Election 2023: ಹೀಗೂ ಉಂಟು – ಶಾಸಕನಾದರೂ ಕೂಲಿ ಕೆಲಸ ಮಾಡಿದ್ದರು!
Team Udayavani, Apr 6, 2023, 8:07 AM IST
ಪುತ್ತೂರು: ಸುಳ್ಯ ಕ್ಷೇತ್ರದಲ್ಲಿ ಶಾಸಕರಾಗಿದ್ದ ದಿವಂಗತ ಬಾಕಿಲ ಹುಕ್ರಪ್ಪ ಮಾಜಿ ಶಾಸಕರಾದ ಬಳಿಕ ಜೀವನ ನಿರ್ವಹಣೆಗೆ ಕೂಲಿ ಕೆಲಸವನ್ನೇ ನಂಬಿದ್ದರು. ಅಧಿಕಾರ ಸಿಕ್ಕರೂ ಕಡು ಬಡತನದಲ್ಲೇ ಬದುಕಿದ ರಾಜಕಾರಣಿ ದ.ಕ. ಜಿಲ್ಲೆಯಲ್ಲಿ ಬೇರೆಲ್ಲೂ ಕಾಣಸಿಗಲಾರದು.
1983ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸುಳ್ಯದ ಶಾಸಕರಾಗಿ ಆಯ್ಕೆಯಾಗಿದ್ದರು. 19 ತಿಂಗಳು ಶಾಸಕರಾಗಿದ್ದರು. ಬಳಿಕ ಸರಕಾರ ಪತನಗೊಂಡು ಮರು ಚುನಾವಣೆ ನಿಗದಿಯಾಗಿತ್ತು. ತನ್ನ ಶಾಸಕಾವಧಿಯಲ್ಲಿ ಸರಕಾರದ ಪರವಾಗಿ ಲಾಸ್ ಏಂಜಲೀಸ್‌ನಲ್ಲಿ ನಡೆದ ಒಲಿಂಪಿಕ್ ಗೇಮ್ಸ್ ಅನ್ನು ಪ್ರತಿನಿಧಿಸಿದ್ದರು.
ಮಾಜಿ ಶಾಸಕರಾದ ಅನಂತರ ಬೇರೆ ಬೇರೆ ರಾಜಕೀಯ ಪಕ್ಷ ಸೇರಿ ಅದೃಷ್ಟ ಪರೀಕ್ಷೆಗೆ ಒಡ್ಡಿದ್ದರೂ ಗೆಲುವು ದಕ್ಕಲಿಲ್ಲ. ಹುಕ್ರಪ್ಪ ಕೇವಲ ಶಾಸಕನಾದದ್ದು ಮಾತ್ರವಲ್ಲ. ಮಾಜಿ ಶಾಸಕನಾದ ಬಳಿಕ ಗುತ್ತಿಗಾರು ಗ್ರಾ.ಪಂ. ಚುನಾವಣೆಗೆ ಸ್ಪರ್ಧಿಸಿ ಸದಸ್ಯರಾಗಿ, ಎರಡೂವರೆ ವರ್ಷ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದರು. ಅಚ್ಚರಿಯೆಂದರೆ ಶಾಸಕನಾದ ಬಳಿಕವೂ ಕೂಲಿ ಕೆಲಸ ಮಾಡಿಕೊಂಡು ಸಂಸಾರ ಸಾಗಿಸಿದ್ದರು. ಹುಕ್ರಪ್ಪ 1990ರ ಚುನಾವಣೆಯಲ್ಲಿ ಸ್ಪರ್ಧಿಸಿ ದಾಗ ಆಸ್ತಿ ಘೋಷಣೆ ಮಾಡುವಾಗ ಅವರಲ್ಲಿದ್ದದ್ದು 250 ರೂ. ಬ್ಯಾಂಕ್ ಬ್ಯಾಲೆನ್ಸ್, ಪತ್ನಿಯ ಚಿನ್ನದ ಕಿವಿಯೋಲೆ ಮೌಲ್ಯ 4,000 ರೂ. ಮತ್ತು ಸಣ್ಣದಾದ ಕೃಷಿ ಜಮೀನು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್ ಅಮಾನತು
Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ
ICC World Rankings: ಟೆಸ್ಟ್ ಬೌಲಿಂಗ್ ರ್‍ಯಾಂಕಿಂಗ್ ಬುಮ್ರಾ ಮರಳಿ ನಂ.1
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.