ಏರಿದೆ. 15 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 5,30,916 ಕ್ಕೆ ಏರಿದೆ. ರೋಗದಿಂದ ಚೇತರಿಸಿಕೊಂಡವರ ಸಂಖ್ಯೆ 4,41,79,712 ಕ್ಕೆ ಏರಿದೆ. ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.
ಇದನ್ನು ಓದಿ: ಗುತ್ತಿಗಾರು: ಕೋಳಿ ಪದಾರ್ಥ ವಿಚಾರದಲ್ಲಿ ತಂದೆಯಿಂದಲೇ ಮಗನ ಕೊಲೆ
ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ತಲಾ ನಾಲ್ವರು ಮೃತಪಟ್ಟಿದ್ದು, ಛತ್ತೀಸ್‌ಗಢ, ದೆಹಲಿ, ಗುಜರಾತ್, ಹರಿಯಾಣ, ಕರ್ನಾಟಕ, ಪುದುಚೇರಿ ಮತ್ತು ರಾಜಸ್ಥಾನಯಲ್ಲಿ ತಲಾ ಓರ್ವರು ಮೃತಪಟ್ಟಿದ್ದಾರೆ.
ಇನ್ನು ದೇಶದಲ್ಲಿ 23,091 ನಲ್ಲಿ, ಸಕ್ರಿಯ ಪ್ರಕರಣಗಳಿವೆ. ಆರೋಗ್ಯ ಸಚಿವಾಲಯದ ವೆಬ್‌ಸೈಟ್ ಪ್ರಕಾರ, ಕೋವಿಡ್ ಚೇತರಿಕೆ ದರವು 98.76 ಪ್ರತಿಶತದಷ್ಟು ದಾಖಲಾಗಿದೆ. ದೈನಂದಿನ ಪಾಸಿಟಿವ್ ದರವು 3.38 ಶೇಕಡಾ ಮತ್ತು ವಾರದ ದರವು 2.79 ಶೇಕಡಾದಲ್ಲಿ ದಾಖಲಾಗಿದೆ.
ಇದುವರೆಗೆ ವ್ಯಾಕ್ಸಿನೇಷನ್ ಅಭಿಯಾನದಡಿಯಲ್ಲಿ 220.66 ಕೋಟಿ ಡೋಸ್ ಕೋವಿಡ್ ಲಸಿಕೆಯನ್ನು ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
MUST WATCH
ಹೊಸ ಸೇರ್ಪಡೆ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.