ELECTION; ವಿಜಯಪುರದಲ್ಲಿ ಬಸನಗೌಡ ಯತ್ನಾಳ್ ಗೆ ಟಿಕೆಟ್ ನೀಡಬೇಕು: ಪಾಲಿಕೆ ಸದಸ್ಯರ ಆಗ್ರಹ
Team Udayavani, Apr 6, 2023, 11:48 AM IST
ವಿಜಯಪುರ: ನಗರದ ಅಭಿವೃದ್ಧಿಗೆ ಹೊಸ ಶಕೆ ಆರಂಭಿಸಿದ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಟಿಕೆಟ್ ನೀಡುವಂತೆ ವಿಜಯಪುರ ಮಹಾನಗರ ಪಾಲಿಕೆ ಬಿಜೆಪಿ 18 ಸದಸ್ಯರು ಒಕ್ಕೊರಲಿನಿಂದ ಆಗ್ರಹಿಸಿದ್ದಾರೆ.
ಗುರುವಾರ ನಗರದಲ್ಲಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪಾಲಿಕೆ ಸದಸ್ಯರ ಪರವಾಗಿ ಮಾತನಾಡಿದ ಪ್ರೇಮಾನಂದ ಬಿರಾದಾರ, ಮಾಜಿ ಮಹಾಪೌರ ರಾಜೇಶ ದೇವಗಿರಿ ಇತರರು, ಬಿಜೆಪಿ ಪಕ್ಷದಿಂದ ಉಚ್ಛಾಟಿತರು, ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಗೆಲ್ಲುವ ಅವಕಾಶ ಇದ್ದರೂ ಹಲವು ಕ್ಷೇತ್ರಗಳಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮೂಲಕ ಸೋಲಿಗೆ ಕಾರಣವಾದವರು. ಇಂಥವರು ಅಭಿವೃದ್ಧಿ ಹರಿಕಾರ ಯತ್ನಾಳ ವಿರುದ್ಧ ಹಗುರವಾಗಿ ಮಾತನಾಡುವುದನ್ನು ನಿಲ್ಲಿಸಬೇಕು ಎಂದು ಎಚ್ಚರಿಸಿದರು.
ಪಾಲಿಕೆಯ 18 ಸದಸ್ಯರು ಒಕ್ಕೋರಲಿನಿಂದ ಯತ್ನಾಳ ಬೆಂಬಲಕ್ಕೆ ನಿಂತಿದ್ದೇವೆ. ಯತ್ನಾಳ ಅವರನ್ನು ಈ ಬಾರಿ 25 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಲು ನಗರದ ಜನತೆ ನಿರ್ಧಸಿದ್ದಾರೆ ಎಂದರು.
ಒಂದೊಮ್ಮೆ ಯತ್ನಾಳ ಹೊರತಾಗಿ ಬೇರೆಯವರಿಗೆ ಟಿಕೆಟ್ ನೀಡಿದರೂ ಪಕ್ಷನಿಷ್ಟರಾದ ನಾವು ಪಕ್ಷದ ಅಧಿಕೃತ ಅಭ್ಯರ್ಥಿ ಪರ ಕೆಲಸ ಮಾಡುತ್ತೇವೆ ಎಂದು ಸಮಜಾಯಿಷಿ ನೀಡಿದರು.
ರಾಜಕೀಯ ಅನುಭವಿ, ಹಿರಿಯ ನಾಯಕರಾದ ಬಸನಗೌಡ ಪಾಟೀಲ ಯತ್ನಾಳ ಅವರ ನೇರ ಮಾತುಗಾರಿಕೆ ಕೆಲವರಿಗೆ ಹಿಡಿಸದೇ ಇರಬಹುದು. ಆದರೆ ಪಕ್ಷ ಹಾಗೂ ರಾಜ್ಯ ಮಟ್ಟದಲ್ಲಿ ಯತ್ನಾಳ ಜನಪ್ರಿಯ ನಾಯಕ ಎನ್ನುವುದ ಎಲ್ಲರಿಗೂ ಗೊತ್ತಿದೆ ಎಂದರು.
ಮಹಾನಗರ ಪಾಲಿಕೆ ಚುನಾವಣೆ ಸಂದರ್ಭದಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಯಾವ ವಾರ್ಡನಲ್ಲೂ ಕನಿಷ್ಟ ಪ್ರಚಾರ ಮಾಡದ ಅಪ್ಪು ಪಟ್ಟಣಶಟ್ಟಿ ಅವರಿಗೆ, ಪಕ್ಷದ ಸಂಘಟನೆ ಸಂದರ್ಭದಲ್ಲಿ ತೊಡಗಿಸಿಕೊಳ್ಳದೇ ಮನೆಯಲ್ಲಿ ಕುಳಿವರಿಗೆ ಟಿಕೆಟ್ ನೀಡಬಾರದು ಎಂದು ಆಗ್ರಹಿಸಿದರು.
ಮಾಜಿ ಸಚಿವ ಅಪ್ಪು ಪಟ್ಟಣಶಟ್ಟಿ ಅವರಿಗೆ ಪಕ್ಷ ಬಬಲೇಶ್ವರ ಕ್ಷೇತ್ರಕ್ಕೆ ನೀಡಬೇಕು. ಪಟ್ಟಣಶಟ್ಟಿ ಅವರಿಗೆ ಬಬಲೇಶ್ವರ ಕ್ಷೇತ್ರಕ್ಕೆ ಟಿಕೆಟ್ ನೀಡಿದರೆ ಅವರ ಗೆಲುವಿಗೆ ಶ್ರಮಿಸಲು ನಾವೂ ಬಬಲೇಶ್ವರ ಕ್ಷೇತ್ರಕ್ಕೆ ಹೋಗಿ ಪ್ರಚಾರ ಮಾಡಿ, ಗೆಲ್ಲಿಸಲಿದ್ದೇವೆ ಎಂದರು.
ಪಾಲಿಕೆ ಸದಸ್ಯರಾದ ಎಂ.ಎಸ್. ಕರಡಿ, ರಾಜು ಜಾಧವ, ಜವಾಹರ ಗೋಸಾವಿ, ರಾಜಶೇಖರ ಕುರಿ, ಮಲ್ಲಿಕಾರ್ಜುನ ಗಡಗಿ, ಕಿರಣ ಪಾಟೀಲ, ವಿಠ್ಠಲ ಹೊಸಪೇಟಿ, ಚಂದ್ರು ಚೌಧರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
High Court: ಗುರು ರಾಘವೇಂದ್ರ ಬ್ಯಾಂಕ್ ಅಧ್ಯಕಗೆ ಜಾಮೀನು ನಿರಾಕರಣೆ
Arrested: ಬಿಹಾರದ ಬೆಡ್‌ಶೀಟ್ ಗ್ಯಾಂಗ್‌ನ 8 ಮಂದಿ ಸೆರೆ
Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್; ಆರೋಪಿ ಸೆರೆಗೆ 3 ತಂಡ ರಚನೆ
Bomb Threat: ಹೋಟೆಲ್, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.